ಯಾರೋ ಎಲ್ಲೋ ಕುಳಿತು ರಾಜ್ಯ ಬಿಜೆಪಿಯನ್ನು ನಿಯಂತ್ರಿಸುತ್ತಿದ್ದಾರೆ; ಸ್ವಪಕ್ಷೀಯರ ವಿರುದ್ಧವೇ ರೇಣುಕಾಚಾರ್ಯ ಕಿಡಿ

Date:

Advertisements

ಯಾರೋ ಎಲ್ಲೋ ಕುಳಿತು ರಾಜ್ಯ ಬಿಜೆಪಿ ಘಟಕ ನಿಯಂತ್ರಿಸುತ್ತಾರೆ. ಈ ರೀತಿಯಾದ ಧೋರಣೆ ಮುಂದುವರಿದರೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಗೆಲ್ಲೋದು ಕಷ್ಟ. ಇದುವರೆಗೆ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಮಾಡಬೇಕೆಂಬ ಬೇಡಿಕೆ ಇಟ್ಟರೂ ಈಡೇರಿಸಿಲ್ಲ ಎಂದು ಮಾಜಿ ಸಚಿವ, ಬಿಜೆಪಿ ನಾಯಕ ಎಂ.ಪಿ ರೇಣುಕಾಚಾರ್ಯ ಅವರು ಸ್ವಪಕ್ಷೀಯ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ ಅವರು, “ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಮನೆಯಲ್ಲಿ ಕೂರಿಸಿದ್ದು ಯಾಕೆ ಎಂಬ ಪ್ರಶ್ನೆ ಹೋದ ಬಂದಲೆಲ್ಲಾ ಕೇಳಲಾಗುತ್ತಿದೆ. ವಯಸ್ಸಾಯ್ತು ಎಂದು ಕೆಳಗಿಳಿಸಿದ್ದಕ್ಕೆ ಬಿಜೆಪಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದೆ. ಪಾದಯಾತ್ರೆ ಮಾಡಿ ಹಗಲಿರುಳು ಕಷ್ಟಪಟ್ಟು ಯಡಿಯೂರಪ್ಪನವರು ಬಿಜೆಪಿ ಕಟ್ಟಿರಲಿಲ್ವಾ. ಈಗ ಯಾರ್ಯೋರೋ ಬಂದು ಪಕ್ಷವನ್ನು ನಿಯಂತ್ರಣ ಮಾಡುತ್ತಿದ್ದಾರೆ” ಎಂದು ಕಿಡಿಕಾರಿದರು.

“ಯಡಿಯೂರಪ್ಪ ಅವರ ನಾಯಕತ್ವ ಬೇಕು. ಅವರನ್ನೇ ವಿರೋಧ ಪಕ್ಷದ ನಾಯಕರನ್ನಾಗಿ ಮಾಡಿ ಎಂದು ಜನರು ಹೇಳುತ್ತಿದ್ದಾರೆ. ವಿರೋಧ ಪಕ್ಷದ ನಾಯಕನ ಆಯ್ಕೆ ಇದುವರೆಗೆ ಆಗದ ಕಾರಣ ಬಿಜೆಪಿ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ. ಯಾಕೆ ಇಷ್ಟೊಂದು ತಡ ಮಾಡಲಾಗುತ್ತಿದೆ ಎಂಬುದು ಗೊತ್ತಾಗುತ್ತಿಲ್ಲ. ಆದಷ್ಟು ಬೇಗ ವಿಪಕ್ಷ ನಾಯಕನನ್ನು ನೇಮಿಸಬೇಕು. ಬಿಜೆಪಿ ರಾಜ್ಯಾಧ್ಯಕ್ಷರನ್ನು ಬದಲಿಸಬೇಕು. ಅದೂ ಸಮರ್ಥ ನಾಯಕತ್ವ ಹೊಂದಿರುವವರಿಗೆ ಮಾತ್ರ ಈ ಹುದ್ದೆ ಸಿಗುವಂತಾಗಬೇಕು” ಎಂದು ಹೇಳಿದರು.

Advertisements

“ಕಳೆದ ಎರಡು ವರ್ಷಗಳ ಹಿಂದೆಯೇ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಮಾಡಬೇಕೆಂಬ ಆಗ್ರಹ ಕೇಳಿ ಬಂದಿತ್ತು. ಆದರೂ ತಲೆಕೆಡಿಸಿಕೊಳ್ಳಲಿಲ್ಲ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರ ಬಗ್ಗೆ ನಾನು ಮಾತನಾಡುವುದಿಲ್ಲ. ಅವರು ದೇಶದಲ್ಲಿ ಬಿಜೆಪಿ ಜನಪ್ರಿಯತೆ ಗಳಿಸಲು ಕಾರಣರಾಗಿದ್ದಾರೆ. ಆದ್ರೆ, ಕರ್ನಾಟಕ ವಿಚಾರದಲ್ಲಿ ಯಡಿಯೂರಪ್ಪರನ್ನು ಕಡೆಗಣನೆ ಮಾಡಿ ಸಾಧಿಸಿದ್ದಾದರೂ ಏನು” ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ?: ಕಾಂಗ್ರೆಸ್‌ ಸಿದ್ಧಾಂತ ಒಪ್ಪಿಕೊಂಡು ಯಾರು ಬರುತ್ತಾರೋ ಬರಲಿ: ಮುಕ್ತ ಆಹ್ವಾನ ನೀಡಿದ ಸಿಎಂ ಸಿದ್ದರಾಮಯ್ಯ

“ಕಾಂಗ್ರೆಸ್‌ಗೆ ನನ್ನ ಅವಶ್ಯಕತೆ ಇಲ್ಲ. ನಾನು ಸೋತವನು. ಗೆದ್ದವರೇ ತುಂಬಾ ಜನ ಇದ್ದಾರೆ. ನನ್ನನ್ನು ಪಕ್ಷಕ್ಕೆ ಸೇರಿಸಿಕೊಂಡರೆ ಅವರಿಗೇನೂ ಲಾಭ. ರಾಜಕೀಯವೇ ಬೇರೆ, ವಿಶ್ವಾಸವೇ ಬೇರೆ. ಎರಡಕ್ಕೂ ಒಂದಕ್ಕೊಂದು ಸಂಬಂಧ ಕಲ್ಪಿಸುವುದು ಸರಿಯಲ್ಲ. ಈ ಹಿಂದೆಯೂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಹೊನ್ನಾಳಿಗೆ ಬರುವಂತೆ ಮನವಿ ಮಾಡಿದ್ದೆ, ಅವರೂ ಬಂದಿದ್ದರು” ಎಂದು ಹೇಳಿದರು.

“ಹೊನ್ನಾಳಿ – ನ್ಯಾಮತಿ ಅವಳಿ ತಾಲೂಕಿನ ರೈತರು ಸಂಕಷ್ಟಕ್ಕೆ ಈಡಾಗಿದ್ದಾರೆ. ಮಳೆ ಬಾರದ ಕಾರಣ ಸಮಸ್ಯೆಯಲಿದ್ದಾರೆ. ಈ ಹಿನ್ನೆಲೆಯಲ್ಲಿ ತಾಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡುವಂತೆ ಒತ್ತಾಯಿಸಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎ. ಮಲ್ಲಿಕಾರ್ಜುನ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ. ಇದರಲ್ಲಿ ರಾಜಕೀಯ ಅರ್ಥ ಕಲ್ಪಿಸುವುದು ಬೇಡ” ಎಂದು ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X