ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾಗೃತಿ ಅರಿವು ಸಪ್ತಾಹದ ಅಂಗವಾಗಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವಾಲಯದ ಅಧಿಕಾರಿ, ಸಿಬ್ಬಂದಿಗೆ ಸೋಮವಾರ ಪ್ರತಿಜ್ಞಾವಿಧಿ ಬೋಧಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಹಾಗೂ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್ ಮತ್ತಿತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.