ಬಿಜೆಪಿ-ಆರ್‌ಎಸ್‌ಎಸ್‌ನ ‘ಲೆಕ್ಕಾಚಾರದ ರಾಜಕೀಯ ಯೋಜನೆ’ಯೇ ಎಸ್‌ಐಆರ್‌: ಸಿಪಿಎಂ ಆರೋಪ

Date:

ಬಿಹಾರ ಚುನಾವಣೆಯಲ್ಲಿನ ಸೋಲಿನ ಬಗ್ಗೆ ತನ್ನ ಮಿತ್ರಪಕ್ಷಗಳಿಗಿಂತ ಸೂಕ್ಷ್ಮವಾಗಿ ಕೊಂಚ ಭಿನ್ನ ನಿಲುವನ್ನು ಹೊಂದಿರುವ ಸಿಪಿಎಂ, ಬಿಜೆಪಿ ವಿರುದ್ಧ ಜಂಟಿಯಾಗಿ ಹೋರಾಟ ನಡೆಸದೆ ಇರುವುದೇ ಎನ್‌ಡಿಎ ಗೆಲುವಿಗೆ ಕಾರಣವಾಗಿರಬಹುದು ಎಂದು ಹೇಳಿದೆ. ಹಾಗೆಯೇ ಚುನಾವಣೆ ಫಲಿತಾಂಶದ ಮೇಲೆ ಚುನಾವಣಾ ಆಯೋಗದ ಪಕ್ಷಪಾತ ವರ್ತನೆ ಮತ್ತು ಹಠಾತ್ ಆಗಿ ನಡೆಸಲಾದ ಎಸ್‌ಐಆರ್‌ ಪ್ರಕ್ರಿಯೆಯ ಪಾತ್ರವಿದೆಯೇ ಎಂದು ಪರಿಶೀಲಿಸುವುದಾಗಿ ಹೇಳಿದೆ. “ಬಿಜೆಪಿ-ಆರ್‌ಎಸ್‌ಎಸ್‌ನ ‘ಲೆಕ್ಕಾಚಾರದ ರಾಜಕೀಯ ಯೋಜನೆ’ಯೇ ಎಸ್‌ಐಆರ್‌” ಎಂದು ಸಿಪಿಎಂ ಆರೋಪಿಸಿದೆ.

- Advertisement -

12 ರಾಜ್ಯಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ಬಿಜೆಪಿ-ಆರ್‌ಎಸ್‌ಎಸ್‌ನ ಯೋಜನೆಯಾಗಿದ್ದು ಅದನ್ನು ಜನರು ಒಪ್ಪಿಕೊಳ್ಳುವ ಚುನಾವಣಾ ಆಯೋಗದ ಮೂಲಕ ಕಾರ್ಯಗತಗೊಳಿಸಲಾಗುತ್ತಿದೆ. ಲಕ್ಷಾಂತರ ಮತದಾರರ ಹಕ್ಕನ್ನು ಕಸಿಯುವ ಉದ್ದೇಶವನ್ನು ಇದು ಹೊಂದಿದೆ ಎಂದು ದೂರಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಕ್ರೀಡೆ, ವ್ಯಾಪಾರ ಮತ್ತು ಮೌನ: ಲಿಯೋನೆಲ್ ಮೆಸ್ಸಿ ಎಂಬ...

2013ರ ಪ್ರವಾಸದ ವೇಳೆ ಅವರು ಇಸ್ರೇಲ್‌ನ ವೆಸ್ಟರ್ನ್ ವಾಲ್‌ನಲ್ಲಿ 'ಕಿಪ್ಪಾ' (ಯಹೂದಿಗಳ ಸಾಂಪ್ರದಾಯಿಕ ಟೋಪಿ) ಧರಿಸಿ ನಿಂತಿದ್ದ ಚಿತ್ರವು, ಅವರ ಇಸ್ರೇಲ್ ಪರ ಒಲವಿಗೆ ಅಳಿಸಲಾಗದ ಸಾಕ್ಷಿಯಾಗಿ ಉಳಿದುಕೊಂಡಿದೆ. ಶಾಂತಿ ಪ್ರವಾಸದ ಹೆಸರಿನಲ್ಲಿ...

ಇದನ್ನು ಓದಿದ್ದೀರಾ? ಬಿಹಾರ | ಬೂತ್ ಮಟ್ಟದ ಪರಿಶೀಲನೆ: ಬಟಾಬಯಲಾದ ಚುನಾವಣಾ ಆಯೋಗ

ಬಿಹಾರ ಚುನಾವಣೆಗಳು, ಎಸ್‌ಐಆರ್ ಮತ್ತು ಇತರ ರಾಜಕೀಯ ಬೆಳವಣಿಗೆಗಳ ಬಗ್ಗೆ ಶನಿವಾರ, ಭಾನುವಾರ ಸಿಪಿಎಂ ಪಾಲಿಟ್ ಬ್ಯುರೋದ ಎರಡು ದಿನಗಳ ಸಭೆ ನಡೆದಿದೆ. ಇಂಡಿಯಾ ಒಕ್ಕೂಟದ ಒಗ್ಗಟ್ಟಿನ ಕೊರತೆಯು ಇನ್ನಷ್ಟು ಸಂಕಷ್ಟಕ್ಕೆ ಕಾರಣವಾಗಬಹುದು ಎಡಪಕ್ಷದ ಉನ್ನತ ನಾಯಕರು ಅಭಿಪ್ರಾಯಪಟ್ಟಿದ್ದಾರೆ ಎಂದು ವರದಿಯಾಗಿದೆ.

ಈ ಸಭೆಯ ನಂತರ ಹೊರಡಿಸಲಾದ ಪ್ರಕಟಣೆಯಲ್ಲಿ, 2024ರ ಲೋಕಸಭಾ ಚುನಾವಣೆಗೆ ಹೋಲಿಸಿದರೆ ಎನ್‌ಡಿಎ ಹೆಚ್ಚಿನ ಮತಗಳನ್ನು ಗಳಿಸಿಲ್ಲ. ಆದರೆ ಸ್ಥಾನಗಳ ಸಂಖ್ಯೆ ಹೆಚ್ಚಾಗಿದೆ. ಎನ್‌ಡಿಎ ಇಡೀ ರಾಜ್ಯ ಯಂತ್ರೋಪಕರಣವನ್ನು ಬಳಸಿಕೊಂಡಿದೆ. ಬೃಹತ್ ಪ್ರಮಾಣದ ಹಣವನ್ನು ಬಳಸಿದೆ. ಬಿಹಾರದ ಹೊರಗಿನಿಂದ ಕಾರ್ಯಕರ್ತರನ್ನು ಕರೆಸಿಕೊಂಡಿತ್ತು. ಜತೆಗೆ ಎನ್‌ಡಿಎ ನಾಯಕರು ಕೋಮು ಧ್ರುವೀಕರಣದಿಂದ ಲಾಭ ಪಡೆಯುತ್ತಿದ್ದಾರೆ ಎಂದು ಹೇಳಿದೆ.

ಸಿಪಿಐಎಂ ಚುನಾವಣೆ ಫಲಿತಾಂಶದ ಮೇಲೆ ಎಸ್‌ಐಆರ್ ಪ್ರಭಾವದ ಬಗ್ಗೆ ಪರಿಶೀಲಿಸುವುದಾಗಿ ಹೇಳಿರುವಾಗ ಕಾಂಗ್ರೆಸ್ ಮತ್ತು ಸಿಪಿಐ(ಎಂಎಲ್)ಎಲ್ ಮತ ಕಳವು ಮತ್ತು ಎಸ್‌ಐಆರ್ ಈ ಸೋಲಿಗೆ ಕಾರಣ ಎಂದು ಆರೋಪಿಸಿದೆ.

ಬಿಹಾರದಲ್ಲಿ ಸಿಪಿಐಎಂ ನಾಲ್ಕು ಸ್ಥಾನಗಳಲ್ಲಿ ಸ್ಪರ್ಧಿಸಿ ಒಂದು ಸ್ಥಾನವನ್ನು ಗೆದ್ದಿದೆ. ಭಿಬೂತಿಪುರದಲ್ಲಿ ಅಜಯ್ ಕುಮಾರ್ ಜಯ ಸಾಧಿಸಿದ್ದಾರೆ. ಒಟ್ಟಾರೆಯಾಗಿ ಸಿಪಿಐಎಂ ಶೇ.0.60ರಷ್ಟು ಮತ ಗಳಿಸಿದೆ. 2020ರಲ್ಲಿ ಸಿಪಿಐ(ಎಂ) ಸ್ಪರ್ಧಿಸಿದ ನಾಲ್ಕು ಸ್ಥಾನಗಳಲ್ಲಿ ಎರಡನ್ನು ಗೆದ್ದು ಶೇ.0.65ರಷ್ಟು ಮತಗಳನ್ನು ಗಳಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಸಿಜೆಪಿ ‘ಜನತಾ ನ್ಯಾಯಾಲಯ’ – ಎಸ್‌ಐಆರ್ ಅನ್ಯಾಯಗಳ ವಿರುದ್ಧ ಪ್ರತಿಭಟನೆಯ ಕಹಳೆ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಕ್ರಮಗಳು, ಮುಖ್ಯ ಚುನಾವಣಾ...

ನಾಳೆ ಜಿಎಸ್‌ಟಿ ಮಂಡಳಿ ಸಭೆ: ಅಧಿಕಾರ ಹಂಚಿಕೆಯ ಅಸಮತೋಲನ; ಏನಿದು ಜಿಎಸ್‌ಟಿ ಕೌನ್ಸಿಲ್?

ಜಿಎಸ್‌ಟಿ ಮಂಡಳಿಯು ದೇಶದ 'ಸಹಕಾರ ಒಕ್ಕೂಟ ವ್ಯವಸ್ಥೆ'ಗೆ ಒಂದು ಉದಾಹರಣೆಯಾಗಿದ್ದರೂ, ಮತದಾನದ...

ತನ್ನ ಕಾದಂಬರಿಗಳ ಪಾತ್ರಗಳಂತೆಯೇ ಜೀವಿಸಿದ್ದ ಜನಪ್ರಿಯ ಕಾದಂಬರಿಕಾರ ಜೆಫ್ರಿ ಆರ್ಚರ್!

ಜನಪ್ರಿಯ ಕಾದಂಬರಿಕಾರ ಜೆಫ್ರಿ ಆರ್ಚರ್, ತಮ್ಮ 86ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಸೇನೆ,...