ದೆಹಲಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಂಸದರ ಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕಿಯಾಗಿ ಸೋನಿಯಾ ಗಾಂಧಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯು ಹಳೆಯ ಸಂಸತ್ ಭವನದ ಸೆಂಟ್ರಲ್ ಹಾಲ್‌ನಲ್ಲಿ ನಡೆಯುತ್ತಿದ್ದು, ಈ ಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ (ಸಿಪಿಪಿ) ಅಧ್ಯಕ್ಷ ಸ್ಥಾನಕ್ಕೆ ಸೋನಿಯಾ ಗಾಂಧಿ ಹೆಸರನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪಿಸಿದರು.
ಪಕ್ಷದ ಮುಖಂಡರಾದ ಗೌರವ್ ಗೊಗೋಯ್, ತಾರಿಕ್ ಅನ್ವರ್, ಕೆ ಸುಧಾಕರನ್ ಅವರು ಪ್ರಸ್ತಾವನೆಯನ್ನು ಅನುಮೋದಿಸಿದರು. ಆ ಮೂಲಕ ಸೋನಿಯಾ ಗಾಂಧಿ ಅವರನ್ನು ಅವಿರೋಧವಾಗಿ ಮರು ಆಯ್ಕೆ ಮಾಡಲಾಗಿದೆ.
ನೂತನವಾಗಿ ಸಂಸದರಾಗಿ ಆಯ್ಕೆಯಾದವರಿಗೆ ಅಭಿನಂದನೆ ಸಲ್ಲಿಸಿದ ಸೋನಿಯಾ ಗಾಂಧಿ, “ಭಾರತ್ ಜೋಡೋ ಯಾತ್ರೆ ಮತ್ತು ಭಾರತ್ ಜೋಡೋ ನ್ಯಾಯ್ ಯಾತ್ರೆ ನಿಜವಾಗಿಯೂ ಐತಿಹಾಸಿಕ ಚಳವಳಿಗಳಾಗಿತ್ತು. ಈ ಎರಡು ಚಳವಳಿಯು ನಮ್ಮ ಪಕ್ಷವನ್ನು ಎಲ್ಲಾ ಹಂತಗಳಲ್ಲಿ ಪುನರುಜ್ಜೀವನಗೊಳಿಸಿತು. ಪ್ರಬಲ ಮತ್ತು ದುರುದ್ದೇಶಪೂರಿತ ತಂತ್ರದ ವಿರುದ್ಧವಾಗಿ ಕಾಂಗ್ರೆಸ್ ಮತ್ತೊಮ್ಮೆ ತನ್ನ ಛಲ ಪ್ರದರ್ಶಿಸಿದೆ” ಎಂದು ಹೇಳಿದರು.
VIDEO | Congress president Mallikarjun Kharge (@kharge) and party leader Sonia Gandhi leave after attending the Congress parliamentary committee meeting at Samvidhan Sadan.
(Full video available on PTI Videos – https://t.co/n147TvqRQz) pic.twitter.com/BRFxBR3OQp
— Press Trust of India (@PTI_News) June 8, 2024
ಈ ನಡುವೆ ಇಂದು ಬೆಳಗ್ಗೆ ದೆಹಲಿಯಲ್ಲಿ ಕಾಂಗ್ರೆಸ್‌ನ ನೀತಿ ನಿರ್ಧಾರಗಳನ್ನು ಕೈಗೊಳ್ಳುವ ಕಾರ್ಯಕಾರಿ ಸಮಿತಿ ಸಭೆ ಕೂಡ ನಡೆಸಲಾಗಿದ್ದು, ಈ ಸಭೆಯಲ್ಲಿ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ವಹಿಸಿಕೊಳ್ಳುವಂತೆ ಸರ್ವಾನುಮತದಿಂದ ರಾಹುಲ್ ಗಾಂಧಿಯವರಿಗೆ ಮನವಿ ಮಾಡಿದೆ.
Here is the speech delivered by Smt. Sonia Gandhi on her being re-elected unanimously by acclamation as Chairperson of the Congress Parliamentary Party this evening in the Central Hall of Parliament. pic.twitter.com/oKxGNb7Wr4
— Jairam Ramesh (@Jairam_Ramesh) June 8, 2024
“ಲೋಕಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ವಹಿಸಿಕೊಳ್ಳುವಂತೆ ಸರ್ವಾನುಮತದಿಂದ ರಾಹುಲ್ ಗಾಂಧಿಯವರಿಗೆ ಮನವಿ ಮಾಡಲಾಗಿದೆ” ಎಂದು ಎಐಸಿಸಿ ಸಂಘಟನಾ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ತಿಳಿಸಿದ್ದರು.
