ಮತಗಳವು ಆರೋಪ: ಆಳಂದ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಮನೆ ಮೇಲೆ ಎಸ್‌ಐಟಿ ದಾಳಿ

Date:

ಮತಗಳವು ಆರೋಪಕ್ಕೆ ಸಂಬಂಧಿಸಿದಂತೆ ಆಳಂದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಮನೆ ಮೇಲೆ ಎಸ್‌ಐಟಿ ದಾಳಿ ನಡೆಸಿದೆ. ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳವು ಮಾಡುವ ಯತ್ನ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

- Advertisement -

2023ರ ಚುನಾವಣೆಗೂ ಮುನ್ನ ಆಳಂದ ಕ್ಷೇತ್ರದಲ್ಲಿ ಮತ ಡಿಲೀಟ್ ಮಾಡುವ ಯತ್ನ ನಡೆದಿತ್ತು ಎಂದು ಕಾಂಗ್ರೆಸ್ ಶಾಸಕ ಬಿ ಆರ್ ಪಾಟೀಲ್ ಆರೋಪಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಸುಭಾಷ್ ಗುತ್ತೇದಾರ್ ಮನೆಯಲ್ಲಿ ಶೋಧ ನಡೆಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಇದನ್ನು ಓದಿದ್ದೀರಾ? ಕರ್ನಾಟಕದ ಆಳಂದದಲ್ಲಿ 6,000 ಮತಗಳ ‘ಡಿಲೀಟ್’ ಯತ್ನ: ಪುರಾವೆ ಸಹಿತ ವಿವರಿಸಿದ ರಾಹುಲ್ ಗಾಂಧಿ

ಕಲಬುರಗಿಯ ಗುಬ್ಬಿ ಕಾಲೋನಿಯಲ್ಲಿರುವ ಅವರ ಮನೆಯ ಮೇಲೆ ಎಸ್‌ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎನ್ನಲಾಗಿದೆ. ಜತೆಗೆ ಸುಭಾಷ್ ಅವರ ಒಡೆತನದ ವೈನ್‌ ಶಾಪ್ ಸೇರಿದಂತೆ ಹಲವು ಕಡೆದ ದಾಳಿ ನಡೆದಿದೆ ಎಂದು ವರದಿಯಾಗಿದೆ.

ಸುಭಾಷ್ ಗುತ್ತೇದಾರ್ ಅವರ ಮಕ್ಕಳ ಮನೆ ಸೇರಿದಂತೆ ಒಟ್ಟು ಮೂರು ಮನೆಗಳಲ್ಲಿ ಶೋಧ ನಡೆಯುತ್ತಿದೆ. ಇದಲ್ಲದೆ ವಿವೇಕಾನಂದ ನಗರದಲ್ಲಿ ಚಾರ್ಟೆಡ್ ಅಕೌಂಟೆಂಟ್ ಮಲ್ಲಿಕಾರ್ಜುನ್ ಮಹಾಂತಗೋಳ ಅವರ ನಿವಾಸದ ಮೇಲೆಯೂ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.

ಆಳಂದದಲ್ಲಿ ಸುಮಾರು ಆರು ಸಾವಿರ ಮತಗಳ ಡಿಲೀಟ್ ಯತ್ನ ನಡೆದಿದೆ ಎಂದು ಇತ್ತೀಚೆಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರೂ ಆರೋಪಿಸಿದ್ದರು. ಈ ಸಂಬಂಧ ಕೆಲವು ಪುರಾವೆಗಳನ್ನೂ ಬಹಿರಂಗಪಡಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಡಾ.ಮೆಹೆವಿಶ್ ಮುಶೀರ್ ಶೇಖ್‌ಗೆ ಪಿಎಚ್‌ಡಿ ಪದವಿ

ಡಾ. ಮಮತಾ ಬಾಲಚಂದ್ರ ಅವರ ಮಾರ್ಗದರ್ಶನದಲ್ಲಿ ಹಾಗೂ ಡಾ. ನರೇಂದ್ರ ವಿ.ಜಿ....

ಯಾದಗಿರಿ | ₹2,500 ಬೆಳೆನಷ್ಟ ಪರಿಹಾರ ರೈತರ ನೋವಿಗೆ ಅವಮಾನ: ಭೀಮರಾಯ ಎಲ್ಹೇರಿ

ರಾಜ್ಯ ಸರ್ಕಾರ ರೈತರ ಬೆಳೆನಷ್ಟಕ್ಕೆ ಕೇವಲ ₹2,500 ಪರಿಹಾರ ಘೋಷಿಸಿರುವುದು ರೈತರ...

ಕಲಬುರಗಿ | ವರದಕ್ಷಿಣೆ ಕಿರುಕುಳ ಆರೋಪ; ಮಹಿಳೆ ಅನುಮಾನಾಸ್ಪದ ಸಾವು!

ವರದಕ್ಷಿಣೆ ಕಿರುಕುಳದ ಆರೋಪದ ನಡುವೆ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಗರದ...

ಕೊಡಗಿನಲ್ಲಿ ‘SIR’ ಪಬ್ಲಿಕ್ ಹಿಯರಿಂಗ್: ‘ಮತದಾನದ ಹಕ್ಕು ಕಸಿಯುವುದು ಅಷ್ಟು ಸುಲಭವಲ್ಲ’ -ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಎದುರಾಗುತ್ತಿರುವ ಸಮಸ್ಯೆಗಳು,...