ಆಂಧ್ರಪ್ರದೇಶ | ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ 14 ದಿನಗಳ ನ್ಯಾಯಾಂಗ ಬಂಧನ

Date:

ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಮತ್ತು ಆಂಧ್ರಪ್ರದೇಶದ ಮಾಜಿ ಸಿಎಂ ಎನ್. ಚಂದ್ರಬಾಬು ನಾಯ್ಡು ಅವರನ್ನು ಎಸಿಬಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಕೌಶಲ್ಯಾಭಿವೃದ್ಧಿ ನಿಗಮದ (ಎಪಿಎಸ್‌ಎಸ್‌ಡಿಸಿ) ಹಗರಣಕ್ಕೆ ಸಂಬಂಧಿಸಿದಂತೆ ನಾಯ್ಡು ಅವರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ನ್ಯಾಯಾಲಯವು ಭಾನುವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಆಂಧ್ರಪ್ರದೇಶದ ಮಾಧ್ಯಮಗಳು ವರದಿ ಮಾಡಿದೆ.

ವಿಜಯವಾಡದ ಎಸಿಬಿ ನ್ಯಾಯಾಲಯದ ನ್ಯಾಯಾಧೀಶೆ ಹಿಮಬಿಂದು ಅವರು ಪ್ರಕರಣದ ವಿಚಾರಣೆ ನಡೆಸಿದ ಬಳಿಕ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಬಳಿಕ ಮಾಜಿ ಸಿಎಂ ಅವರನ್ನು ರಾಜಮಂಡ್ರಿಯ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲು ಸೂಚಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಭಾನುವಾರ ಬೆಳಗ್ಗೆ ನಾಯ್ಡು ಅವರನ್ನು ಕೌಶಲ್ಯಾಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ವಿಜಯವಾಡದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಶನಿವಾರ ಬೆಳಗ್ಗೆ ಆಂಧ್ರಪ್ರದೇಶದ ಅಪರಾಧ ತನಿಖಾ ಇಲಾಖೆ (ಸಿಐಡಿ) ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಿತ್ತು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯ ದಿವಸ್ ಆಚರಣೆ | ಕಾರ್ಗಿಲ್ ಯೋಧ ಕ್ಯಾಪ್ಟನ್ ಕಾಲಿಯಾರಿಗೆ ದ್ರೋಹ ಬಗೆದ ಬಿಜೆಪಿ

ಇವತ್ತು ನಾವು ವಿಜಯ್ ದಿವಸ್ ಆಚರಿಸಿ, ನಮ್ಮ ಐನೂರು ಸೈನಿಕರ ಸಾವಿಗೆ...

ಮುಡಾ ದಾಖಲೆ ಬಹಿರಂಗ, ಮನೆ ಮುರುಕ ರಾಜಕಾರಣ ಬಿಡಿ ಎಂದು ಸಿಎಂ ಬಿಜೆಪಿಗೆ ತಿರುಗೇಟು

ಅಧಿವೇಶನದಲ್ಲಿ ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಆಡಳಿತ ಪಕ್ಷದವರು ಬೆಳಕು ಚೆಲ್ಲಿ...

ಬಿಜೆಪಿ ಪಾದಯಾತ್ರೆಯ ಪ್ರತಿ ದಿನ ಅವರ ಒಂದೊಂದು ಹಗರಣ ಬಯಲು: ಡಿ ಕೆ ಶಿವಕುಮಾರ್

ಬಿಜೆಪಿ ಪಾದಯಾತ್ರೆಯ ಪ್ರತಿ ದಿನವೂ ಅವರ ಒಂದೊಂದು ಹಗರಣ ಬಯಲು ಮಾಡುತ್ತೇವೆ...

ಏನಿದು ಮುಡಾ – ವಾಲ್ಮೀಕಿ ನಿಗಮ ಅಕ್ರಮ; ಈ ಹಿಂದೆ ಯಾವೆಲ್ಲಾ ಹಗರಣಗಳು ನಡೆದಿವೆ?

ಲೋಕಸಭಾ ಚುನಾವಣಾ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಮುಡಾ ಮತ್ತು...