ಸಿದ್ದರಾಮಯ್ಯ ಸ್ಪರ್ಧಾಕ್ಷೇತ್ರದ ಕುತೂಹಲಕ್ಕೆ ತೆರೆ: ವರುಣಾ ಮತ್ತು ಕೋಲಾರದಿಂದ ಸ್ಪರ್ಧೆ

Date:

  • ಈ ಬಾರಿ ಕಾಂಗ್ರೆಸ್ ಏಕಾಂಗಿಯಾಗಿ ಅಧಿಕಾರಕ್ಕೆ ಬರುತ್ತದೆ
  • ಹುಟ್ಟೂರಿನಲ್ಲೇ ನನ್ನ ಕೊನೆಯ ಚುನಾವಣೆ ಎದುರಿಸುತ್ತೇನೆ

ಕಡೆಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪರ್ಧಾಕ್ಷೇತ್ರದ ಕುತೂಹಲಕ್ಕೆ ತೆರೆ ಎಳೆದಿದ್ದಾರೆ. ತಾವು ವರುಣಾ ಹಾಗೂ ಕೋಲಾರ ಕ್ಷೇತ್ರಗಳೆರಡರಿಂದಲೂ ಸ್ಪರ್ಧಿಸುವುದಾಗಿ ಹೇಳಿದ್ದಾರೆ.

ಎಚ್‌ಡಿ ಕೋಟೆಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ವರುಣಾ ಕ್ಷೇತ್ರದಿಂದ ಗೆದ್ದಾಗಲೇ ನಾನು ಸಿಎಂ ಆಗಿದ್ದು.

ವರುಣಾ ಕ್ಷೇತ್ರವೇ ನನ್ನ ಹುಟ್ಟೂರು. ನನ್ನ ಕೊನೆ ಚುನಾವಣೆ ಹುಟ್ಟೂರಿನಲ್ಲಿ ಆಗಬೇಕೆಂಬ ಆಸೆ ಇದೆ, ಹಾಗಾಗಿ ಇಲ್ಲಿಂದ ಸ್ಪರ್ಧೆ ಮಾಡುತ್ತಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು.

ಯಾವುದೇ ಒಂದು ಕ್ಷೇತ್ರ ಲಕ್ಕಿ ಹಾಗೂ ಅನ್‌ಲಕ್ಕಿ ಅಲ್ಲ. ನನಗೆ ಅದರ ಮೇಲೆ ನಂಬಿಕೆಯೂ ಇಲ್ಲ. ಕೋಲಾರ ಕ್ಷೇತ್ರದ ಜನರಿಂದ ಹೆಚ್ಚು ಒತ್ತಡ ಬರುತ್ತಿದೆ. ಹೀಗಾಗಿ ವರುಣಾ ಜತೆಗೆ ಕೋಲಾರದಿಂದಲೂ ಸ್ಪರ್ಧೆ ಮಾಡುತ್ತೇನೆ ಎಂದು ವಿಪಕ್ಷ ನಾಯಕರು ಹೇಳಿದರು.

ಕಳೆದ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮ್ಯಾಚ್ ಫಿಕ್ಸ್ ಮಾಡಿಕೊಂಡಿತ್ತು. ಈ ಚುನಾವಣೆಯಲ್ಲೂ ಅದರ ಸಾಧ್ಯತೆ ಇದೆ. ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡರೂ ಅಚ್ಚರಿ ಇಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.

ಇನ್ನು ಕಾಂಗ್ರೆಸ್ ಹೈಕಮಾಂಡ್ ಗಳ ಜತೆ ಮಾತನಾಡಿದ್ದೇನೆ ಎಂಬ ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ತಿರುಗೇಟು ನೀಡಿದ ಸಿದ್ದರಾಮಯ್ಯ, ನಮ್ಮ ಹೈಕಮಾಂಡ್ ಜತೆಗೆ ಯಾರೂ ಮಾತನಾಡಿಲ್ಲ. ಮಾತನಾಡುವುದೂ ಇಲ್ಲ. ಈ ಬಾರಿ ನಾವು ಏಕಾಂಗಿಯಾಗಿ ಅಧಿಕಾರಕ್ಕೆ ಬರುತ್ತೇವೆ ಎಂದರು.

ಈ ಸುದ್ದಿ ಓದಿದ್ದೀರಾ? :ಬಿಎಸ್‌ವೈ ಮನೆ ಮೇಲೆ ಕಲ್ಲು ತೂರಾಟ | ಕೈ ನಾಯಕರ ಬಂಧನ: ಸಿಎಂ ಬೊಮ್ಮಾಯಿ

ಯಡಿಯೂರಪ್ಪ ನಿವಾಸದ ಮೇಲಿನ ಕಲ್ಲು ತೂರಾಟದ ವಿಚಾರದ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಬೊಮ್ಮಾಯಿಯವರು ಇದು ಕಾಂಗ್ರೆಸ್‌ನವರ ಕೃತ್ಯ ಎನ್ನುತ್ತಾರೆ. ಯಡಿಯೂರಪ್ಪನವರೇ ಕಾಂಗ್ರೆಸ್ ನವರು ಅಲ್ಲ ಅಂತ ಹೇಳಿದ್ದಾರೆ. ಯಡಿಯೂರಪ್ಪನವರಿಗಿಂತ ಬೊಮ್ಮಾಯಿಗೆ ಈ ವಿಚಾರ ಹೆಚ್ಚು ಗೊತ್ತೇ? ಎಂದು ಸಿದ್ದರಾಮಯ್ಯ ಸಿಎಂ ಪ್ರಶ್ನಿಸಿದರು.

ಮೀಸಲಾತಿಗೆ ಕಾಂಗ್ರೆಸ್ ವಿರೋಧ ಇರಲಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮೀಸಲಾತಿ ಕೊಡಬೇಕಿತ್ತು. ಮೂರುವರೆ ವರ್ಷದಿಂದ ಈ ಬಗ್ಗೆ ಸುಮ್ಮನಿದ್ದ ಬಿಜೆಪಿ ಈಗ ಏನು ಮಾಡುತ್ತಿದೆ? ಎಂದ ಸಿದ್ದರಾಮಯ್ಯ ಒಳಮೀಸಲಾತಿ ನೀಡಲು ಕಾಂಗ್ರೆಸ್ ಒಲವು ತೋರಿಸಿತ್ತು ಎಂದರು.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಸ್ಟ್ರೇಲಿಯನ್ ಹೂಡಿಕೆದಾರರಿಗೆ ಸಿಎಂ ಸಿದ್ದರಾಮಯ್ಯ ಆಹ್ವಾನ

ರಾಜ್ಯದ ಮೂಲಸೌಕರ್ಯ ಅಭಿವೃದ್ಧಿ ವಲಯದಲ್ಲಿ ಹೂಡಿಕೆ ಗ್ರೀನ್ ಫೀಲ್ಡ್...

ಸರ್ಕಾರದ ಉಚಿತ ಕೊಡುಗೆಗಳು ಜನರಲ್ಲಿ ಖರೀದಿಸುವ ಶಕ್ತಿ ಹೆಚ್ಚಿಸುತ್ತವೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರಿನಲ್ಲಿ ನಡೆಯುತ್ತಿರುವ ಬೆಂಗಳೂರು ಟೆಕ್‌ ಸಮ್ಮಿಟ್‌ನಲ್ಲಿ ಇನ್ಫೋಸಿಸ್‌ ಸ್ಥಾಪಕಾಧ್ಯಕ್ಷ ನಾರಾಯಣ ಮೂರ್ತಿ...

ಅನ್ ಬಾಕ್ಸಿಂಗ್ ಬಿಎಲ್‌ಆರ್‌ ಹಬ್ಬಕ್ಕೆ ಚಾಲನೆ ನೀಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ‘ಅನ್‌ಬಾಕ್ಸಿಂಗ್ ಬೆಂಗಳೂರು ಫೌಂಡೇಷನ್’ ವತಿಯಿಂದ ಡಿಸೆಂಬರ್‌ 1ರಿಂದ...

ಅರ್ಹ ರೈತರಿಗೆ ತಲಾ 2000 ರೂ.ವರೆಗೆ ಬೆಳೆ ಪರಿಹಾರ: ಸಿದ್ದರಾಮಯ್ಯ ಘೋಷಣೆ

ಕೇಂದ್ರದಿಂದ ಹಣ ಬರುವವರೆಗೂ ಕಾಯಲು ಸಾಧ್ಯವಿಲ್ಲ: ಸಿಎಂ ಮೊದಲನೇ ಕಂತಿನಲ್ಲಿ...