ರೈತರ ತಲೆ ಮೇಲೆ ಸಿದ್ದರಾಮಯ್ಯ ಟೋಪಿ, ಆಸ್ತಿ ಕಬಳಿಕೆ ವಕ್ಫ್‌ನ ದಂಧೆ: ಆರ್‌ ಅಶೋಕ್ ಆರೋಪ

Date:

Advertisements

ವಕ್ಫ್‌ ಮಂಡಳಿ ಭೂಮಿ ಕಬಳಿಸುತ್ತಿರುವುದು ರೈತರ ಪಾಲಿಗೆ ಮರಣಶಾಸನವಾಗಿದೆ. ಆದರೆ ಭೂ ಕಬಳಿಕೆಯ ಈ ಆಟ ನಡೆಯಲು ಹಿಂದೂಗಳು ಬಿಡುವುದಿಲ್ಲ. ಕೂಡಲೇ ಕಾಂಗ್ರೆಸ್‌ ಸರ್ಕಾರ ವಕ್ಫ್‌ ಕಾಯ್ದೆಯಲ್ಲಿ ಬದಲಾವಣೆ ತರಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದರು.

ವಕ್ಫ್‌ ಮಂಡಳಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ‌ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕರೆ ನೀಡಿದ್ದ ಪ್ರತಿಭಟನೆಯ ಭಾಗವಾಗಿ ಕೆ.ಆರ್‌.ಪುರದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

“ಜಮೀನು ಕಬಳಿಸುವ ಮೂಲಕ ಅನ್ನದಾತರ ಕಣ್ಣಲ್ಲಿ ನೀರು ಬರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಇವೆಲ್ಲಕ್ಕೂ ಸಚಿವ ಜಮೀರ್‌ ಅಹ್ಮದ್‌ ಕಾರಣ. ಹಿಂದೆ ಕೇಂದ್ರದ ಕಾಂಗ್ರೆಸ್‌ ಸರ್ಕಾರ ಮುಸ್ಲಿಮರನ್ನು ಓಲೈಸಲು ವಕ್ಫ್‌ ಬೋರ್ಡ್‌ಗೆ ಹೆಚ್ಚು ಅಧಿಕಾರ ನೀಡಿತು. ಸಿಎಂ ಸಿದ್ದರಾಮಯ್ಯ ಅವರೇ ಭೂಮಿ ಪಡೆಯಿರಿ ಎಂದು ಹೇಳಿದ್ದು, ಈಗ ಇದು ಬಿಜೆಪಿ ಮಾಡುವ ರಾಜಕೀಯ ಎಂದು ಹೇಳಿದ್ದಾರೆ. ಸಿದ್ದರಾಮಯ್ಯನವರು ಈಗ ಟೋಪಿ ತೆಗೆದಿದ್ದಾರೆ. ಬಳಿಕ ಅವರೇ ರೈತರ ತಲೆ ಮೇಲೆ ಟೋಪಿ ಹಾಕುತ್ತಾರೆ. ಮುಸ್ಲಿಮರಿಗೆ 10 ಸಾವಿರ ಕೋಟಿ ರೂ. ನೀಡುತ್ತೇನೆಂದು ಹೇಳಿ ದಲಿತರ ಹಣ ಲೂಟಿ ಮಾಡಿದ್ದಾರೆ. ಕಾಂಗ್ರೆಸ್‌ಗೆ ಹಿಂದೂಗಳು ಮತ ನೀಡಿಲ್ಲವೇ? ಹಿಂದೂಗಳು ಎರಡನೇ ದರ್ಜೆಯ ಪ್ರಜೆಗಳೇ” ಎಂದು ಪ್ರಶ್ನಿಸಿದರು.

Advertisements

“ಬಾಬರ್‌, ಔರಂಗಜೇಬ ಮೊದಲಾದ ಮತಾಂಧ ರಾಜರು ವಕ್ಫ್‌ ಬೋರ್ಡ್‌ಗೆ ಮಾದರಿ. ಶ್ರೀರಂಗಪಟ್ಟಣದಲ್ಲಿ ನೂರಾರು ವರ್ಷಗಳಿಂದ ಇರುವ ದೇವಸ್ಥಾನವನ್ನು ಖಬರ್‌ಸ್ಥಾನ ಎಂದು ದಾಖಲೆಯಲ್ಲಿ ಬರೆಸಿದ್ದಾರೆ. ಲವ್‌ ಜಿಹಾದ್‌ ಮಾಡಿ ಹಿಂದೂ ಹೆಣ್ಣುಮಕ್ಕಳನ್ನು ಮತಾಂತರ ಮಾಡಲಾಗಿದೆ. ಈಗ ಲ್ಯಾಂಡ್‌ ಜಿಹಾದ್‌ ಮೂಲಕ ರೈತರ ಜಮೀನು ಪರಿವರ್ತನೆ ಮಾಡುತ್ತಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್‌ನ ಮಗುವಿನಂತೆ ನಿದ್ರಿಸಿ ಎಂಬ ಘೋಷಣೆಯಂತೆ, ಭಯೋತ್ಪಾದಕರು ಹಾಗೂ ಮೂಲಭೂತವಾದಿಗಳು ಕರ್ನಾಟಕದಲ್ಲಿ ಮಗುವಿನಂತೆ ಆರಾಮಾಗಿ ನಿದ್ರಿಸಬಹುದು. ಭಯೋತ್ಪಾದಕರು ಡಿ.ಕೆ.ಶಿವಕುಮಾರ್‌ ಅವರ ಸಹೋದರರಾಗಿದ್ದಾರೆ. ಭಯೋತ್ಪಾದನೆ ಮಾಡಿದವರನ್ನು ನಮ್ಮವರು ಎಂದು ಹೇಳುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ನಂಬಿಕೆ ಉಳಿಸಿಕೊಳ್ಳದ ಮುಖ್ಯಮಂತ್ರಿ ನಮ್ಮ ರಾಜ್ಯದಲ್ಲಿದ್ದಾರೆ. ಮುಸ್ಲಿಂ ಗಲಭೆಕೋರರ ಕೇಸುಗಳನ್ನು ವಾಪಸ್‌ ಪಡೆದರು. ಗಣೇಶ ಮೂರ್ತಿಯನ್ನೇ ಬಂಧನ ಮಾಡಿದರು. ಕೇವಲ ಮತಕ್ಕಾಗಿ ಇಡೀ ಕರ್ನಾಟಕವನ್ನೇ ಹಾಳು ಮಾಡುತ್ತಿದ್ದಾರೆ. ಮುಡಾ ಹಗರಣವಾದ ನಂತರ ಸಿಎಂ ಸಿದ್ದರಾಮಯ್ಯನವರ ಹಣೆಯಲ್ಲಿ ಕುಂಕುಮ ಕಾಣಿಸಿಕೊಂಡಿದೆ” ಎಂದು ಟೀಕಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಕ್ಫ್‌ ವಿವಾದವೆಂಬ ಕೃತಕ ಸೃಷ್ಟಿ – ಮತ್ತೊಮ್ಮೆ ಮಾಧ್ಯಮಗಳ ಬಣ್ಣ ಬಯಲು

ಕಾಯ್ದೆಯಲ್ಲಿ ಬದಲಾವಣೆ ತನ್ನಿ

“ವಕ್ಫ್‌ ಬೋರ್ಡ್‌ ಈಗ ಸಾಬರ ಬೋರ್ಡ್‌ ಆಗಿದ್ದು, ಸಿಎಂ ಸಿದ್ದರಾಮಯ್ಯನವರು ಬೇಕಿದ್ದರೆ ಎಲ್ಲ ಭೂಮಿಯನ್ನು ಈ ಬೋರ್ಡ್‌ಗೆ ಬರೆದುಬಿಡಬಹುದು. ಇವೆಲ್ಲ ದಾನ ಕೊಟ್ಟ ಜಮೀನು ಎಂದು ವಕ್ಫ್‌ ಮಂಡಳಿ ಹೇಳುತ್ತಿದೆ. ಮುಜರಾಯಿ ಇಲಾಖೆಗೂ ದಾನದಿಂದ ಭೂಮಿ ಬಂದಿದೆ. ಆದರೆ ಅದು ಮಾತ್ರ ಸರ್ಕಾರಿ ಆಸ್ತಿಯಾಗುತ್ತದೆ. ಆದರೆ ವಕ್ಫ್‌ ಬೋರ್ಡ್‌ಗೆ ದಾನದಿಂದ ಬರುವ ಭೂಮಿ ಮಾತ್ರ ಸರ್ಕಾರಿ ಆಸ್ತಿಯಾಗುವುದಿಲ್ಲ. ಹೀಗೆಯೇ ಕಾಂಗ್ರೆಸ್‌ ರಾಜ್ಯವನ್ನು ಹಾಳು ಮಾಡಿದರೆ ಹಿಂದೂಗಳು ಈ ಆಟ ನಡೆಯಲು ಬಿಡುವುದಿಲ್ಲ. ಕೂಡಲೇ ಎಚ್ಚೆತ್ತುಕೊಂಡು ಕಾಯ್ದೆಯಲ್ಲಿ ಬದಲಾವಣೆ ಮಾಡಲಿ” ಎಂದು ಆಗ್ರಹಿಸಿದರು.

ಮುಖ್ಯಮಂತ್ರಿಯ ಮಾತನ್ನು ನಂಬಲ್ಲ

“ಸಿದ್ದರಾಮಯ್ಯನವರ ಮಾತನ್ನು ಯಾರೂ ನಂಬುವುದಿಲ್ಲ. ಅವರು ಯಾವಾಗ ಬೇಕಾದರೂ ಮಾತು ಬದಲಿಸುತ್ತಾರೆ. ರೈತರಿಗೆ ಸಂಪೂರ್ಣವಾಗಿ ಜಮೀನಿನ ದಾಖಲೆಗಳು ಸಿಕ್ಕಿ, ಅವರ ಹೆಸರಿಗೆ ಜಮೀನು ಸಂಪೂರ್ಣವಾಗಿ ನೋಂದಣಿಯಾಗುವವರೆಗೂ ಬಿಜೆಪಿ ಹೋರಾಟ ಮಾಡಲಿದೆ. ವಕ್ಫ್‌ ತಿದ್ದುಪಡಿ ಮಸೂದೆಯ ಜಂಟಿ ಸಂಸದೀಯ ಸಮಿತಿಗೆ ಈ ಕುರಿತು ಪತ್ರ ಬರೆದಿದ್ದೇನೆ. ಈ ಸಮಿತಿ ಕರ್ನಾಟಕಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ವಕ್ಫ್‌ ಬೋರ್ಡ್‌ ಆಸ್ತಿ ಕಬಳಿಕೆ ಒಂದು ದಂಧೆಯಾಗಿದ್ದು, ಇದನ್ನು ಮಟ್ಟ ಹಾಕಬೇಕಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ರೈತರ ತಲೆ melei ಈಗ, ಆದರೆ ಸರ್ಕಾರಿ ನೌಕರರಿಗೆ
    1. Andhra pradeshha ತರಹ 2022 rindpaa 2023ravareigu ,covid ನಡುವೆ ಕಾರ್ಯ ನಿರ್ವಹಿಸಿದರು,kooda, ಈ ಅವಧಿಯಲ್ಲಿ, ನಿವೃತ್ತಿ hondidavarigei arrears kooda ಇಲ್ಲ
    2.ಆಯ್ತು ಬಿಡಿ, ಈ ಅವಧಿಯಲ್ಲಿ, ಸುಮಾರು 30_40 seven ಮಾಡಿದವರ ಪದ್ಮಾವತಿ ಯನ್ನು ಮುಂದೂಡಲಾಗಿದೆ , ಬರೀ 20__25 ವರ್ಷ ಸೇವೆ ಸಲ್ಲಿಸಿದ, ಸರ್ಕಾರಿ ನೌಕರರಿಗೆ ಪದ್ಮಾವತಿ needirutharei.
    3.ಹೋಗಲಿ ಬಿಡಿ esamasyei ಸರಿ ಮಾಡುವುದಕ್ಕೆ ,kumaranna 2019ralli ಹೇಳಿದಂತೆ ನಿವೃತ್ತಿ vayasu 62 ಮಾಡಿಲ್ಲ . ಪಕ್ಕದ ರಾಜ್ಯ ಆಂಧ್ರಾದ ಪ್ರದೇಶದಲ್ಲಿ ಮಾಡಿ ಕೂಡ ಇಲ್ಲಿ maadilla.
    4 .ಸಿ and r thidhupadiyalli ಎನಾದರೂ ಮಾಡಿದೂ kelaaginindhaa ಪದ್ಮಾವತಿ ಕೊಡುತ್ತಿದ್ದಾರೆ shaadakshariyavargei ಮತ್ತು ಮಾನ್ಯ ಮುಖ್ಯಮಂತ್ರಿ ಅವರಿಗೆ ಗೊತ್ತಿರಬಹುದು. neenall6 ನೀನಲ್ಲ c and r ಮಾಲೀಕ ನೀನಲ್ಲ
    5 .ಸೇವೆಗೆ seiruvaa vayasu, 33_35yerisidhaa melei, ನಿವೃತ್ತಿ vayasu ಕೂಡ, ಏಳಬೇಕು ಅಲ್ವಾ ಸಾರ್,
    5.ಪಾಪ ರೈತರಿಗೆ ನ್ಯಾಯಾ kodi ಸಾರ್ raajarindhaa, cooli ಕೆಲಸ maaduvarukooda,hagu indira canteen ನೀಡುತ್ತಿರುವುದು, ಭಾರತrice, ration depots ಎಲ್ಲವೂ ರೈತರ shramaa

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X