ಪಶ್ಚಿಮ ಬಂಗಾಳ | ಎಸ್‌ಐಆರ್ ಒತ್ತಡ; ಮತ್ತೋರ್ವ ಬಿಎಲ್‌ಒ ಆತ್ಮಹತ್ಯೆ

Date:

ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯ ರಾಣಿಬಂಧ್ ವಿಧಾನಸಭಾ ಪ್ರದೇಶದಲ್ಲಿ ಮತ್ತೋರ್ವ ಬೂತ್ ಮಟ್ಟದ ಅಧಿಕಾರಿ- ಬಿಎಲ್‌ಒ ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೃತ್ತಿಯಲ್ಲಿ ಮುಖ್ಯೋಪಾಧ್ಯಾಯರಾಗಿದ್ದ ಬಿಎಲ್‌ಒಗೆ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಒತ್ತಡ ಉಂಟಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬ ಆರೋಪಿಸಿದೆ.

- Advertisement -

ಪೊಲೀಸರು ರಾಣಿಬಂಧ್ ಪ್ರದೇಶದ ರಾಜ್ಯ ಸರ್ಕಾರಿ ಪ್ರಾಯೋಜಿತ ರಾಜಕತಾ ಮಜೆರ್‌ಪರಾ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾಗಿದ್ದ ಬಿಎಲ್‌ಒ ಹರಧನ್ ಮಂಡಲ್ ಅವರು ಬರೆದಿದ್ದ ಡೆತ್‌ ನೋಟ್ ಅನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರು ವಶಪಡಿಸಿಕೊಂಡ ಬಂಗಾಳಿಯಲ್ಲಿ ಬರೆಯಲಾದ ಡೆತ್‌ ನೋಟ್‌ನಲ್ಲಿ “ನನಗೆ ಕೆಲಸದ ಒತ್ತಡವನ್ನು ಸಹಿಸಲಾಗುತ್ತಿಲ್ಲ. ವಿದಾಯ” ಎಂದು ಬರೆಯಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಇದನ್ನು ಓದಿದ್ದೀರಾ? ಬಿಜೆಪಿ-ಆರ್‌ಎಸ್‌ಎಸ್‌ನ ‘ಲೆಕ್ಕಾಚಾರದ ರಾಜಕೀಯ ಯೋಜನೆ’ಯೇ ಎಸ್‌ಐಆರ್‌: ಸಿಪಿಎಂ ಆರೋಪ

ಸದ್ಯ ಭಾನುವಾರ ಮೃತಪಟ್ಟ ಬಿಎಲ್‌ಒ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಸ್ವಾಮ್ಯದ ಬಂಕುರಾ ಸಮ್ಮಿಲಾನಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಶವಾಗಾರಕ್ಕೆ ಕಳುಹಿಸಲಾಗಿದೆ. ಪೊಲೀಸರು ಘಟನೆಯ ತನಿಖೆ ನಡೆಸುತ್ತಿದ್ದಾರೆ. ಶಾಲೆಯಲ್ಲೇ ಬಿಎಲ್‌ಒ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚುನಾವಣಾ ಆಯೋಗವು ಹರಧನ್ ಮಂಡಲ್ ಅವರನ್ನು ರಾಣಿಬಂಧ್ ವಿಧಾನಸಭೆಯ ವ್ಯಾಪ್ತಿಯ 206ನೇ ಮತಗಟ್ಟೆಯ ಬಿಎಲ್‌ಒ ಆಗಿ ನೇಮಿಸಿತ್ತು.

“2002ರಲ್ಲಿ ರಾಜ್ಯದಲ್ಲಿ ನಡೆದ ಕೊನೆಯ SIR ಪ್ರಕ್ರಿಯೆಯ ಎಣಿಕೆ ನಮೂನೆಗಳೊಂದಿಗೆ ಯಾವುದೇ ಸಂಬಂಧವಿಲ್ಲದ ಕಾರಣ, ಇಂದು ವಿಚಾರಣೆಗೆ ಹಾಜರಾಗಲು ರಾಷ್ಟ್ರೀಯ ಚುನಾವಣಾ ಸಂಸ್ಥೆಯಿಂದ ಬೂತ್‌ನ ಹಲವಾರು ಮತದಾರರಿಗೆ ಸಮನ್ಸ್ ನೀಡಲಾಗಿದೆ. ಆದ್ದರಿಂದಾಗಿ ಬೆಳಿಗ್ಗೆ 10 ಗಂಟೆ ಸುಮಾರಿಗೆ ಮನೆಯಿಂದ ಹೊರಟ ಹರಧನ್ ಅವರು, ಹಿಂತಿರುಗಲಿಲ್ಲ” ಎಂದು ಕುಟುಂಬಸ್ಥರು ಹೇಳಿದ್ದಾರೆ.

ನವೆಂಬರ್ 4ರಂದು ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್ ಪ್ರಕ್ರಿಯೆ ಆರಂಭವಾಗಿದ್ದು, ಈವರೆಗೆ ಕೆಲಸದ ಹೊರೆ ಮತ್ತು ಒತ್ತಡದಿಂದಾಗಿ ಆರು ಬಿಎಲ್‌ಒಗಳು ಸಾವನ್ನಪ್ಪಿದ್ದಾರೆ. ದೇಶಾದ್ಯಂತ ಕನಿಷ್ಠ 33 ಬೂತ್ ಮಟ್ಟದ ಅಧಿಕಾರಿಗಳು (BLO) ಮೃತಪಟ್ಟಿದ್ದಾರೆ. ಈ ಪೈಕಿ ಕನಿಷ್ಠ 9 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಗುಜರಾತ್, ರಾಜಸ್ಥಾನ ಮತ್ತು ಕೇರಳ ರಾಜ್ಯಗಳಲ್ಲಿ ಇಂತಹ ಸಾವುಗಳು ವರದಿಯಾಗಿವೆ. ಪಶ್ಚಿಮ ಬಂಗಾಳವೊಂದರಲ್ಲೇ ಎಸ್‌ಐಆರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ 40 ಸಾವುಗಳು ಸಂಭವಿಸಿವೆ ಎಂದು ಅಲ್ಲಿನ ಆಡಳಿತ ಪಕ್ಷ ಟಿಎಂಸಿ ಪ್ರತಿಪಾದಿಸಿದೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಖಿನ್ನತೆ, ಆತ್ಮಹತ್ಯೆಯ ಆಲೋಚನೆ: NTF ವರದಿ ಹೊರತಂದ ಆಘಾತಕಾರಿ ಸತ್ಯ!

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಕುರಿತು ಸುಪ್ರೀಂ ಕೋರ್ಟ್...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...

ಪರ್ವತದಷ್ಟು ಹಗರಣ, ಸಾಸಿವೆಯಷ್ಟು ದಂಡ: ₹1.48 ಕೋಟಿಗೆ ಅದಾನಿ ಸಮೂಹದ ಅಕ್ರಮಗಳಿಗೆ ಸೆಬಿ ‘ಕ್ಲೀನ್ ಚಿಟ್’

ಅದಾನಿ ಸಮೂಹದ ಬೃಹತ್ ಆರ್ಥಿಕ ಅವ್ಯವಹಾರಗಳ ಆರೋಪಗಳೆದುರು ಭಾರತದ ಷೇರುಪೇಟೆ ನಿಯಂತ್ರಕ...

ಸಂಭಲ್ ಪ್ರಕರಣ: ಆರೋಪಿ ಮೇಲಿನ NSA ರದ್ದು, ಯೋಗಿ ಸರ್ಕಾರಕ್ಕೆ 10 ಲಕ್ಷ ರೂ. ದಂಡ ವಿಧಿಸಿದ ಸುಪ್ರೀಂ!

2024ರ ಸಂಭಲ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮುಲ್ಲಾ ಅಫ್ರೋಜ್ ವಿರುದ್ಧ...