ಎಸ್‌ ಎಂ ಕೃಷ್ಣ ಆರೋಗ್ಯ ಸ್ಥಿರ; ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ

Date:

Advertisements

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಸಿಎಂ ಎಸ್‌ ಎಂ ಕೃಷ್ಣ ಅವರು ವೈದ್ಯರ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ಸದ್ಯ ಐಸಿಯುನಲ್ಲಿಯೇ ಚಿಕಿತ್ಸೆ ಮುಂದುವರಿಸಲಾಗಿದೆ.

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆ ವೈದ್ಯರು, “ವೈದ್ಯಕೀಯ ಬೆಂಬಲದೊಂದಿಗೆ ಎಸ್‌ ಎಂ ಕೃಷ್ಣ ಅವರ ಆರೋಗ್ಯ ಸ್ಥಿರವಾಗಿದೆ. ಆಸ್ಪತ್ರೆಯ ತಜ್ಞ ವೈದ್ಯರಾದ ಡಾ. ಸುನಿಲ್ ನೇತೃತ್ವದ ತೀವ್ರ ನಿಗಾ ಘಟಕದ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ” ಎಂದು ತಿಳಿಸಿದ್ದಾರೆ.

15 ದಿನಗಳಿಂದ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ

Advertisements

ಎಸ್‌ ಎಂ ಕೃಷ್ಣ ಅವರಿಗೆ ಈಗ 92 ವರ್ಷ ವಯಸ್ಸಾಗಿದೆ. ವಯೋಸಹಜ ಆರೋಗ್ಯ ಸಮಸ್ಯೆಗಳ ಜತೆ ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಏಪ್ರಿಲ್‌ 28 ರಂದು ಅಸ್ವಸ್ಥರಾದ ಕೃಷ್ಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸತತ 15 ದಿನಗಳಿಂದಲೂ ಆಸ್ಪತ್ರೆಯಲ್ಲಿಯೇ ಅವರಿಗೆ ಚಿಕಿತ್ಸೆ ಮುಂದುವರಿದಿದೆ. ಅವರ ಪತ್ನಿ, ಮಕ್ಕಳು, ಮೊಮ್ಮಕ್ಕಳು ಎಸ್‌.ಎಂ.ಕೃಷ್ಣ ಅವರ ಆರೈಕೆಯಲ್ಲಿ ತೊಡಗಿದ್ದಾರೆ.

ವದಂತಿಗಳಿಗೆ ತೆರೆ

ಕೆಲ ದಿನಗಳ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ, ಕೆಲ ಮಾಧ್ಯಮಗಳಲ್ಲಿ ಎಸ್‌ ಎಂ ಕೃಷ್ಣ ಅವರ ಸಾವಿನ ಬಗ್ಗೆ ಸುಳ್ಳು ಸುದ್ದಿ ಹರಿದಾಡಿತು. ಈ ಹಿನ್ನೆಲೆ ಆಸ್ಪತ್ರೆ ವೈದ್ಯರು ನಿತ್ಯ ಅವರ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ನೀಡಿ, ಎಲ್ಲ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ಗಣ್ಯರ ಭೇಟಿ

ಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕದ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಅವರ ಆರೋಗ್ಯ ವಿಚಾರಿಸಿ ಬಂದಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಖರ್ಗೆ, ”ಎಸ್‌.ಎಂ. ಕೃಷ್ಣ ಅವರದ್ದು ಅತ್ಯಂತ ಶಿಸ್ತುಬದ್ಧ ಜೀವನ. ಅವರ ಸಂಪುಟದಲ್ಲಿ ಸಚಿವನಾಗಿ ಕಾರ್ಯನಿರ್ವಹಿಸಿದ್ದೆ. ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದೆ ಎಂದು ವೈದ್ಯರು ತಿಳಿಸಿದ್ದು, ಶೀಘ್ರ ಗುಣಮುಖರಾಗಲಿದ್ದಾರೆ” ಎಂದು ಹೇಳಿದರು.

”ಅನಾರೋಗ್ಯದ ಹಿನ್ನೆಲೆಯಲ್ಲಿಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬುದು ಗಮನಕ್ಕೆ ಬಂದಿತ್ತು. ಹಾಗಾಗಿ, ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದೇನೆ. ಆದಷ್ಟು ಬೇಗ ಗುಣಮುಖರಾಗಲಿದ್ದಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಣಿಪಾಲ್‌ ಆಸ್ಪತ್ರೆಗೆ ಸಂಜೆ ತೆರಳಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಎಸ್‌ ಎಂ ಕೃಷ್ಣ ಅವರ ಆರೋಗ್ಯ ವಿಚಾರಿಸಿ, ಶೀಘ್ರವಾಗಿ ಗುಣಮುಖರಾಗುವಂತೆ ಆಶಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X