ಸರಳ ಮತ್ತು ಸಾಮೂಹಿಕ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು: ಸಿಎಂ ಸಿದ್ದರಾಮಯ್ಯ

Date:

Advertisements
  • ಚಾಮರಾಜನಗರದಲ್ಲಿ ನಡೆದ ಸಾಮೂಹಿಕ ಸರಳ ವಿವಾಹದಲ್ಲಿ ಸಿಎಂ ಭಾಗಿ
  • ಐದು ವರ್ಷದಲ್ಲಿ ಮಲೈ ಮಹದೇಶ್ವರ ಕ್ಷೇತ್ರದ ಚಿತ್ರಣ ಬದಲಾಯಿಸ್ತೀವಿ: ಸಿಎಂ

ವ್ಯವಸಾಯಕ್ಕೆಂದು ಸಾಲ ಮಾಡಿ, ಮದುವೆ ಮಾಡುವುದು ಒಳ್ಳೆಯದಲ್ಲ. ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ಅನಾರೋಗ್ಯಕಾರಿ ನಡೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಚಾಮರಾಜನಗರದ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ದೇವಸ್ಥಾನದ ರಂಗಮಂದಿರದ ಆವರಣದಲ್ಲಿ ಆಯೋಜಿಸಿದ್ದ ಸಾಮೂಹಿಕ ಸರಳ ವಿವಾಹದಲ್ಲಿ ಪಾಲ್ಗೊಂಡು ಮಾತನಾಡಿದರು.

“ಬಡವರು ಮತ್ತು ಮಧ್ಯಮ ವರ್ಗದವರ ಪಾಲಿಗೆ ಅದ್ದೂರಿ ಮದುವೆಗಳು ಬಹಳ ದೊಡ್ಡ ಹೊರೆಯಾಗುತ್ತವೆ. ಜೀವನ ಪರ್ಯಂತ ಸಾಲ ತೀರಿಸುತ್ತಾ ಕೂರಬೇಕಾಗುತ್ತದೆ. ಆದ್ದರಿಂದ ಸರಳ ಮತ್ತು ಸಾಮೂಹಿಕ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು” ಎಂದರು.

Advertisements

“ಮಹದೇಶ್ವರನ ಬೆಟ್ಟ ಆಧ್ಯಾತ್ಮಿಕ ಮಹತ್ವ ಇರುವ ಪುಣ್ಯ ಸ್ಥಳ. ಶೂದ್ರರು, ಶ್ರಮಿಕರು, ಬಡವರು, ಎಲ್ಲ ಜಾತಿಯವರ ಆಧ್ಯಾತ್ಮಿಕ ಕೇಂದ್ರವಾಗಿದೆ. ಈ ಕಾರಣಕ್ಕೆ ನನಗೆ ಈ ಕ್ಷೇತ್ರದ ಬಗ್ಗೆ ಅತ್ಯಂತ ಶ್ರದ್ಧೆ ಮತ್ತು ಗೌರವ ಇದೆ. ನಾನು ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಮಲೈ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ರಚಿಸಿದೆ. ಈಗ ಪ್ರಾಧಿಕಾರದ ಆದಾಯವೂ ಹೆಚ್ಚಾಗಿದೆ. ಶಕ್ತಿ ಯೋಜನೆಯ ಪರಿಣಾಮ ಭಕ್ತರು, ಅದರಲ್ಲೂ ಮಹಿಳಾ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮಲೈ ಮಾದೇಶ್ವರನ ದರ್ಶನ ಪಡೆಯುತ್ತಿದ್ದಾರೆ” ಎಂದು ಮೆಚ್ಚುಗೆ ಸೂಚಿಸಿದರು.

ಐದು ವರ್ಷದಲ್ಲಿ ಮಲೈ ಮಹದೇಶ್ವರ ಕ್ಷೇತ್ರದ ಚಿತ್ರಣ ಬದಲು

ಮುಂದಿನ ಐದು ವರ್ಷದಲ್ಲಿ ಮಲೈ ಮಹದೇಶ್ವರ ಕ್ಷೇತ್ರದ ಚಿತ್ರಣವನ್ನೇ ಬದಲಾಯಿಸ್ತೀವಿ ಎಂದು ಮಹತ್ವದ ಘೋಷಣೆ ಮಾಡಿದ ಮುಖ್ಯಮಂತ್ರಿಗಳು, ”ಕುಡಿಯುವ ನೀರು ಮತ್ತು ಶುಚಿತ್ವಕ್ಕೆ ಹೆಚ್ಚಿನ ಆಧ್ಯತೆ ನೀಡಿ” ಎಂದು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಷ್ಟ್ರಪತಿ ಭವನ ಇನ್ನು ಮುಂದೆ ತಪೋಭವನ

“ಮಲೈ ಮಹದೇಶ್ವರ ಬೆಟ್ಟದಲ್ಲಿರುವ ರಾಷ್ಟ್ರಪತಿ ಭವನದ ಹೆಸರು ಬದಲಾಗಿದೆ. ಇನ್ನು ಮುಂದೆ ಇದು ತಪೋಭವನ. ಮಾದೇಶ್ವರ ತಪಸ್ಸು ಮಾಡಿದ ಶಕ್ತಿ ಕೇಂದ್ರ ಇದು. ಆದ್ದರಿಂದ ಇದನ್ನು ನಾವು ತಪೋಭವನ ಎಂದು ಕರೆಯಬೇಕು. ಶಿವರಾತ್ರಿ ದೇಶೀಕೇಂದ್ರ ಮಹಾ ಸ್ವಾಮಿಗಳ ಸಲಹೆಯಂತೆ ‘ತಪೋಭವನ’ ಎಂದು ಬದಲಾಯಿಸಿದ್ದೇವೆ” ಎಂದು ತಿಳಿಸಿದರು.

ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ಹನೂರು ಶಾಸಕ ಎಂ.ಆರ್.ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ಪಟ್ಟದ ಗುರುಸ್ವಾಮಿಗಳು, ಶಾಂತಮಲ್ಲಿಕಾರ್ಜುನ ಸ್ವಾಮಿಗಳು, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೇರಿ ಜಿಲ್ಲೆಯ ಶಾಸಕರು ಮತ್ತು ನಾಯಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

Download Eedina App Android / iOS

X