ಬಿಹಾರ ಚುನಾವಣೆ | ಪ್ರಧಾನಿ ಮೋದಿ ಪ್ರಶಂಸಿಸಿದ್ದ ಗಾಯಕಿ ಮೈಥಿಲಿ ಠಾಕೂರ್ ಬಿಜೆಪಿಯಿಂದ ಸ್ಪರ್ಧೆ?

Date:

ಪ್ರಧಾನಿ ಮೋದಿ ಅವರಿಂದ ಪ್ರಶಂಸೆ ಪಡೆದಿದ್ದ ಗಾಯಕಿ ಮೈಥಿಲಿ ಠಾಕೂರ್ ಅವರು ಹಾಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ದಿಸುವ ಸಾಧ್ಯತೆ ಇದೆ. ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಬಹುದು ಎಂದು ಹೇಳಲಾಗಿದೆ.

- Advertisement -

ದೆಹಲಿಯಲ್ಲಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಮತ್ತು ಬಿಜೆಪಿ ಉಸ್ತುವಾರಿ ವಿನೋದ್ ತಾವ್ಡೆ ಅವರನ್ನು ತನ್ನ ತಂದೆಯೊಂದಿಗೆ ಮೈಥಿಲಿ ಭೇಟಿ ಮಾಡಿದ್ದಾರೆ. ಭೇಟಿಯ ಚಿತ್ರಗಳನ್ನು ವಿನೋದ್‌ ತಾವ್ಡೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ‘ಬಿಹಾರದ ಮಗಳು ರಾಜ್ಯಕ್ಕೆ ಮರಳಿ’ ಬರುವಂತೆ ಸ್ವಾಗತಿಸಿದ್ದಾರೆ. ಅವರ ಈ ಪೋಸ್ಟ್‌, ಮೈಥಿಲಿ ಅವರ ಚುನಾವಣಾ ಸ್ಪರ್ಧೆಯ ಕುರಿತು ಚರ್ಚೆಯನ್ನು ಹುಟ್ಟುಹಾಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ತಮ್ಮ ಪೋಸ್ಟ್‌ನಲ್ಲಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ)ವನ್ನು ಟೀಕಿಸಿರುವ ತಾವ್ಡೆ, “1995ರಲ್ಲಿ ಲಾಲು ಅಧಿಕಾರಕ್ಕೆ ಬಂದ ನಂತರ ಬಿಹಾರವನ್ನು ಹಲವು ಕುಟುಂಬಗಳ ತೊರೆದಿದ್ದವು. ಆ ಕುಟುಂಬವೊಂದರ ಮಗಳು, ಪ್ರಸಿದ್ಧ ಗಾಯಕಿ ಮೈಥಿಲಿ ಠಾಕೂರ್ ಅವರು ಬದಲಾಗುತ್ತಿರುವ ಬಿಹಾರದ ವೇಗವನ್ನು ನೋಡಿ ಬಿಹಾರಕ್ಕೆ ಮರಳಲು ಬಯಸಿದ್ದಾರೆ” ಎಂದು ಹೇಳಿದ್ದಾರೆ.

ತಾವ್ಡೆ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಮೈಥಿಲಿ ಠಾಕೂರ್, “ಬಿಹಾರಕ್ಕಾಗಿ ದೊಡ್ಡ ಕನಸು ಕಾಣುತ್ತಿರುವ ಜನರೊಂದಿಗೆ (ಬಿಜೆಪಿಗರು) ನಡೆದ ಪ್ರತಿ ಸಂಭಾಷಣೆಯೂ ನನಗೆ ದೃಷ್ಟಿ ಮತ್ತು ಸೇವೆಯ ಶಕ್ತಿಯನ್ನು ಪ್ರೇರೇಪಿಸುತ್ತದೆ. ಅವರಿಗೆ ಗೌರವ ಮತ್ತು ಹೃದಯದಿಂದ ಕೃತಜ್ಞತೆ ಸಲ್ಲಿಸುತ್ತೇನೆ” ಎಂದು ಹೇಳಿದ್ದಾರೆ.

ಶಾಸ್ತ್ರೀಯ ಗಾಯಕಿ ಮೈಥಿಲಿ ಅವರು ಮಿಥಿಲಾ ಪ್ರದೇಶದವರು. ಮೈಥಿಲಿ ಅವರಿಗೆ ಈ ಪ್ರದೇಶದಲ್ಲಿ ಬಿಜೆಪಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಟಿಕೆಟ್‌ ನೀಡುವ ಸಾಧ್ಯತೆ ಇದೆ. ದರ್ಭಂಗಾ ಜಿಲ್ಲೆಯ ಮಧುಬನಿ ಅಥವಾ ಅಲಿಗಢ. ಅವಕಾಶ ನೀಡಿದರೆ ಚುನಾವಣೆಯಲ್ಲಿ ಸ್ಪರ್ಧಿಸುವ ಬಯಕೆಯನ್ನು ಮೈಥಿಲಿ ಕೂಡ ವ್ಯಕ್ತಪಡಿಸಿದ್ದಾರೆ.

ರಾಮಾಯಣದಲ್ಲಿ ಹೇಳುವಂತೆ ಶ್ರೀರಾಮನಿಗೆ ಅರ್ಧ ತಿಂದ ಹಣ್ಣುಗಳನ್ನು ಅರ್ಪಿಸಿದ ಶಬರಿಯ ಕುರಿತು ಮೈಥಿಲಿ ಅವರು 2024ರಲ್ಲಿ ಅಯೋಧ್ಯೆ ರಾಮಮಂದಿರ ಉದ್ಘಾಟನೆ ಸಮಯದಲ್ಲಿ ಹಾಡನ್ನು ಹಾಡಿದ್ದರು. ಆ ಹಾಡಿಗಾಗಿ 2024ರ ಜನವರಿಯಲ್ಲಿ ಮೈಥಿಲಿ ಅವರನ್ನು ಪ್ರಧಾನಿ ಮೋದಿ ಪ್ರಶಂಸಿಸಿದ್ದರು.

ಬಿಹಾರ ಚುನಾವಣಾ ವೇಳಾಪಟ್ಟಿಯನ್ನು ಸೋಮವಾರ ಘೋಷಿಸಲಾಗಿದೆ. ನವೆಂಬರ್ 6 ಮತ್ತು 11ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮತ ಎಣಿಕೆ ನವೆಂಬರ್ 14 ರಂದು ನಡೆಯಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...

ಜಂತರ್ ಮಂತರ್ ಧರಣಿ ಸ್ಥಳ ರದ್ದತಿ ಖಂಡಿಸಿ ಎಸ್‌ಎಫ್‌ಐ, ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್ ವಶಕ್ಕೆ

ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರಜಾಸತ್ತಾತ್ಮಕ ಪ್ರತಿಭಟನಾ...

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿವಾದ: ಕುಂದಾಪುರದ ಲೇಖಕನ ಕೃತಿಗೆ ದೊರೆತ ಪ್ರಶಸ್ತಿಯ ಹಿಂದೆ ವಂಚನೆ, ಲಾಬಿ ಶಂಕೆ

ಕುಂದಾಪುರ ಮೂಲದ ಲೇಖಕ ಪ್ರದೀಪ್ ಕೆಂಚನೂರು ಅವರ ‘ನಾನಿರುವುದೆ ನಿಮಗಾಗಿ ನಾಡಿರುವುದೆ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...