ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‌ ಶಾಸಕರಿಂದ ಒಗ್ಗಟ್ಟು ಪ್ರದರ್ಶನ

Date:

Advertisements
  • ಹಾಸನಕ್ಕೆ ತೆರಳಿ, ಹಾಸನಾಂಬೆಯ ದರ್ಶನ ಪಡೆದ ಶಾಸಕರು
  • ದೂರ ಯಳಿದ ಗುರುಮಿಟ್ಕಲ್ ಶಾಸಕ ಶರಣಗೌಡ ಕಂದಕೂರು 

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆಪರೇಷನ್ ಹಸ್ತ ಕಾರ್ಯಾಚರಣೆ ನಡೆಯುತ್ತಿದೆ ಎನ್ನುವ ಆರೋಪ ಮತ್ತು ಬಿಜೆಪಿ ಜೊತೆಗಿನ ಮೈತ್ರಿ ಹಿನ್ನೆಲೆಯಲ್ಲಿ ಬೇಸರಗೊಂಡಿರುವ ಕೆಲವು ಶಾಸಕರು ಪಕ್ಷ ತೊರೆಯಲಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಜೆಡಿಎಸ್‌ನ ಎಲ್ಲ ಶಾಸಕರು ಒಗ್ಗಟ್ಟು ಪ್ರದರ್ಶನ ಮಾಡಿದರು.

ಪಕ್ಷದ ಅಧ್ಯಕ್ಷ ಕುಮಾರಸ್ವಾಮಿ ನೇತೃತ್ವದಲ್ಲಿ ಎಲ್ಲರೂ ಹಾಸನಕ್ಕೆ ತೆರಳಿ, ಹಾಸನಾಂಬೆಯ ದರ್ಶನ ಪಡೆದರು. ಆದರೆ, ಈ ಶಕ್ತಿ ಪ್ರದರ್ಶನದ ವಿದ್ಯಮಾನದಿಂದ ಗುರುಮಿಟ್ಕಲ್ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರು ಮಾತ್ರ ದೂರ ಉಳಿದರು.

ಹಾಸನಾಂಬೆಯ ದರ್ಶನ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, “ಕಾಂಗ್ರೆಸ್‌ನ ಆಮಿಷಗಳಿಗೆ ಒಳಗಾಗಿ ಜೆಡಿಎಸ್ ಬಿಟ್ಟು ಹೋಗುವ ಶಾಸಕರು ಯಾರೂ ಇಲ್ಲ. ನಮ್ಮ ಪಕ್ಷದ ಶಾಸಕರ ಬಗ್ಗೆ ಅನುಮಾನ ಪಡುವ ಪರಿಸ್ಥಿತಿಯಿಲ್ಲ. ಎಲ್ಲರೂ ಒಂದು ಕುಟುಂಬದ ಸದಸ್ಯರಂತೆ ಇದ್ದೇವೆ” ಎಂದರು.

Advertisements

“ಪಕ್ಷದಲ್ಲಿ ಅಸಮಾಧಾನಗೊಂಡು ಬಿಟ್ಟು ಹೋಗುವವರು ಯಾರೂ ಇಲ್ಲ. ಆದರೂ ಕಾಂಗ್ರೆಸ್‍ನವರು ವಿನಾಕಾರಣ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಪದೇ ಪದೇ ಕಾಂಗ್ರೆಸ್‍ನವರು ಇಂತಹ ಗೊಂದಲದ ಸುದ್ದಿಯನ್ನು ಹರಡುತ್ತಿದ್ದಾರೆ. ಇದಕ್ಕೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಎಲ್ಲರೂ ಒಗ್ಗಟ್ಟಾಗಿದ್ದೇವೆ” ಎಂದು ಹೇಳಿದರು.

“ಈ ಎಲ್ಲ ಗೊಂದಲಗಳಿಗೆ ತೆರೆ ಎಳೆಯುವ ಉದ್ದೇಶದಿಂದಲೇ ಸಭೆ ನಡೆಸಿ ಶಾಸಕರ ಅಭಿಪ್ರಾಯಗಳನ್ನು ಪಡೆಯಲಾಗಿದೆ. ರಾಜ್ಯಕ್ಕಾಗಿರುವ ಅನ್ಯಾಯ ಸರಿಪಡಿಸಲು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲಾಗಿದೆ. ರಾಜ್ಯದ ಹಿತಕ್ಕಾಗಿ ಹೊಂದಾಣಿಕೆ ಹೊರತು ಬೇರೆನೂ ಇಲ್ಲ. ಈ ಹೊಂದಾಣಿಕೆ ಅಧಿಕಾರ, ಚುನಾವಣೆಗೆ ಮಾತ್ರ ಸೀಮಿತವಾಗಿಲ್ಲ” ಎಂದು ತಿಳಿಸಿದರು.‌

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಂಗಳೂರು ಮಳೆ: ಜನರಿಗೆ ನರಕದಿಂದ ಮುಕ್ತಿ ಸಿಗುವುದೆಂದು?

“ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಎಷ್ಟು ಸೀಟು ಗಳಿಸಲಿದೆ ಎಂಬುದು ಮುಖ್ಯವಲ್ಲ. ಜೆಡಿಎಸ್, ಬಿಜೆಪಿ ಸೇರಿ ರಾಜ್ಯದ 28 ಲೋಕಸಭಾ ಕ್ಷೇತ್ರವನ್ನು ಗೆಲ್ಲುವುದೇ ನಮ್ಮ ಮೊದಲ ಗುರಿಯಾಗಿದೆ” ಎಂದು ಹೇಳಿದರು.

“ಮುಖ್ಯಮಂತ್ರಿ ನಿವಾಸದಲ್ಲಿ ಉಪಾಹಾರ ಸಭೆ ನಡೆಸಿ ಕೆಲವು ಮಂತ್ರಿಗಳಿಗೆ ಪಕ್ಷಕ್ಕೆ ಬರುವವರನ್ನು ಕರೆ ತರಲು ಟಾಸ್ಕ್ ಕೊಟ್ಟಿದ್ದಾರೆ. ಅಲ್ಲದೇ ಉಪಮುಖ್ಯಮಂತ್ರಿಗಳು ಪದೇ ಪದೇ 45 ಮಂದಿ ಬಿಜೆಪಿ, ಜೆಡಿಎಸ್ ಪಕ್ಷದ ಶಾಸಕರು ಕಾಂಗ್ರೆಸ್ ಸೇರುತ್ತಾರೆಂದು ಹೇಳುತ್ತಿದ್ದಾರೆ. ಇದನ್ನು ತಡೆಯಲು ಯಾರು ಕಸರತ್ತು ಮಾಡುತ್ತಿದ್ದಾರೆ” ಎಂದು ಪ್ರಶ್ನಿಸಿದರು.

“ಈ ಸರ್ಕಾರ 5 ವರ್ಷ ಇದ್ದರೆ 10 ಲಕ್ಷ ಕೋಟಿ ಸಾಲ ಆಗಲಿದೆ. ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ ಎಂಬಂತಾಗಿದೆ ಗ್ಯಾರಂಟಿ ಯೋಜನೆಗಳು. ಬರವೀಕ್ಷಣೆ ನೆಪದಲ್ಲಿ ಎಲ್ಲೆಲ್ಲಿ ಸಮರ್ಥ ನಾಯಕರು ಇರುತ್ತಾರೋ, ಅವರನ್ನು ಹುಡುಕಿಕೊಂಡು ಕರೆದುಕೊಂಡು ಬನ್ನಿ” ಎಂದು ಕಿಡಿಕಾರಿದರು.

ಈ ವೇಳೆ ಜಿ ಟಿ ದೇವೇಗೌಡ, ಹಾಸನ ಶಾಸಕ ಸ್ವರೂಪ್ ಪ್ರಕಾಶ್ ಸೇರಿದಂತೆ ಪಕ್ಷದ ಶಾಸಕರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X