15 ತಿಂಗಳ ಮಗುವಿನ‌ ಅಪರೂಪದ ಕಾಯಿಲೆ ಗುಣಪಡಿಸಲು ಮೋದಿ ಸಹಾಯ ಕೋರಿದ ಸಿಎಂ ಸಿದ್ದರಾಮಯ್ಯ

Date:

15 ತಿಂಗಳ ಮಗುವೊಂದು ‘ಸ್ಪೈನಲ್ ಮಸ್ಕ್ಯುಲರ್ ಅಟ್ರೋಪಿ’ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದು, ಮಗುವಿನ ಕಾಯಿಲೆ ಗುಣಪಡಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಸಹಾಯಸ್ತವನ್ನು ಸಿಎಂ ಸಿದ್ದರಾಮಯ್ಯ ಅವರು ಕೋರಿದ್ದಾರೆ.

ಕೇಂದ್ರ ಸರ್ಕಾರವು ಈ ಪ್ರಕರಣವನ್ನು ಮಾನವೀಯ ನೆಲೆಗಟ್ಟಿನಲ್ಲಿ ವಿಶೇಷ ಪ್ರಕರಣವೆಂದು ಪರಿಗಣಿಸುವಂತೆ ಕೋರಿ ಮೋದಿ ಅವರಿಗೆ ಪತ್ರ ಬರೆದಿರುವ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಮನವಿ ಏನು?

“ಪ್ರಧಾನಿ ಮೋದಿ ಅವರೇ, ಕರ್ನಾಟಕದ 15 ತಿಂಗಳ ಮೌರ್ಯ ಎಂಬ ಪುಟ್ಟ ಕಂದ ‘ಸ್ಪೈನಲ್ ಮಸ್ಕ್ಯುಲರ್ ಅಟ್ರೋಪಿ’ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾನೆ. ಈ ಮಗುವಿನ ಖಾಯಿಲೆಯನ್ನು ಗುಣಪಡಿಸಬಹುದಾದ ಝೋಲ್ಗೆನ್‌ಸ್ಮ ಎಂಬ ಚುಚ್ಚುಮದ್ದನ್ನು ವಿದೇಶದಿಂದ ಆಮದು ಮಾಡಿಕೊಳ್ಳಬೇಕಾಗಿದ್ದು, ಅದರ ಬೆಲೆ ರೂ. 17.5 ಕೋಟಿ ಇದೆ. ಕೇಂದ್ರ ಸರ್ಕಾರವು ಇದನ್ನು ಮಾನವೀಯ ನೆಲೆಗಟ್ಟಿನಲ್ಲಿ ವಿಶೇಷ ಪ್ರಕರಣವೆಂದು ಪರಿಗಣಿಸಿ ಆಮದು ಸುಂಕದಿಂದ ವಿನಾಯಿತಿ ನೀಡುವ ಮೂಲಕ ಕರುನಾಡಿನ ಪುಟ್ಟ ಕಂದನ ಪ್ರಾಣ ಉಳಿಸಲು ನೆರವಾಗಬೇಕು ಎಂದು ಮನವಿ ಮಾಡುತ್ತಿದ್ದೇನೆ” ಎಂದು  ಸಿದ್ದರಾಮಯ್ಯ ಕೋರಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪ್ಪಟ ಕನ್ನಡತಿ ಅಪರ್ಣಾ | ಶುದ್ಧ, ಅಶುದ್ಧ ಅನ್ನೋದು ಭಾಷಾ ಭಯೋತ್ಪಾದನೆ

ನಿರೂಪಕಿ, ನಟಿ ಅಪರ್ಣಾ ಮೊನ್ನೆ ತೀರಿ ಹೋದಾಗ ಆಕೆಗೆ ಐವತ್ತೇಳರ ಹರೆಯ...

ಬೀದರ್‌ | ಕನ್ನಡ ನಾಮಫಲಕ ಹಾಕಿ ಇಂಗ್ಲಿಷ್ ಕಲಿಸುತ್ತಿರುವುದು ಆತಂಕ ತರಿಸಿದೆ : ಡಾ.ಪುರುಷೋತ್ತಮ ಬಿಳಿಮಲೆ

ನಮ್ಮೆಲ್ಲರ ನಿರಾಸಕ್ತಿ, ಅನ್ಯ ಭಾಷೆಯ ವ್ಯಾಮೋಹದಿಂದ ನಮ್ಮ ಕನ್ನಡ ಭಾಷೆ ಸೊರಗುತ್ತಿದೆ....

ಬಸವರಾಜ ರಾಯರೆಡ್ಡಿ ಮಾಹಿತಿ ತಿಳಿದುಕೊಂಡು ಮಾತನಾಡಲಿ: ದಿನೇಶ್ ಗೂಳಿಗೌಡ

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಕಷ್ಟದಲ್ಲಿದೆ ಎಂಬ ಮುಖ್ಯಮಂತ್ರಿಗಳ ಆರ್ಥಿಕ...

ಬಾಲ್ಯ ವಿವಾಹ | ದೇಶದಲ್ಲಿ ಕರ್ನಾಟಕ ಎರಡನೇ ಸ್ಥಾನ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕಳವಳ

ಬಾಲ್ಯ ವಿವಾಹ ವಿಚಾರದಲ್ಲಿ ಕರ್ನಾಟಕವು ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಇದು ದುರದೃಷ್ಟಕರ...