RSS ನಿಷೇಧ; ಪ್ರಿಯಾಂಕ್ ಖರ್ಗೆ ಹೇಳುವುದರಲ್ಲಿ ತಪ್ಪೇನಿದೆ: ಸಿಎಂ ಸಿದ್ದರಾಮಯ್ಯ

Date:

ಸರ್ಕಾರಿ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧ ಮಾಡಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ. ಇಂಥಾ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.

- Advertisement -

ಬುಧವಾರ ಮೈಸೂರು ಏರ್ ಪೋರ್ಟ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬರುತ್ತಿದ್ದು ಈ ಕುರಿತ ಆಡಿಯೋ ಕೂಡ ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಸರ್ಕಾರಿ ಸ್ಥಳಗಳಲ್ಲಿ RSS ನಡೆಸುವ ಎಲ್ಲಾ ಚಟುವಟಿಕೆಗಳಿಗೆ ನಿಷೇಧ ಹೇರಬೇಕು: ಸಿಎಂಗೆ ಪ್ರಿಯಾಂಕ್ ಖರ್ಗೆ ಪತ್ರ

“ತಮಿಳುನಾಡಿನಲ್ಲಿ ಆರ್‌ಎಸ್‌ಎಸ್‌ ನಿಷೇಧದ ಬಗ್ಗೆ ಮಾಹಿತಿ ಪಡೆಯಲು ಸೂಚನೆ ನೀಡಲಾಗಿದೆ. ತಮಿಳುನಾಡಿನಲ್ಲಿ ಯಾವ ರೀತಿ ನಿಷೇಧ ಹೇರಲಾಗಿದೆ ಎಂಬ ಬಗ್ಗೆ ಮಾಹಿತಿ ತರಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ. ವರದಿ ಬಂದ ನಂತರ ಅದನ್ನು ಪರಿಶೀಲಿಸಲಾಗುವುದು” ಎಂದು ಹೇಳಿದರು.

ಹಾಗೆಯೇ, ಪ್ರಿಯಾಂಕ್ ಖರ್ಗೆ ಅವರಿಗೆ ರಕ್ಷಣೆ ಒದಗಿಸಲಾಗುವುದು ಎಂದೂ ತಿಳಿಸಿದರು. “ದುಷ್ಟ ಶಕ್ತಿಗಳು ಯಾವಾಗಲೂ ಇಂಥದ್ದೇ ಕೆಲಸ ಮಾಡುವುದು. ಬೆದರಿಕೆಗಳಿಗೆ ಪ್ರಿಯಾಂಕ್ ಅವರು ಹೆದರುವುದಿಲ್ಲ. ನಾನೂ ಹೆದರುವುದಿಲ್ಲ” ಎಂದು ಮುಖ್ಯಮಂತ್ರಿ ಹೇಳಿದರು.

ಇನ್ನು ಈ ಸಂದರ್ಭದಲ್ಲೇ, “ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ತಡವಾಗುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಬೆಂಗಳೂರು ನಗರ ಬಿಟ್ಟರೆ ಬೇರೆಲ್ಲಿಯೂ ಶೇಕಡಾವಾರು ಪ್ರಮಾಣದಲ್ಲಿ ಕಡಿಮೆಯಾಗಿಲ್ಲ” ಎಂದರು.

ಎಲ್ಲ ಶಾಸಕರಿಗೂ ಅನುದಾನ

ಶಾಸಕರಿಗೆ ಅನುದಾನ ನೀಡುವಲ್ಲಿ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಉಚ್ಚ ನ್ಯಾಯಾಲಯಕ್ಕೆ ಶ್ರೀನಿವಾಸಪುರ ಶಾಸಕರು ಮೊರೆ ಹೋಗಿರುವ ಬಗ್ಗೆ ಮಾತನಾಡಿದ ಸಿಎಂ, “ಜೆಡಿಎಸ್‌ನವರು ನಮ್ಮ ಶಾಸಕರಿಗೆ ಅನುದಾನ ನೀಡಿದ್ದರೇ” ಎಂದು ಪ್ರಶ್ನಿಸಿದರು. “ರಾಜ್ಯದ ಸರ್ವತೋಮುಖ ಅಭಿವೃದ್ಧಿಯಾಗಬೇಕಿದ್ದು, ಎಲ್ಲರಿಗೂ ಅನುದಾನ ಒದಗಿಸಲಾಗುತ್ತಿದೆ” ಎಂದರು. “ಮೈಸೂರಿನಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಪರಿಶೀಲಿಸಲಾಗುವುದು”ಎಂದು ಭರವಸೆ ನೀಡಿದರು.

ಬಿಜೆಪಿಯವರು ತಾಕತ್ತಿದ್ದರೆ ಆರ್‌ಎಸ್‌ಎಸ್‌ ಮೇಲೆ ನಿಷೇಧ ಹೇರಲಿ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಚುನಾವಣಾ ಸಂದರ್ಭದಲ್ಲಿಯೂ ಬಿಜೆಪಿಯವರು ತಾಕತ್ತಿದ್ದರೆ ಬನ್ನಿ ಎಂದಿದ್ದರು. ಆದರೆ ಸೋತು ಹೋದರು” ಎಂದು ಲೇವಡಿ ಮಾಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...