ನಾಡಗೀತೆ ವಿವಾದ | ಪ್ರಿಂಟ್ ಸಮಸ್ಯೆಯಿಂದ ವಿವಾದ; ಪ್ರಿಂಟ್​​ ಮಿಸ್ಟೇಕ್​ ಸರಿ ಪಡಿಸುತ್ತೇವೆ: ಶಿವರಾಜ್​ ತಂಗಡಗಿ

Date:

ಒಂದು ಸಣ್ಣ ಪ್ರಿಂಟ್ ಸಮಸ್ಯೆ ಆಗಿದ್ದು ಇಷ್ಟೆಲ್ಲಾ ವಿವಾದಕ್ಕೆ ದಾರಿಮಾಡಿಕೊಟ್ಟಿದೆ. ನಮಗೆ ಎಲ್ಲ ಶಾಲೆಗಳು ಒಂದೇ. ಆದೇಶ ಮಾಡಬೇಕಾದರೆ ಸರ್ಕಾರಿ ಶಾಲೆ, ಅನುದಾನಿತ‌ ಶಾಲೆ, ಅಂತ ಪ್ರಿಂಟ್​​ ಮಿಸ್ಟೇಕ್​ ಆಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್​ ತಂಗಡಗಿ ಸ್ಪಷ್ಟನೆ ನೀಡಿದ್ದಾರೆ.

ಖಾಸಗಿ ಶಾಲೆಗಳಲ್ಲಿ ಇನ್ಮುಂದೆ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬರ್ಥದ ಸುತ್ತೋಲೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಸ್ಪಷ್ಟನೆ ನೀಡಿ, “ಅದು ಎಲ್ಲ ಶಾಲೆಗಳು ಅಂತ ತಿದ್ದುಪಡಿ ಮಾಡಿಸುತ್ತೇವೆ. ನಮ್ಮ ಸರ್ಕಾರಕ್ಕೆ ಕನ್ನಡದ ಬಗ್ಗೆ ಕಾಳಜಿ ಇದೆ. ನಾವು ಬಹಳ ಸ್ಪಷ್ಟವಾಗಿ ಇದ್ದೇವೆ” ಎಂದು ಸುದ್ದಿಗಾರರಿಗೆ ತಿಳಿಸಿದರು.

“ಆದೇಶ ಪ್ರತಿಯ ಸಾಧಕ-ಬಾಧಕ ಹೇಳಬೇಕು. ಸಹಜವಾಗಿ ಸುತ್ತೋಲೆ ಒಳಗಡೆ ಸಣ್ಣಪುಟ್ಟ ಸಮಸ್ಯೆ ಆಗಿದೆ, ತಿದ್ದಿಕೊಳ್ಳುತ್ತೇವೆ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇನ್ನು ನಾಮಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಕಡ್ಡಾಯ ವಿಚಾರವಾಗಿ ಮಾತನಾಡಿದ ಅವರು, ಸದನದಲ್ಲಿ ಚರ್ಚೆ ಆಗಿದೆ. ಕೈಗಾರಿಗೆಗಳಿಗೂ ಹೆಸರು ಹಾಕುವ ಪದ್ಧತಿ ಬರುತ್ತಿದೆ ಎಂದರು.

“ವಿಧಾನಸೌಧದ ಮುಂಭಾಗ ಭುವನೇಶ್ವರಿ ದೇವಿ ಪ್ರತಿಮೆ ನಿರ್ಮಾಣ ವಿಚಾರವಾಗಿ ಮಾತನಾಡಿದ ಅವರು, ಅದರ ಬಗ್ಗೆ ಚರ್ಚೆ ಆಗುತ್ತಿದೆ. ವಿಧಾನಸೌಧ ಮುಂಭಾಗದಲ್ಲಿ ಜಾಗ ಗುರುತಿಸಲಾಗಿದೆ. ಆದಷ್ಟು ಬೇಗ ಇದರ ಬಗ್ಗೆ ಮಾಹಿತಿ ಒದಗಿಸುತ್ತೇವೆ” ಎಂದು ತಿಳಿಸಿದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ 6 ಜನರ ಸಾವು

ಇಂದು ಮುಂಜಾನೆ ಹಾಸನ ಹೊರವಲಯದ ಕಂಡ್ಲಿ ಈಚನಹಳ್ಳಿ ಗ್ರಾಮ ಬಳಿಯ ಬೆಂಗಳೂರು-ಮಂಗಳೂರು...

ನಿರ್ಗಮಿಸುವ ಪ್ರಧಾನಿ ತನ್ನನ್ನು ತಾನು ದೇವಮಾನವನೆಂದು ಭಾವಿಸಬಹುದು: ಕಾಂಗ್ರೆಸ್‌

"ನಿರ್ಗಮಿಸುತ್ತಿರುವ ಪ್ರಧಾನಿ ಸೋಲಿನ ವಾಸ್ತವ ತಿಳಿಯುತ್ತಿದ್ದಂತೆ, ಹೆಚ್ಚು ಭ್ರಮೆಯಲ್ಲಿದ್ದಾರೆ. ಅದಕ್ಕೆ ತನ್ನ...

ಕೊಪ್ಪಳ | ಜನಪರ ಚಳವಳಿಗಳ ಚೇತನವನ್ನು ನಾವು ಉಳಿಸಿಕೊಂಡಿಲ್ಲ : ಕೆ.ಫಣಿರಾಜ್

ದಶಕಗಳ ಹಿಂದೆ ನಡೆದಿರುವ ಜನಪರ ಚಳವಳಿಗಳ ಚೇತನವನ್ನು ನಾವು ಉಳಿಸಿಕೊಂಡಿಲ್ಲ. ಆದರೆ...

ಮಾಜಿ ಶಾಸಕ ಕೆ ರಘುಪತಿ ಭಟ್ ಬಿಜೆಪಿಯಿಂದ ಉಚ್ಚಾಟನೆ

ವಿಧಾನ ಪರಿಷತ್ ಟಿಕೆಟ್ ನೀಡದ ಕಾರಣಕ್ಕಾಗಿ ಬಿಜೆಪಿಯೊಳಗೆ ಬಂಡಾಯ ಎದ್ದು, ನೈಋತ್ಯ...