ಘೋಷವಾಕ್ಯ ಬದಲಾವಣೆ | ಯಾವುದೇ ಆದೇಶ ಹೊರಡಿಸಲಾಗಿಲ್ಲ: ಸಚಿವ ಮಹದೇವಪ್ಪ ಸ್ಪಷ್ಟನೆ

Date:

ಜ್ಞಾನ ದೇಗುಲವಿದು ಎಂಬ ಘೋಷವಾಕ್ಯಕ್ಕೆ ಸಂಬಂಧಿಸಿದಂತೆ ಬೆಳಗಿನಿಂದ ಮಾಧ್ಯಮಗಳಲ್ಲಿ ಸುದ್ದಿಯು ಬಿತ್ತರವಾಗುತ್ತಿದೆ. ಸರ್ಕಾರದ ವತಿಯಿಂದ ಈಗ ಪ್ರಸ್ತುತ ಇರುವ ಘೋಷವಾಕ್ಯವನ್ನು ತೆಗೆದುಹಾಕುವ ಯಾವುದೇ ಆದೇಶ ಹೊರಡಿಸಲಾಗಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಎಚ್‌ ಸಿ ಮಹದೇವಪ್ಪ ಸ್ಪಷ್ಟನೆ ನೀಡಿದ್ದಾರೆ.

- Advertisement -

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, “ಸೃಜನಾತ್ಮಕ ಕಲಿಕೆಯ ದೃಷ್ಟಿಯಿಂದ, ಮಕ್ಕಳಲ್ಲಿ ವೈಜ್ಞಾನಿಕತೆ ಹಾಗೂ ವೈಚಾರಿಕತೆಯನ್ನು ಮೂಡಿಸಿ ಅವರಲ್ಲಿ ಯೋಚನಾ ಶಕ್ತಿಯನ್ನು ಹರಡುವ ದೃಷ್ಟಿಯಿಂದ ಸಾಮಾಜಿಕ ಜಾಲತಾಣದ ಗುಂಪಿನಲ್ಲಿ ಚರ್ಚೆಯನ್ನು ನಡೆಸಿದ್ದು, ಜ್ಞಾನ ದೇಗುಲವಿದು – ಧೈರ್ಯವಾಗಿ ಪ್ರಶ್ನಿಸಿ ಎಂದು ಶಾಲೆಗಳಲ್ಲಿ ಹಾಕಿದರೆ ಹೇಗೆ? ಎಂಬ ಆಲೋಚನೆಯನ್ನು ಕೆಲವರು ಮುಂದಿಟ್ಟಾಗ, ಅದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿರುತ್ತದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಉತ್ತಮ ಆಲೋಚನೆಯನ್ನು ಹೊಂದಿದ ಈ ಸಾಲನ್ನು ಕೆಲವರು ಶಾಲೆಗಳಲ್ಲೂ ಬಳಸಿರುತ್ತಾರೆ. ಅಂದಹಾಗೆ ಜ್ಞಾನ ದೇಗುಲವಿದು – ಧೈರ್ಯವಾಗಿ ಪ್ರಶ್ನಿಸಿ ಎಂದರೆ ಅದು ಕುವೆಂಪು ಅವರು ಹೇಳುವ ವಿಚಾರ ಕ್ರಾಂತಿಗೆ ಆಹ್ವಾನ ಪ್ರಬಂಧದ ಆಶಯವೇ ಆಗಿದ್ದು ಕುವೆಂಪು ಅವರಿಗೆ ಅವಮಾನ ಎಸಗುವ ಯಾವುದೇ ಪ್ರಮಾದವು ಇಲ್ಲಿ ಜರುಗಿರುವುದಿಲ್ಲ” ಎಂದು ಹೇಳಿದ್ದಾರೆ.

“ಶಿಕ್ಷಣದ ಉದ್ದೇಶವೇ ಮಕ್ಕಳಲ್ಲಿ ವೈಚಾರಿಕತೆಯ ಜೊತೆಗೆ, ಪ್ರಶ್ನಿಸುವ ಸಾಮರ್ಥ್ಯವನ್ನು ಬೆಳೆಸುವುದಾಗಿದೆ. ಐಸಾಕ್ ನ್ಯೂಟನ್, ಆಲ್ಬರ್ಟ್ ಐನ್ ಸ್ಟೀನ್ ನಿಂದ ಹಿಡಿದು ಬಹಳಷ್ಟು ವಿಜ್ಞಾನಿಗಳು ಇದನ್ನೇ ಪ್ರತಿಪಾದಿಸಿದ್ದು ಕಲಿಯುವ ಮಕ್ಕಳಲ್ಲಿ ಪ್ರಶ್ನಿಸುವ ಸಾಮರ್ಥವನ್ನು ಬೆಳೆಸುವ ನಿಟ್ಟಿನಲ್ಲಿ ಇಂತಹ ಆಲೋಚನೆಗಳನ್ನು ನಾವು ಮುಕ್ತ ಮನಸ್ಸಿನಿಂದ ಸ್ವಾಗತಿಸಬೇಕು. ನನ್ನ ಪ್ರಕಾರ ಇದೊಂದು ವಿವಾದದ ಅಂಶವೇ ಅಲ್ಲ” ಎಂದು ಮಹದೇವಪ್ಪ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...