ಸಿದ್ದರಾಮಯ್ಯ ಅವರಷ್ಟು ನೀಚತನಕ್ಕೆ ನಾವು ಇಳಿಯುವುದಿಲ್ಲ: ಪ್ರಲ್ಹಾದ ಜೋಶಿ ಕಿಡಿ

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗಂತೂ ಮಾನ, ಮರ್ಯಾದೆ ಇಲ್ಲ. ಹಾಗಂತ ಬೇರೆಯವರಿಗೂ ಇಲ್ಲ ಎಂದೇ ಸಿದ್ದರಾಮಯ್ಯ ಭಾವಿಸಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಕಿಡಿಕಾರಿದರು.

ನವಲಗುಂದ ಕಾಂಗ್ರೆಸ್ ಕಾರ್ಯಕ್ರಮದ ಭಾಷಣದಲ್ಲಿ ತಮ್ಮ ವಿರುದ್ಧ ಏಕ ವಚನದಲ್ಲಿ ಮಾತನಾಡಿದ್ದಕ್ಕೆ ಗರಂ ಆಗಿರುವ ಜೋಶಿ, ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡುತ್ತ ಸಿಎಂ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡರು.

“ನೀವು ಹೇಗೆ ಪ್ರಮಾಣವಚನ ಸ್ವೀಕರಿಸಿದ್ದೀರಿ ಹಾಗೆಯೇ ನಾನು ಕೂಡ ಪ್ರಮಾಣವಚನ ಸ್ವೀಕರಿಸಿರುವೆ. ಸಿದ್ದರಾಮಯ್ಯ ಅವರಷ್ಟು ನೀಚತನಕ್ಕೆ ನಾವು ಇಳಿಯುವುದಿಲ್ಲ. ಆಡಳಿತ, ಅಧಿಕಾರ ಅವರಿಗೆ ಜಾಸ್ತಿ ಇರಬಹುದು. ಆದರೆ, ಸಂವಿಧಾನದಲ್ಲಿ ಕೇಂದ್ರ ಸರ್ಕಾರದ ಒಬ್ಬ ಮಂತ್ರಿ ಹಾಗೂ ರಾಜ್ಯದ ಮುಖ್ಯಮಂತ್ರಿ ಸಮಾನರು, ಇದನ್ನು ಸಿದ್ದರಾಮಯ್ಯ ತಿಳಿಯಲಿ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿಪಕ್ಷ ನಾಯಕ ಅಶೋಕ್ ಮತ್ತು ಸಾರ್ವಜನಿಕ ಸಭ್ಯತೆ

“ಯಾವುದೇ ಪೂರ್ವಾಪರ ತಿಳಿದುಕೊಳ್ಳದೆ ಉಡಾಫೆ ಹೊಡಿತಾರೆ. ಕಾಂಗ್ರೆಸ್ ಎಲ್ಲ ಸಂದರ್ಭದಲ್ಲಿ ಕಳಸಾ ಬಂಡೂರಿ ಯೋಜನೆಗೆ ತೊಡಕುಂಟು ಮಾಡಿದೆ. ಸೋನಿಯ ಗಾಂಧಿ ಅವರು ಗೋವಾಕ್ಕೆ ಹೋಗಿ ಹನಿ ನೀರು ಕೊಡಲ್ಲ ಎಂದಿದ್ದರು. ಇವರಿಗೆ ಎಷ್ಟು ನಾಲಿಗೆ ಇದೆ. ಕಾಂಗ್ರೆಸ್ ನವರು ವಿವೇಚನ ರಹಿತವಾಗಿ ಮಾತನಾಡುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

ಮಂಡ್ಯ ಕ್ಷೇತ್ರಕ್ಕೆ ಸುಮಲತಾ ವಿಚಾರವಾಗಿ ಮಾತನಾಡಿ, “ಮಂಡ್ಯ ವಿಚಾರದಲ್ಲಿ ಎಲ್ಲರಿಗೂ ಸಮಾಧಾನವಾಗುವ ಪರಿಹಾರ ಕಂಡು ಹಿಡಿಯುತ್ತೇವೆ. ಅಧಿವೇಶನದಲ್ಲಿ ಸುಮಲತಾ ಜೊತೆಗೆ ಮಾತನಾಡಿದ್ದೇನೆ. ಒಂದು ಮನೆಯಿಂದ ಇನ್ನೊಂದು ಮನೆಗೆ ಮದುವೆ ಸಂಬಂಧ ಆದ ಕೂಡಲೇ ಎಲ್ಲಾ ಹೊಂದಾಣಿಕೆ ಆಗುವುದಿಲ್ಲ. ದೊಡ್ಡ ಪಕ್ಷಗಳು, ದೊಡ್ಡ ವ್ಯವಸ್ಥೆ, ಕೋಟ್ಯಂತರ ಜನ, ಲಕ್ಷಾಂತರ ಜನರ ಹೊಂದಾಣಿಕೆಗೆ ಸಮಯಬೇಕು” ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X