ಸಾರಿಗೆ ನೌಕರರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ ಸೋಲಿಡಾರಿಟಿ ಯೂತ್ ಮೂವ್ಮೆಂಟ್

Date:

ರಾಜ್ಯದ ಸಾರಿಗೆ ನಿಗಮಗಳ ನೌಕರರ ಹೋರಾಟಕ್ಕೆ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಬೆಂಬಲ ವ್ಯಕ್ತಪಡಿಸಿದೆ. ಕರ್ನಾಟಕ ರಾಜ್ಯದ ಸಾರಿಗೆ ನೌಕರರ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ತಿಳಿಸಿದೆ.

- Advertisement -

ರಾಜ್ಯದ ಸಾರಿಗೆ ನಿಗಮಗಳ ನೌಕರರು ಕಳೆದ ಹಲವು ತಿಂಗಳಿನಿಂದ ತಮ್ಮ ವೇತನ ಹಾಗೂ ಇತರ ಹಕ್ಕುಗಳ ಈಡೇರಿಕೆಗೆ ಶಾಂತಿಯುತ ಹೋರಾಟ ನಡೆಸುತ್ತಿದ್ದು, ಈ ಹೋರಾಟವು ಇದೀಗ ಗಂಭೀರ ಹಂತ ತಲುಪಿದೆ. ಜುಲೈ 30ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಜಂಟಿ ಕ್ರಿಯಾ ಸಮಿತಿಯ ನೇತೃತ್ವದಲ್ಲಿ ನಡೆದ ರಾಜ್ಯಮಟ್ಟದ ಉಪವಾಸ ಸತ್ಯಾಗ್ರಹದಲ್ಲಿ ನೌಕರರು ತಮ್ಮ ಆಕ್ರೋಶವನ್ನು ಬಹಿರಂಗಪಡಿಸಿದ್ದರು ಎಂದು ಪತ್ರಿಕಾ ಹೇಳಿಕೆಯಲ್ಲಿ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ಇದನ್ನು ಓದಿದ್ದೀರಾ? ಬೆಂಗಳೂರು | ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕದ ನೂತನ ಕಚೇರಿ ಉದ್ಘಾಟನೆ

“ಈ ಹಿಂದೆಯೇ, 2024ರ ಡಿಸೆಂಬರ್ 31ರಂದು ನೌಕರರು ನಡೆಸಿದ್ದ ಅನಿರ್ದಿಷ್ಟ ಮುಷ್ಕರವನ್ನು ಸರ್ಕಾರದ ಮನವಿಗೆ ಸ್ಪಂದಿಸಿ ಹಿಂತಿರುಗಿದರೂ, ನಂತರ ನಡೆದ ಸಭೆಗಳಲ್ಲಿ ನೀಡಲಾದ ಭರವಸೆಗಳು ಈವರೆಗೆ ಈಡೇರಿಲ್ಲ. ಇದರ ಪರಿಣಾಮವಾಗಿ ನೌಕರರಲ್ಲಿ ಅಸಮಾಧಾನ ಉಲ್ಬಣಗೊಂಡಿದ್ದು, ಜಂಟಿ ಕ್ರಿಯಾ ಸಮಿತಿ ಆಗಸ್ಟ್ 5ರಿಂದ ಅನಿರ್ದಿಷ್ಟಾವಧಿ ಮುಷ್ಕರವನ್ನು ಘೋಷಿಸಿರುವುದರಿಂದ ರಾಜ್ಯದ ಸಾರಿಗೆ ವ್ಯವಸ್ಥೆ ಅಸ್ತವ್ಯಸ್ತವಾಗುವ ಅಪಾಯ ಎದುರಾಗಿದೆ. ಸೋಲಿಡಾರಿಟಿ ಯೂತ್ ಮೂವ್ಮೆಂಟ್ – ಕರ್ನಾಟಕ ರಾಜ್ಯದ ಸಾರಿಗೆ ನೌಕರರ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುತ್ತದೆ” ಎಂದು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ರಾಜ್ಯಾಧ್ಯಕ್ಷ ಡಾ. ನಸೀಮ್ ಅಹ್ಮದ್ ಹೇಳಿದ್ದಾರೆ.

ಸಾರಿಗೆ ನೌಕರರು1

“ಆಗಸ್ಟ್ 1ರಂದು ಕ.ರಾ.ರ.ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನೇತೃತ್ವವನ್ನು ಭೇಟಿ ಮಾಡಿ, ನೌಕರರ ನ್ಯಾಯಸಮ್ಮತ ಬೇಡಿಕೆಗಳಿಗೆ ನಮ್ಮ ಸಂಘಟನೆಯ ಬೆಂಬಲವನ್ನು ನೇರವಾಗಿ ವ್ಯಕ್ತಪಡಿಸಿದ್ದೇವೆ. ಸಂಘಟನೆಯ ಪರವಾಗಿ ಈ ಹೋರಾಟಕ್ಕೆ ಸಾಥ್ ನೀಡುವುದಾಗಿ ಸಮಿತಿಗೆ ಭರವಸೆ ನೀಡಲಾಗಿದೆ” ಎಂದು ತಿಳಿಸಿದ್ದಾರೆ.

“ರಾಜ್ಯ ಸರ್ಕಾರ, ನೌಕರರ ಬೇಡಿಕೆಗಳನ್ನು ಮಾನವೀಯ ದೃಷ್ಟಿಕೋನದಿಂದ ಪರಿಗಣಿಸಿ ತ್ವರಿತವಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ. ಹಾಗೆಯೇ “ಸಾಮಾಜಿಕ ನ್ಯಾಯ ಮತ್ತು ಕಾರ್ಮಿಕ ಹಕ್ಕುಗಳ ರಕ್ಷಣೆಗೆ ನಾವು ಬದ್ಧರಾಗಿದ್ದೇವೆ” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...