ಪ್ರಕಾಶಕರು ಮತ್ತು ಬರಹಗಾರರ ಸಮಸ್ಯೆಗೆ ಪರಿಹಾರ; ಸಚಿವ ಮಧು ಬಂಗಾರಪ್ಪ ಭರವಸೆ

Date:

Advertisements

ಪ್ರಕಾಶನ ರಂಗ ಎದುರಿಸುತ್ತಿರುವ ಸಮಸ್ಯೆಗಳನ್ನು ಆದ್ಯತೆಯ ಮೇಲೆ ಪರಿಹರಿಸುವುದಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಭರವಸೆ ನೀಡಿದರು.

ಮಂಗಳವಾರ, ಬೆಂಗಳೂರಿನಲ್ಲಿ ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ನೇತೃತ್ವದಲ್ಲಿ ಪ್ರಕಾಶಕರ ನಿಯೋಗವು ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿ, ತಮ್ಮ ಸಮಸ್ಯೆಗಳನ್ನು ಪರಿಹರಿಸುವಂತೆ ಮನವಿ ಮಾಡಿತು.

2020ರಿಂದ ಮೂರು ವರ್ಷಗಳ ಪುಸ್ತಕಗಳನ್ನು ಖರೀದಿಸಿಲ್ಲ. ಇದರಿಂದಾಗಿ ರಾಜ್ಯದ ಎಲ್ಲೆಡೆ ಹೊಸ ಕೃತಿಗಳಿಂದ ಓದುಗರು ವಂಚಿತರಾಗಿದ್ದಾರೆ. ಬಿಬಿಎಂಪಿ ಗ್ರಂಥಾಲಯ ಕರ ಎಂದು 450 ಕೋಟಿ ರೂಗಳನ್ನು ಸಂಗ್ರಹಿಸಿದೆ. ಇದನ್ನು ಸಂಬಂಧಿಸಿದ ಇಲಾಖೆಗೆ ಹಸ್ತಾಂತರಿಸಿಲ್ಲ. ಇದರಿಂದಾಗಿ ಪ್ರಕಾಶನ ಉದ್ಯಮ ಕಂಗಾಲಾಗಿದೆ ಎಂದು ನಿಯೋಗವು ಸಚಿವರ ಗಮನಕ್ಕೆ ತಂದಿತು.

Advertisements

“ಪುಸ್ತಕ ಪ್ರಕಟನೆಯ ವೆಚ್ಚ ಇಂದು ಗಗನಕ್ಕೇರಿದೆ. ಆದರೆ ಸಗಟು ಖರೀದಿಯಲ್ಲಿ ಮಾತ್ರ ಹಳೆಯ ದರವನ್ನೇ ನಿಗದಿಪಡಿಸಿದ್ದಾರೆ. ಹೆಚ್ಚಿರುವ ಕಾಗದ, ಇಂಕು, ಮುದ್ರಣ ಬೆಲೆ, ಜಿ ಎಸ್ ಟಿ ಯಿಂದಾಗಿ ಪ್ರಕಾಶನ ರಂಗ ತತ್ತರಿಸಿದೆ. ಆದ್ದರಿಂದ ಒಂದು ಪುಟದ ಬೆಲೆಯನ್ನು ಇನ್ನೂ 40 ಪೈಸೆ ಹೆಚ್ಚಳ ಮಾಡಬೇಕು” ಎಂದು ಸಂಘ ಮನವಿ ಮಾಡಿತು.

ಮನವಿ ಸ್ವೀಕರಿಸಿ ಮಾತನಾಡಿದ ಮಧು ಬಂಗಾರಪ್ಪ, “ಪ್ರಕಾಶನ ರಂಗ ಇತರ ರಾಜ್ಯಗಳಲ್ಲಿ ಉತ್ತಮ ಸ್ಥಿತಿಯಲ್ಲಿದ್ದು ಕರ್ನಾಟಕದಲ್ಲಿ ಕಳೆದ ಕೆಲವು ವರ್ಷಗಳಿಂದ ದುಸ್ಥಿತಿಯಲ್ಲಿರುವ ಬಗ್ಗೆ ನಾನು ತಿಳಿದಿದ್ದೇನೆ. ಈ ಸಮಸ್ಯೆಗಳನ್ನು ನಾನು ಅಧ್ಯಯನ ಮಾಡಿ ಕ್ರಮೇಣ ಓದು ಸಂಸ್ಕೃತಿಯನ್ನು ಬಲಪಡಿಸುವ ಈ ಮಹತ್ವವಾದ ಕ್ಷೇತ್ರಕ್ಕೆ ಆದ್ಯತೆಯ ಮೇಲೆ ಪರಿಹಾರ ಒದಗಿಸುತ್ತೇನೆ” ಎಂದು ಭವರಸೆ ನೀಡಿದರು.

ನಿಯೋಗದಲ್ಲಿ ಪ್ರಕಾಶಕರ ಸಂಘದ ಅಧ್ಯಕ್ಷರಾದ ನಿಡಸಾಲೆ ಪುಟಸ್ವಾಮಯ್ಯ, ಕಾರ್ಯದರ್ಶಿ ಆರ್ ದೊಡ್ಡೇಗೌಡ, ಹಿರಿಯ ಪ್ರಕಾಶಕರುಗಳಾದ ನಿತಿನ್ ಶಾ, ಜಿ ಎನ್ ಮೋಹನ್, ಮಾನಸ, ಬಿ ಕೆ ಸುರೇಶ್, ನಿಡಸಾಲೆ ವಿಜಯ್ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X