ವಿಜಯಪುರ | ಸಿದ್ದರಾಮಯ್ಯ ಸಿಎಂ ಆಗಿ ಅಧಿಕಾರ ಸ್ವೀಕಾರ; ಕುರುಬ ಸಂಘದಿಂದ ವಿಜಯೋತ್ಸವ

Date:

Advertisements

ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಅಧಿಕಾರ ಸ್ವೀಕರಿಸಿದ್ದರಿಂದ ವಿಜಯಪುರ ಕುರುಬ ಸಂಘದಿಂದ ವಿಜಯೋತ್ಸವ ಆಚರಿಸಿದರು.

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ 135 ಸ್ಥಾನಗಳ ಬಹುಮತ ಪಡೆಯುವ ಮೂಲಕ ಅಧಿಕಾರಕ್ಕೆ ಬಂದಿದೆ. ಶನಿವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಸಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ಉಪಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್‌ ಪ್ರಮಾಣವಚನ ಸ್ವೀಕರಿಸಿದರು.

ಈ ಹಿನ್ನೆಲೆ ಕುರುಬ ಸಂಘ ವಿಜಯಪುರ ನಗರ ಘಟಕದ ವತಿಯಿಂದ ನಗರದ ಶಿವಾಜಿ ವೃತ್ತ, ರಾಮ ಮಂದಿರ, ಸಿದ್ದೇಶ್ವರ ದೇವಸ್ಥಾನದ ಎದುರು ಪಟಾಕಿ ಸಿಡಿಸಿ, ಸಿಹಿ ಹಂಚಿ ಬಳಿಕ ಗಾಂಧಿ ಚೌಕ್‌ ಮಾರ್ಗವಾಗಿ ಕನಕದಾಸ ವೃತ್ತದ ವರೆಗೂ ಬೈಕ್‌ ರ‍್ಯಾಲಿ ನಡೆಸಿದರು.

Advertisements

ಈ ವೇಳೆ ಕುರುಬ ಸಂಘ ವಿಜಯಪುರ ನಗರಘಟಕದ ಅಧ್ಯಕ್ಷ ರಾಜು ಕಗ್ಗೋಡ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಹಿಂದೆ ಐದು ವರ್ಷಗಳ ಕಾಲ ಸುದೀರ್ಘ ಮತ್ತು ಜನಪರ ಆಡಳಿ ನೀಡಿದ್ದ ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಬಾರಿಯೂ ಅವರು ನುಡಿದಂತೆ ಎಲ್ಲ ಭರವಸೆಗಳನ್ನು ಈಡೇರಿಸಿ ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲಿ” ಎಂದು ಆಶಿಸಿದರು.

 ಸಂಭ್ರಮಾಚರಣೆಯಲ್ಲಿ ಶ್ರೀಕಾಂತ, ಸಂಗೋಗಿ, ರಮೇಶ, ಮಹಾಂತೇಶ ದೇವೂರ, ಸುರೇಶ ಡೊಂಬಳೆ, ನರೇಶ ಮಾಶ್ಯಾಳ, ಲಕ್ಷ್ಮಣ ಇಂಡಿ, ದೇವಕಾಂತ ಬಿಜ್ಜರಗಿ, ಪರಶುರಾಮ, ತರಲಘಟ್ಟ, ರಾಜು ಭಿಸೆ ಸೇರಿದಂತೆ ಹಲವರು ಭಾಗವಹಿಸಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ; ಸೋಮವಾರವೂ ಮಳೆಯಾಗುವ ಸಾಧ್ಯತೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

Download Eedina App Android / iOS

X