ರಾಜ್ಯದ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ವಿಧಿವಶರಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದೆ. ಬುಧವಾರ (ಡಿ.11) ಎಸ್.ಎಂ ಕೃಷ್ಣ ಅವರ ಅಂತ್ಯಕ್ರಿಯೆ ನಡೆಯಲಿದೆ. ಹೀಗಾಗಿ, ಬುಧವಾರ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.
ರಾಜ್ಯದಲ್ಲಿ ಡಿಸೆಂಬರ್ 10ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆ ನಡೆಸಲು ಸರ್ಕಾರ ಘೋಷಿಸಿದೆ. ಈ ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲ ಕಟ್ಟಡಗಳ ಮೇಲೆ ಧ್ವಜಸ್ತಂಭದ ಅರ್ಧ ಭಾಗದಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿ, ಶ್ರದ್ಧಾಂಜಲಿ ಸಲ್ಲಿಸಲು ಸೂಚಿಸಲಾಗಿದೆ.
92 ವರ್ಷದ ಎಸ್.ಎಂ ಕೃಷ್ಣ ಅವರು ವಯೋಸಹಜ ಕಾಯಿಲೆಯಿಂದ ಮಂಗಳವಾರ ಮುಂಜಾನೆ ಕೊನೆಯುಸಿಳೆದಿದ್ದಾರೆ. ಅವರ ಹುಟ್ಟೂರು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಬುಧವಾರ ಸಕಲ ಸರ್ಕಾರಿ ಗೌರವಗಳೊಂದಗಿಎ ಅಂತ್ಯಕ್ರಿಯೆ ನೆರವೇರಿಸುವುದಾಗಿ ಸರ್ಕಾರ ತಿಳಿಸಿದೆ.