ಸಿದ್ದರಾಮಯ್ಯ ತಮಗೆ ಖುಷಿ ಬಂದ ಹಾಗೆ ಜಾತಿ ಗಣತಿ ವರದಿ ಬರೆಸಿಕೊಂಡಿದ್ದಾರೆ: ಬಿ ವೈ ವಿಜಯೇಂದ್ರ ಆರೋಪ

Date:

Advertisements
  • ಕಾಂತರಾಜ್ ಸಲ್ಲಿಸಿದ್ದು ಅರೆಬೆಂದ ವರದಿ: ಬಿ ವೈ ವಿಜಯೇಂದ್ರ  
  • ‘ಮುಂಬರುವ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸಲಿದ್ದಾರೆ’

ಸಿದ್ದರಾಮಯ್ಯ ಅವರು ತಮಗೆ ಖುಷಿ ಬಂದ ಹಾಗೆ ಜಾತಿ ಗಣತಿ ವರದಿ ಬರೆಸಿಕೊಂಡಿದ್ದಾರೆ. ಹೀಗಾಗಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜ್ ಸಲ್ಲಿಸಿದ್ದು ಅರೆಬೆಂದ ವರದಿ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ಆರೋಪ ಮಾಡಿದರು.

ಚಿತ್ರದುರ್ಗ ಸುದ್ದಿಗಾರರ ಜೊತೆ ಮಾತನಾಡಿ, “ವೀರಶೈವ-ಲಿಂಗಾಯತ ಎಂಬ ಭೇದ ಮಾಡಿ ಸಮುದಾಯ ಒಡೆಯುವ ಹುನ್ನಾರಕ್ಕೆ ಪ್ರಯತ್ನಿಸಿದ್ದ ಸಿದ್ದರಾಮಯ್ಯ ಕೊನೆಗೆ ವಿಫಲರಾಗಿದ್ದರು. ಈಗ ಜಾತಿ ಗಣತಿ ವರದಿ ಮೂಲಕ ಇಂತಹದೇ ಕೆಲಸ ಮಾಡುತ್ತಿದ್ದಾರೆ. ಇದಕ್ಕೆಲ್ಲ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸಲಿದ್ದಾರೆ” ಎಂದರು.

“ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಆಯೋಗ ರಚನೆಯಾಗಿತ್ತು. ಸರ್ಕಾರದ ಸುಮಾರು ₹150 ಕೋಟಿ ಖರ್ಚು ಮಾಡಿದೆ. ಜನರ ಮನೆಗೆ ಭೇಟಿ ನೀಡದೇ ಹವಾನಿಯಂತ್ರಿತ ಕೊಠಡಿಯಲ್ಲಿ ಕುಳಿತು ವರದಿ ಸಿದ್ಧಪಡಿಸಲಾಗಿದೆ” ಎಂದು ಕಿಡಿಕಾರಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇಎಸಿಗೆ ಅದಾನಿ ಆಪ್ತನ ನೇಮಕ; ಪ್ರಧಾನಿ ಮೋದಿ ಯಾರ ಪ್ರಧಾನ ಸೇವಕ?

“ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಯಾವುದೇ ಹೊಸ ಯೋಜನೆ ಜಾರಿಗೆ ಬಂದಿಲ್ಲ. ಗ್ಯಾರಂಟಿ ಹೆಸರಿನಲ್ಲಿ ಜನರ ಮೂಗಿಗೆ ತುಪ್ಪ ಸವರಿ ದಿಕ್ಕು ತಪ್ಪಿಸಲು ಮುಂದಾಗಿದ್ದಾರೆ. ಸರ್ಕಾರದಲ್ಲಿ ವರ್ಗಾವಣೆ ದಂಧೆ, ಭ್ರಷ್ಟಾಚಾರ ಅವ್ಯಾಹತವಾಗಿ ನಡೆಯುತ್ತಿದೆ” ಎಂದು ವಾಗ್ದಾಳಿ ನಡೆಸಿದರು.

“ಮುಖ್ಯಮಂತ್ರಿ ಕುಟುಂಬದ ಹಸ್ತಕ್ಷೇಪಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೊ ಹಾಗೂ ಆದಾಯ ತೆರಿಗೆ ಇಲಾಖೆ (ಐಟಿ) ದಾಳಿಯಲ್ಲಿ ಪತ್ತೆಯಾದ ಅಪಾರ ಹಣವೇ ಸರ್ಕಾರದ ಭ್ರಷ್ಟಾಚಾರಕ್ಕೆ ಸಾಕ್ಷಿ” ಎಂದು ಕುಟುಕಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಪುಣ್ಯಾತ್ಮ,,ಜಾತಿ ಗಣತಿ ಮನೆ ಮನೆಗೆ ಹೋಗಿ ಜನರು ಹೇಳಿದ ಜಾತಿ ಧರ್ಮ ದಾಖಲಿಸಿದ್ದಾರೆ,,, ಜಾತಿ ಗಣತಿ ಭಯ ಕೆಲವೇ ಮೇಲ್ಜಾತಿಯ ಜನರಿಗೆ ಯಾಕೆ ಭಯ ಆಗುತ್ತಿದೆ,,, ಹೆಚ್ಚಿನ ಸಂಖ್ಯೆಯಲ್ಲಿ ಇರುವ ಅಧಿಕಾರ ವಂಚಿತರು ತಮ್ಮ ರಾಜಕೀಯ ಹಕ್ಕುಗಳನ್ನು ಕೇಳಿದರೆ ನಿಮ್ಮ ಆಟಗಳು ನಡೆಯಲಿಕ್ಕೆ ಇಲ್ಲವೆಂದು ದುರಾಲೋಚನೆ ಅಲ್ಲವಾ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಗಸ್ಟ್ 26ರಿಂದ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಾದ್ಯಂತ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 26ರಿಂದ ಭಾರೀ ಮಳೆಯಾಗಲಿದೆ...

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

Download Eedina App Android / iOS

X