ತುರ್ತು ಪರಿಸ್ಥಿತಿ ಹೇರಿದ್ದರ ಬಗ್ಗೆ ಈಗ ಸೋನಿಯಾ, ರಾಹುಲ್ ದೇಶದ ಕ್ಷಮೆ ಕೇಳಲಿ: ಆರ್‌ ಅಶೋಕ್

Date:

‌ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿ ಖಂಡಿಸಿ ಸ್ವಾತಂತ್ರ್ಯ ಉದ್ಯಾನವನದ ಬಳಿ ಬಿಜೆಪಿ ಪ್ರತಿಭಟನೆ ಮತ್ತು ಪೋಸ್ಟರ್‌ ಅಭಿಯಾನ ನಡೆಸಿತು.

- Advertisement -

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಈ ವೇಳೆ ಮಾತನಾಡಿ, “ತುರ್ತು ಪರಿಸ್ಥಿತಿ ಹೇರಿದ್ದರ ಬಗ್ಗೆ ರಾಹುಲ್ ಗಾಂಧಿ ದೇಶದ ಕ್ಷಮೆ ಕೇಳಬೇಕು. ತುರ್ತು ಪರಿಸ್ಥಿತಿಯಿಂದ ದೇಶಕ್ಕೆ ದ್ರೋಹ ಬಗೆದಿದ್ದೇವೆ. ಸಂವಿಧಾನಕ್ಕೆ ಅಪಚಾರ ಮಾಡಿದ್ದೇವೆ” ಎಂದು ಒಪ್ಪಿಕೊಳ್ಳಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಕಾಂಗ್ರೆಸ್‌ನವರು ಬಿಜೆಪಿಯೇ ಸಂವಿಧಾನ ಬದಲಿಸುತ್ತಿದೆ ಎಂದು ಹೇಳುತ್ತಾರೆ. ನಾವೇನೂ ಬದಲಾವಣೆ ಮಾಡಿಲ್ಲ. ಮಾಡದೇ ಇದ್ದರೂ ನಮ್ಮ ಮೇಲೆ ಅಪವಾದ ಹೊರಿಸುತ್ತಾರೆ. ಸಂವಿಧಾನಕ್ಕೆ ಅಪಚಾರ ಬಗೆದವರು, ದ್ರೋಹ ಬಗೆದವರು ಕಾಂಗ್ರೆಸ್ಸಿಗರು” ಎಂದು ಟೀಕಿಸಿದರು.

“ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರು ರಾಮಲೀಲಾ ಮೈದಾನಕ್ಕೆ ಬಂದು ದೇಶದ ಮುಂದೆ ತಲೆಬಾಗಿ ನಿಂತು, ದೇಶದ ಜನರ ಮುಂದೆ ತಲೆಬಗ್ಗಿಸಿ, ನಾವು ಸಂವಿಧಾನಕ್ಕೆ ಅಪಚಾರ ಮಾಡಿದ್ದಾಗಿ ಕ್ಷಮೆ ಕೇಳಬೇಕು” ಎಂದು ಒತ್ತಾಯಿಸಿದರು.

“ತುರ್ತು ಪರಿಸ್ಥಿತಿಯಲ್ಲಿ ನನ್ನನ್ನು ಬಂಧಿಯಾಗಿ ಮಾಡಿದ್ದ ಬ್ಯಾರಕ್ ಇನ್ನೂ ಉಳಿದಿದೆ. ಅಲ್ಲಿಂದಲೇ ನಾವೆಲ್ಲರೂ ಪ್ರತಿಭಟನೆ ನಡೆಸುತ್ತಿದ್ದೇವೆ. ದೇಶದ್ರೋಹಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರದಲ್ಲಿದೆ. ಎಮರ್ಜೆನ್ಸಿ ಎಂದರೆ ಕರಾಳ ದಿನ” ಎಂದರು.

ಪೋ‌ಸ್ಟರ್‌ ಅಭಿಯಾನದಲ್ಲಿ ಸಿ ಎನ್ ಅಶ್ವಥನಾರಾಯಣ್, ಶಾಸಕ ಮುನಿರಾಜು, ವಿಧಾನಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಛಲವಾದಿ ನಾರಾಯಣ ಸ್ವಾಮಿ, ಕೇಶವಪ್ರಸಾದ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜೀವರಕ್ಷಕ ಔಷಧಗಳ ಬೆಲೆ ನಿಯಂತ್ರಣ: ತ್ವರಿತ ಕ್ರಮ ಜಾರಿಗೊಳಿಸಲು ಕೇಂದ್ರಕ್ಕೆ ರಾಜ್ಯದ ಒತ್ತಾಯ

ಕ್ಯಾನ್ಸರ್ ಔಷಧಿಗಳು ಸೇರಿದಂತೆ ಅತ್ಯಗತ್ಯ ಔಷಧಗಳ ಮೇಲೆ ವಿಧಿಸಲಾಗುತ್ತಿರುವ ಹೆಚ್ಚಿನ ದರದ...

ಸಿಜೆಪಿ ಪ್ರತಿಭಟನೆ ವೇಳೆ ವಕೀಲರ ಬಂಧನ: ಮಧ್ಯಪ್ರವೇಶಿಸಿ ಬಿಡುಗಡೆಗೆ ಸೂಚಿಸಿದ ಸುಪ್ರೀಂ ಕೋರ್ಟ್

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ನ್ಯಾಯಮೂರ್ತಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ...

ದೆಹಲಿ ಸಿಜೆಪಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ: ರಾಜ್ಯಾದ್ಯಂತ ಪಂಜಿನ ಮೆರವಣಿಗೆಗೆ ಕರೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...