ಶೀಘ್ರದಲ್ಲೇ ಹಾಲಿನ ದರ ಏರಿಕೆ: ಕೆಎಂಎಫ್‌ ನೂತನ ಅಧ್ಯಕ್ಷ ಭೀಮಾ ನಾಯ್ಕ್‌

Date:

  • ಕೆಎಂಎಫ್‌ನ ನೂತನ ಅಧ್ಯಕ್ಷರಾದ ಹಗರಿಬೊಮ್ಮನಹಳ್ಳಿ ಮಾಜಿ ಶಾಸಕ
  • ನಂದಿನ ಹಾಲಿನ ಬೆಲೆ ಐದು ರೂಪಾಯಿ ಏರಿಕೆ ಸಾಧ್ಯತೆ ಎಂದ ಕೆಎಂಎಫ್‌

ನಂದಿನಿ ಹಾಲಿನ ದರ  ಶೀಘ್ರದಲ್ಲೇ ಹೆಚ್ಚಳವಾಗುವುದೆಂದು ಕರ್ನಾಟಕ ಹಾಲು ಮಾರಾಟ ಮಹಾಮಂಡಲದ ನೂತನ ಅಧ್ಯಕ್ಷ ಭೀಮಾ ನಾಯ್ಕ್ ತಿಳಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಂದಿನಿ ಹಾಲಿನ ದರ ಹೆಚ್ಚಳದ ಸುಳಿವು ನೀಡಿದ್ದಲ್ಲದೆ, ಹಾಲಿನ ದರ 5 ರೂ. ಏರಿಸಲು ಚಿಂತಿಸಿದ್ದು, ಮುಖ್ಯಮಂತ್ರಿಗಳೆದುರು ಈ ಬೇಡಿಕೆ ಇಡಲಾಗಿದೆ ಎಂದರು.

ಎಲ್ಲ ಹಾಲು ಒಕ್ಕೂಟಗಳು 5 ರೂಪಾಯಿ ದರ ಹೆಚ್ಚಳಕ್ಕೆ ಬೇಡಿಕೆ ಇಟ್ಟಿವೆ. ದರ ಏರಿಕೆ ಗುಣಮಟ್ಟದ ಹಾಲು, ಮೊಸರು, ತುಪ್ಪ ಗ್ರಾಹಕರಿಗೆ ಒದಗಿಸಲು ಸಹಕಾರಿಯಾಗಲಿದೆ ಎಂದವರು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇವರ ಜೊತೆಗೆ ಸಹಕಾರಿ ಸಚಿವ ಕೆ ಎನ್‌ ರಾಜಣ್ಣ ಕೂಡ ಇದೇ ವಿಚಾರ ಪ್ರಸ್ತಾಪಿಸಿದ್ದು, ಹಾಲು ಉತ್ಪಾದಕರಿಗೆ ನೀಡುವ ಮೊತ್ತ ಏರಿಕೆಗೆ ಚಿಂತನೆ ನಡೆಸಲಾಗಿದೆ ಎಂದಿದ್ದಾರೆ.

ರೈತರಿಂದ ಖರೀದಿಸುವ ಹಾಲಿನ ದರ ಏರಿಕೆ ಬಗ್ಗೆ ಚಿಂತನೆ ನಡೆಸಲಾಗಿದೆ. ರಾಜ್ಯದ ಹೈನೋದ್ಯಮ ಉತ್ತಮವಾಗಿದೆ. ರೈತರಿಗೆ ಲಾಭ ದೊರಕಬೇಕು ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಅನುಕೂಲವಾಗುವಂತೆ ಮಾಡುತ್ತೇವೆ ಎಂದರು.

ಈ ಸುದ್ದಿ ಓದಿದ್ದೀರಾ? :ಬೆಂಗಳೂರು | ನಾಲ್ಕು ವರ್ಷಗಳ ಬಳಿಕ ಬೀದಿನಾಯಿ ಗಣತಿ ಮಾಡಲು ಮುಂದಾದ ಪಾಲಿಕೆ

ಕೆಎಂಎಫ್‌ಗೆ ನೂತನ ಸಾರಥಿ

ಬಿಜೆಪಿ ಶಾಸಕ, ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಅವರ ಕೆಎಂಎಫ್ ಅಧ್ಯಕ್ಷ ಸ್ಥಾನ ಕೊನೆಗೊಂಡ ಹಿನ್ನೆಲೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಚಾಲನೆ ದೊರೆತಿತ್ತು. ಕಾಂಗ್ರೆಸ್ ಶಾಸಕ ಭೀಮಾ ನಾಯ್ಕ್ ಅವರ ಹೆಸರನ್ನು ಈ ಸ್ಥಾನಕ್ಕೆ ಶಿಫಾರಸು ಮಾಡಲಾಗಿತ್ತು. ಅಧ್ಯಕ್ಷ ಸ್ಥಾನಕ್ಕಾಗಿ ಬೇರಾರೂ ನಾಮಪತ್ರ ಸಲ್ಲಿಸದಿರುವುದರಿಂದ ಭೀಮಾ ನಾಯ್ಕ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಲಿತರಿಗೆ ಮೀಸಲಿರುವ ಹಣ ಗ್ಯಾರಂಟಿಗಳಿಗೆ ಬಳಕೆಯಾದರೆ ಸರ್ಕಾರದ ವಿರುದ್ಧ ಹೋರಾಟ: ದಲಿತ ಸಂಘರ್ಷ ಸಮಿತಿ ಎಚ್ಚರಿಕೆ

ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲು ನಿರ್ಧರಿಸಿದ ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ಮೀಸಲು...

ಹರಿಯಾಣ ಚುನಾವಣೆ | ಉಚಿತ ವಿದ್ಯುತ್, ವೈದ್ಯಕೀಯ ಚಿಕಿತ್ಸೆ ಸೇರಿ 5 ಗ್ಯಾರಂಟಿ ಘೋಷಿಸಿದ ಎಎಪಿ

ಈ ವರ್ಷದ ಅಕ್ಟೋಬರ್‌ನಲ್ಲಿ ಹರಿಯಾಣದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್ಲ...

ಶಿರೂರು ಗುಡ್ಡ ಕುಸಿತ | ನೊಂದ ಕುಟುಂಬಗಳ ಜತೆ ಸರಕಾರ ನಿಲ್ಲಬೇಕು: ಎಚ್‌ ಡಿ ಕುಮಾರಸ್ವಾಮಿ

ರಾಜ್ಯ ಸರಕಾರವು ಗುಡ್ಡ ಕುಸಿತದಲ್ಲಿ ಜೀವ ಕಳೆದುಕೊಂಡಿರುವ ಕುಟುಂಬಗಳ ಜತೆ ನಿಲ್ಲಬೇಕು...

ಕಾವಡ್ ಯಾತ್ರೆ ವೇಳೆ ಅಂಗಡಿ ಮಾಲೀಕರ ಹೆಸರುಳ್ಳ ಫಲಕ ಹಾಕಲು ಆದೇಶ; ‘ಸಂವಿಧಾನದ ಮೇಲಿನ ದಾಳಿ’ ಎಂದ ಪ್ರಿಯಾಂಕಾ

ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ಜುಲೈ 22ರಿಂದ ನಡೆಯುವ ಕಾವಡ್ ಯಾತ್ರೆ ನಡೆಯಲಿದೆ....