ಶಾಸಕ ಸ್ಥಾನಕ್ಕೆ ಕೆ ಎಲ್ ಶಿವಲಿಂಗೇಗೌಡ ರಾಜೀನಾಮೆ

Date:

  • ರಾಮಸ್ವಾಮಿ ಬೆನ್ನಲ್ಲೇ ಶಿವಲಿಂಗೇಗೌಡರ ರಾಜೀನಾಮೆ
  • ಹಾಸನದಲ್ಲಿ ಜೆಡಿಎಸ್‌ನ ಎರಡು ವಿಕೆಟ್‌ಗಳ ಪತನ

ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡಿದ್ದ ಅರಸೀಕೆರೆ ಶಾಸಕ ಕೆ ಎಲ್‌ ಶಿವಲಿಂಗೇಗೌಡ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ವಿಧಾನಸಭಾ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆ ಸಲ್ಲಿಸುವ ಮೂಲಕ ಶಿವಲಿಂಗೇಗೌಡ ಅವರು ಕಾಂಗ್ರೆಸ್ ಸೇರುವ ಹಾದಿಯನ್ನು ಸುಲಭ ಮಾಡಿಕೊಂಡಿದ್ದಾರೆ. ಈ ಹಿಂದೆ ಜೆಡಿಎಸ್‌ ತೊರೆದು ಕಾಂಗ್ರೆಸ್‌ ಪಕ್ಷ ಸೇರುವುದಾಗಿ ಘೋಷಿಸಿದ್ದರು.

ಜೆಡಿಎಸ್‌ನ ಅರಕಲಗೂಡು ಮಾಜಿ ಶಾಸಕ ಎ ಟಿ ರಾಮಸ್ವಾಮಿ ಬಿಜೆಪಿ ಸೇರ್ಪಡೆಯಾದ ಬೆನ್ನಲ್ಲೇ ಶಿವಲಿಂಗೇಗೌಡ ಅವರು ಜೆಡಿಎಸ್‌ಗೆ ವಿದಾಯ ಹೇಳಿದ್ದಾರೆ. ಈ ಮೂಲಕ ಹಾಸನ ಜೆಡಿಎಸ್‌ನ ಎರಡು ವಿಕೆಟ್‌ಗಳ ಪತನವಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಶಿವಲಿಂಗೇಗೌಡರು ರಾಜೀನಾಮೆ ಸಲ್ಲಿಸಲು ಸುಮಾರು 300ಕ್ಕೂ ಅಧಿಕ ಬೆಂಬಲಿಗರೊಂದಿಗೆ ಆಗಮಿಸಿದ್ದರು. ಜೆಡಿಎಸ್‌ ಭದ್ರಕೋಟೆ ಎನ್ನಲಾದ ಹಾಸನದಲ್ಲಿ ಒಬ್ಬೊಬ್ಬರೇ ನಾಯಕರು ಪಕ್ಷ ತೊರೆಯುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಎ ಟಿ ರಾಮಸ್ವಾಮಿ ಬಿಜೆಪಿ ಸೇರ್ಪಡೆ

ಎಪಿಎಂಸಿ  ರಾಮಚಂದ್ರ, ಜಿ.ಪಂ ಮಾಜಿ ಅಧ್ಯಕ್ಷ ಹುಚ್ಚೇಗೌಡ, ಸುರೇಶ ಚಗಚಗೇರಿ, ಈಶ್ವರಪ್ಪ ಚಗಚಗೇರಿ, ಬಿಳಿ ಚೌಡಯ್ಯ, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಗಂಡಸಿ ಅಯ್ಯಣ್ಣ, ಬಿ.ಎಂ.ಧರ್ಮಣ್ಣ, ಪ್ರಜ್ಚಲ್, ಹೆಗ್ಗಡೆ ಮಂಜಣ್ಣ, ನಾಗರಹಳ್ಳಿ ದೇವರಾಜು ಸೇರಿದಂತೆ ಇತರರು ಶಾಸಕರ ರಾಜೀನಾಮೆ ಸಂದರ್ಭದಲ್ಲಿದ್ದರು.

ಶಿವಲಿಂಗೇಗೌಡ ಅವರು 2008, 2013, 2018ರಲ್ಲಿ ಜೆಡಿಎಸ್ ಪಕ್ಷದಿಂದ ವಿಧಾನಸಭೆಗೆ ಆಯ್ಕೆ ಆಗಿದ್ದರು. ಈ ಬಾರಿಯ ಚುನಾವಣೆಗೆ ಕಾಂಗ್ರೆಸ್ ಟಿಕೆಟ್‌ನಿಂದ ಸ್ಪರ್ಧಿಸಲಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಿಂಗಾಲೇಶ್ವರ ಶ್ರೀಗಳಿಗೆ ತಪ್ಪು ತಿಳುವಳಿಕೆಯಾಗಿದ್ದರೆ ಬಗೆಹರಿಸುತ್ತೇವೆ: ಪ್ರಲ್ಹಾದ್‌ ಜೋಶಿ

ಫಕೀರ ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳುವಳಿಕೆಯಾಗಿದ್ದರೆ ಬಗೆಹರಿಸುತ್ತೇವೆ. ನನ್ನಿಂದ ತಪ್ಪಾಗಿದ್ದರೆ ಕ್ಷಮೆ...

ಹುಬ್ಬಳ್ಳಿ ಜನ್ಮಭೂಮಿ, ಬೆಳಗಾವಿ ಕರ್ಮಭೂಮಿ; ‌ನನ್ನ ಪ್ರಶ್ನಿಸುವ ನೈತಿಕತೆ ಕಾಂಗ್ರೆಸ್ಸಿಗಿಲ್ಲ: ಜಗದೀಶ್‌ ಶೆಟ್ಟರ್

ನನ್ನನ್ನು ಹೊರಗಿನವನು ಎಂದು ಕರೆಯುವ ನೈತಿಕ ಹಕ್ಕು ಕಾಂಗ್ರೆಸ್ಸಿಗರಿಗಿಲ್ಲ. ರಾಹುಲ್‌ ಗಾಂಧಿ...