ಕಾಂಗ್ರೆಸ್‌ನ ಅಧಿನಾಯಕಿ ಸೋನಿಯಾಗಾಂಧಿ ಅವರು ರಾಜ್ಯಸಭಾ ಚುನಾವಣೆಗೆ ರಾಜಸ್ಥಾನದಿಂದ ನಾಳೆ(ಫೆ.14) ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಮಂಗಳವಾರ ಸಂಜೆ ಖಚಿತಪಡಿಸಿವೆ.
ನಾಮಪತ್ರ ಸಲ್ಲಿಸುವ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಉಪಸ್ಥಿತರಿರಲಿದ್ದಾರೆ ಎಂದು ಮಾಹಿತಿ ನೀಡಿದೆ.
ರಾಜಸ್ಥಾನ, ಹಿಮಾಚಲ ಪ್ರದೇಶ, ಮಧ್ಯಪ್ರದೇಶದ ಕಾಂಗ್ರೆಸ್ ಘಟಕಗಳು, ಮುಖಂಡರು ತಮ್ಮ ರಾಜ್ಯದಿಂದಲೇ ಸ್ಪರ್ಧಿಸಲು ಅವರಿಗೆ ಮನವಿ ಮಾಡಿದ್ದವು. ಈ ಪೈಕಿ ರಾಜಸ್ಥಾನ ಸುರಕ್ಷಿತ ಎಂಬ ತೀರ್ಮಾನಕ್ಕೆ ನಾಯಕರು ಬಂದಿದ್ದರಿಂದ ಕೊನೆಗೆ ಸೋನಿಯಾ ಅವರು ರಾಜಸ್ಥಾನ ಆಯ್ಕೆ ಮಾಡಿರುವುದಾಗಿ ವರದಿಯಾಗಿದೆ.
ಫೆಬ್ರವರಿ 27ರಂದು ಚುನಾವಣೆ ನಡೆಯಲಿದ್ದು, ಫೆ.15 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಆದರೂ ಕಾಂಗ್ರೆಸ್ ತನ್ನ ಯಾವುದೇ ಅಭ್ಯರ್ಥಿಗಳ ಪಟ್ಟಿಯನ್ನು ಇದುವರೆಗೂ ಬಿಡುಗಡೆ ಮಾಡಿಲ್ಲ.
Rahul Gandhi and Sachin Pilot arrived at Delhi airport .
Sonia Gandhi ji will be filing her nomination for Rajya sabha from Jaipur tomorrow .
They will be accompanying Sonia ji tomorrow .pic.twitter.com/TKnBwiuHy9
— Surbhi (@SurrbhiM) February 13, 2024
ಸೋನಿಯಾ ಅವರು ಮೊದಲ ಅವಧಿಗೆ ಅಮೇಠಿಯಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. ಸದ್ಯ, ರಾಯ್ ಬರೇಲಿ ಕ್ಷೇತ್ರ ಪ್ರತಿನಿಧಿಸುತ್ತಿದ್ದು, ಇಲ್ಲಿಂದ ಪ್ರಿಯಾಂಕಾಗಾಂಧಿ ಅವರು ಲೋಕಸಭೆಗೆ ಸ್ಪರ್ಧಿಸುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.
ಸೋನಿಯಾ ಗಾಂಧಿ ನಾಮಪತ್ರ ಸಲ್ಲಿಕೆಯ ಹಿನ್ನೆಲೆಯಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿದ್ದ ರಾಹುಲ್ ಗಾಂಧಿಯವರು ಸಂಜೆ ದೆಹಲಿಗೆ ತಲುಪಿರುವುದಾಗಿ ವರದಿಯಾಗಿದೆ.