ವಿಪಕ್ಷಗಳ ಬೆಂಗಳೂರು ಸಭೆಯಲ್ಲಿ ಸೋನಿಯಾ ಗಾಂಧಿ ಪಾಲ್ಗೊಳ್ಳುವ ನಿರೀಕ್ಷೆ

Date:

ಬೆಂಗಳೂರಿನಲ್ಲಿ ಜುಲೈ 17 ಮತ್ತು 18 ರಂದು ನಡೆಯಲಿರುವ ವಿಪಕ್ಷಗಳ ಮುಂದಿನ ಸಭೆಯಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಕರ್ನಾಟಕ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೋಮವಾರ ಹೇಳಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ದೇಶದ ಬದಲಾವಣೆಗಾಗಿ ನಡೆಯಲಿರುವ ಮಹಾನ್ ಆಂದೋಲನಕ್ಕೆ ಸೇರಲು ಬಯಸುವ ಎಲ್ಲ ನಾಯಕರನ್ನು ನಾವು ಸ್ವಾಗತಿಸುತ್ತೇವೆ. ಈಗಾಗಲೇ ಘೋಷಿಸಿರುವಂತೆ ಜುಲೈ 17 ಮತ್ತು 18ರಂದು ದೇಶದ ವಿರೋಧ ಪಕ್ಷಗಳ  ನಾಯಕರ ಸಭೆ ನಡೆಯಲಿದ್ದು, ಎಲ್ಲ ನಾಯಕರು ಭಾಗವಹಿಸಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಭಾಗವಹಿಸುವಂತೆ ಮನವಿ ಮಾಡಿದ್ದೇವೆ. ಈ ಸಭೆಯಲ್ಲಿ ಅವರು ಭಾಗವಹಿಸುತ್ತಾರೆ ಎಂಬ ಸಂದೇಶ ನಮಗೆ ಬಂದಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಈ ಸುದ್ದಿ ಓದಿದ್ದೀರಾ? ಶಿಕ್ಷಕರ ನೇಮಕಾತಿ ಹಗರಣ; ಟಿಎಂಸಿಯ ಅಭಿಷೇಕ್ ಬ್ಯಾನರ್ಜಿಗೆ ಸುಪ್ರೀಂ ಕೋರ್ಟಿನಲ್ಲಿ ಹಿನ್ನಡೆ

ರಾಹುಲ್‌ ಅನರ್ಹತೆ ವಿರುದ್ಧ ಪ್ರತಿಭಟನೆ

“ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಜುಲೈ 12 ರಂದು ಎಲ್ಲ ರಾಜ್ಯ ಕೇಂದ್ರ ಕಚೇರಿಗಳಲ್ಲಿ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಪಕ್ಷವು ಮೌನ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ನಾನು ನ್ಯಾಯಾಲಯದ ತೀರ್ಪಿನ ಬಗ್ಗೆ ಮಾತನಾಡಲು ಬಯಸುವುದಿಲ್ಲ. ಆದರೆ ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ ಮುಗಿಸಲು ಅವರ ವಿರುದ್ಧ ನಡೆಯುತ್ತಿರುವ ರಾಜಕೀಯ ಪಿತೂರಿಯನ್ನು ನಾವು ಖಂಡಿಸುತ್ತೇ ವೆ” ಎಂದರು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೆಳಗ್ಗೆ 10ರಿಂದ ಸಂಜೆ 4ರವರೆಗೆ ಬಾಯಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಪ್ರತಿಭಟನೆ ನಡೆಸಲಾಗುವುದು ಎಂದು ಡಿ ಕೆ ಶಿವಕುಮಾರ್  ತಿಳಿಸಿದರು.

ಕೇಂದ್ರದ ಬಿಜೆಪಿ ಸರ್ಕಾರದ ಷಡ್ಯಂತ್ರದ ವಿರುದ್ಧದ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಪಕ್ಷದ ಎಲ್ಲಾ ಪದಾಧಿಕಾರಿಗಳು, ಸಾರ್ವಜನಿಕ ಪ್ರತಿನಿಧಿಗಳು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಶಿವಕುಮಾರ್ ಹೇಳಿದರು.

ರಾಹುಲ್ ಗಾಂಧಿಯವರ ಮೋದಿ ಉಪನಾಮದ ಟೀಕೆಗಳ ಮೇಲಿನ 2019 ರ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಯವರ ಅನರ್ಹತೆ ಶಿಕ್ಷೆಗೆ ತಡೆಯಾಜ್ಞೆ ನೀಡಲು ಗುಜರಾತ್ ಹೈಕೋರ್ಟ್ ನಿರಾಕರಿಸಿದ ನಂತರ ಕಾಂಗ್ರೆಸ್ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌಜನ್ಯ ಕೊಲೆ ಪ್ರಕರಣ: ಎಸ್‌ಐಟಿ ತನಿಖೆ ಚುರುಕು, ತಾಯಿ ಕುಸುಮಾವತಿ ರಕ್ತದ ಮಾದರಿ ಸಂಗ್ರಹ

ಧರ್ಮಸ್ಥಳದಲ್ಲಿ ನಡೆದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಯನ್ನು ವಿಶೇಷ...

ಚಿಕ್ಕಮಗಳೂರು | ಹಬ್ಬಕ್ಕೆ ಹೊಸ ಬಟ್ಟೆ ಖರೀದಿಸಲು ಹೋಗಿ ಯುವಕ ಸಾವು 

ಜಿಲ್ಲೆಯ ಅಜ್ಜಂಪುರ ತಾಲೂಕಿನ ನವರಾತ್ರಿ ಸಡಗರದಲ್ಲಿದ್ದ ವೇಳೆ ಬಟ್ಟೆ ಖರೀದಿಸಲು ಹೋಗಿದ್ದ...

ವಿಜಯಪುರ | ಮತದಾರರ ಹಕ್ಕು ಕಸಿಯುವ ಪ್ರಯತ್ನ: ಎಸ್‌ಐಆರ್ ವಿರುದ್ಧ ವಿಜಯಪುರದಲ್ಲಿ ತಿರಂಗ ಯಾತ್ರೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ...

ಉತ್ತರ ಕನ್ನಡ | ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ: ಜಿಲ್ಲೆಯಲ್ಲಿ ಶೇ.76.52ರಷ್ಟು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಉತ್ತರ ಕನ್ನಡ...