ಜೂ. 24ರವರೆಗೆ ನ್ಯಾಯಾಂಗ ಬಂಧನ; ಪರಪ್ಪನ ಅಗ್ರಹಾರಕ್ಕೆ ಪ್ರಜ್ವಲ್‌ ರೇವಣ್ಣ

Date:

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಬಂಧಿತನಾಗಿ, ಎಸ್‌ಐಟಿ (ವಿಶೇಷ ತನಿಖಾ ತಂಡ) ವಶದಲ್ಲಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶಿಸಿದೆ.

ಅಶ್ಲೀಲ ವಿಡಿಯೋಗಳಿರುವ ಪೆನ್‌ಡ್ರೈವ್ ಪ್ರಕರಣದಲ್ಲಿ ಹತ್ತು ದಿನಗಳ ಹಿಂದೆ (ಮೇ 31) ಪ್ರಜ್ವಲ್‌ ರೇವಣ್ಣ ಬಂಧಿತನಾಗಿದ್ದ. ಅವರನ್ನು ವಶಕ್ಕೆ ಪಡೆದಿದ್ದ ಎಸ್‌ಐಟಿ ಕಸ್ಟಡಿ ಅವಧಿ ಸೋಮವಾರಕ್ಕೆ ಅಂತ್ಯವಾಗಿದೆ. ಹೀಗಾಗಿ ಎಸ್‌ಐಟಿ ಪೊಲೀಸರು ಇಂದು (ಜೂ.10) ಅವರನ್ನು ಮತ್ತೆ ನ್ಯಾಯಾಲಯಕ್ಕೆ ತನಿಖಾಧಿಕಾರಿಗಳು ಹಾಜರುಪಡಿಸಿದರು.

ಈ ಸಂದರ್ಭದಲ್ಲಿ ಎಸ್‌ಐಟಿ ಪೊಲೀಸರು, “ಪ್ರಜ್ವಲ್‌ ರೇವಣ್ಣ ವಿಚಾರಣೆ ಮುಗಿದಿದ್ದು, ಸದ್ಯಕ್ಕೆ ತಮ್ಮ ಕಸ್ಟಡಿಗೆ ಅವಶ್ಯಕತೆ ಇರುವುದಿಲ್ಲ” ಎಂದು 42ನೇ ಎಸಿಎಂಎಂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪ್ರಜ್ವಲ್‌ ಪರ ವಕೀಲರು ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಮನವಿ ಮಾಡಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ, ಜೂ.24ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿತು. ಈ ಮೂಲಕ ಪ್ರಜ್ವಲ್‌ ರೇವಣ್ಣ ಪರಪ್ಪನ ಅಗ್ರಹಾರ ಸೇರಲಿದ್ದಾರೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎನ್‌ಡಿಎ ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು: ಖರ್ಗೆ

ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ 'ಬೈ ಮಿಸ್ಟೇಕ್' ರಚನೆಯಾಗಿದೆ. ಆ ಸರ್ಕಾರ...

ಕಲಾ ಲೋಕದ ‌ಸ್ವಾಭಿಮಾನ ಮತ್ತು ಗುಲಾಮಗಿರಿ

ಅಕಾಡೆಮಿಗಳು - ಪ್ರಾಧಿಕಾರಗಳು - ಲಲಿತ ಕಲೆಗಳು - ಅಧ್ಯಕ್ಷರು ಮತ್ತು...

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಕಾರು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸಾವು

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದಿದ್ದು ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ....

ದ್ರೋಹಿಗಳನ್ನು ಮತ್ತೆ ನಮ್ಮ ಪಕ್ಷಕ್ಕೆ ಸೇರಿಸುವುದಿಲ್ಲ: ಶರದ್ ಪವಾರ್

ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೂ ಮುನ್ನ ತಮ್ಮ ಸೋದರಳಿಯ, ಉಪಮುಖ್ಯಮಂತ್ರಿ ಅಜಿತ್...