ಶಿಸ್ತು ಉಲ್ಲಂಘನೆ ಮಾಡಿದ ಕಾರಣ ಬಂಡಾಯ ಶಾಸಕರಾದ ಎಸ್‌ಟಿ ಸೋಮಶೇಖರ್, ಶಿವರಾಮ ಹೆಬ್ಬಾರ್ ಅವರನ್ನು ಬಿಜೆಪಿ ಉಚ್ಚಾಟನೆ ಮಾಡಿದೆ. ಇತ್ತೀಚೆಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಲಾಗಿತ್ತು.
ಎಚ್ಚರಿಕೆ ನೀಡಿದರೂ ಪದೇ ಪದೇ ಶಿಸ್ತು ಉಲ್ಲಂಘನೆ ಮಾಡುತ್ತಿರುವ ಕಾರಣದಿಂದಾಗಿ ಇಬ್ಬರನ್ನೂ ಪಕ್ಷದ ಪ್ರಾಥಮಿಕ ಸದಸ್ಯತ್ವ ಮತ್ತು ಪಕ್ಷದ ಯಾವುದೇ ಹುದ್ದೆಯಿಂದ ಉಚ್ಚಾಟಿಸಲಾಗುತ್ತದೆ ಎಂದು ಕೇಂದ್ರ ಶಿಸ್ತು ಪಾಲನಾ ಸಮಿತಿ ತಿಳಿಸಿದೆ.
ಇದನ್ನು ಓದಿದ್ದೀರಾ? ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ
ಪಕ್ಷದ ನಾಯಕತ್ವದ ವಿರುದ್ಧ ಬಹಿರಂಗವಾಗಿ ಹೇಳಿಕೆಯನ್ನು ನೀಡುತ್ತಿದ್ದ ಕಾರಣ ಈಗಾಗಲೇ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಶಿಸ್ತು ಪಾಲನಾ ಸಮಿತಿ ಉಚ್ಚಾಟಿಸಿದೆ. ಬಳಿಕ ಬಂಡಾಯವೆದ್ದಿದ್ದ ಸೋಮಶೇಖರ್ ಮತ್ತು ಹೆಬ್ಬಾರ್ ಅವರಿಗೂ ಮಾರ್ಚ್ ಕೊನೆಯಲ್ಲಿ ಶೋಕಾಸ್ ನೋಟಿಸ್ ನೀಡಲಾಗಿತ್ತು.
ಈ ಶೋಕಾಸ್ ನೋಟಿಸ್‌ಗೆ ಉತ್ತರಿಸುವುದಾಗಿಯೂ ನಾಯಕರು ತಿಳಿಸಿದ್ದರು. ಆದರೆ ಇಬ್ಬರೂ ಕಾಂಗ್ರೆಸ್‌ನ ಸಭೆಗಳಲ್ಲಿ ಭಾಗಿಯಾಗುತ್ತಿದ್ದರು. ಇದೀಗ ಪದೇ ಪದೇ ಶಿಸ್ತು ಉಲ್ಲಂಘನೆ ಮಾಡಿದ ಕಾರಣ ಇಬ್ಬರನ್ನೂ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.
