ಕಾಂಗ್ರೆಸ್‌ನ ಸೌಮ್ಯ ರೆಡ್ಡಿ, ಬಿಜೆಪಿಯ ಪಿ ಸಿ ಮೋಹನ್‌, ಕಾರಜೋಳ ನಾಮಪತ್ರ ಸಲ್ಲಿಕೆ

Date:

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಅವರು ಸೋಮವಾರ ನಾಮಪತ್ರ ಸಲ್ಲಿಕೆ ಮಾಡಿದರು.

ಜಯನಗರ ಬಿಬಿಎಂಪಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ ಸೌಮ್ಯ ರೆಡ್ಡಿ, ನಾಮಪತ್ರ ಸಲ್ಲಿಕೆಗೂ ಮುನ್ನ ಜಯನಗರದ ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಪೂಜೆ ಬಳಿಕ ಮೆರವಣಿಗೆ ರೋಡ್ ಶೋ ನಡೆಸಿದರು. ರೋಡ್ ಶೋನಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ರಾಮಲಿಂಗಾ ರೆಡ್ಡಿ, ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಗಳು, ಎಂಎಲ್‌ಸಿ ಯುಬಿ ವೆಂಕಟೇಶ್ ಭಾಗಿಯಾಗಿದ್ದರು.

ನಾಮಪತ್ರ ಸಲ್ಲಿಕೆಯ ಬಳಿಕ ಮಾತನಾಡಿದ ಸೌಮ್ಯರೆಡ್ಡಿ, “ಎಲ್ಲ ಕಡೆ ಮೂರು ನಾಲ್ಕುವಾರದಿಂದ ದಕ್ಷಿಣದಲ್ಲಿ ಸುತ್ತಾಡಿದ್ದೇವೆ. ಮತ್ತೊಮ್ಮೆ ಕಾಂಗ್ರೆಸ್ ಬರಬೇಕು ಅನ್ನೋದು ಜನರ ಆಶಯವಾಗಿದೆ. ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕರು ಕಾರ್ಯಕರ್ತರು ಬಂದಿದ್ದಾರೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“10 ವರ್ಷದಿಂದ ಬಿಜೆಪಿ ಅಚ್ಚೆ ಸರ್ಕಾರ ಬರುತ್ತೆ ಅಂತಾ ಹೇಳಿ ಜನರಿಗೆ ಬೇಸರ ಆಗಿದೆ. ಕಾಂಗ್ರೆಸ್‌ನ‌ ಗ್ಯಾರಂಟಿಗಳ ಬಗ್ಗೆ ಮಹಿಳೆಯರು ಮೆಚ್ಚುಗೆಯ ಮಾತನ್ನಾಡುತ್ತಿದ್ದಾರೆ” ಎಂದು ಹೇಳಿದರು.

ಪಿಸಿ ಮೋಹನ್ ಉಮೇದುವಾರಿಕೆ ಸಲ್ಲಿಕೆ

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಪಿ ಸಿ ಮೋಹನ್ ನಾಮ ಪತ್ರ ಸಲ್ಲಿಕೆ ಮಾಡಿದರು. ಬಿಬಿಎಂಪಿ ಕಚೇರಿಗೆ ಆಗಮಿಸಿದ ಪಿ ಸಿ ಮೋಹನ್ ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದರು.

ನಾಮಪತ್ರ ಸಲ್ಲಿಕೆಗೂ ಮೊದಲು ಮುತ್ಯಾಲಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ಕಾರ್ಯಕರ್ತರ ಜೊತೆಗೆ ರೋಡ್ ಶೋ ನಡೆಸುವ ಮೂಲಕ ಶಕ್ತಿ ಪ್ರದರ್ಶನ ಮಾಡಿದರು. ಬಳಿಕ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ, ಆರ್. ಅಶೋಕ್, ಅರವಿಂದ ಲಿಂಬಾವಳಿ, ಗಾಲಿ ಜನಾರ್ದನ ರೆಡ್ಡಿ, ಸುರೇಶ್ ಕುಮಾರ್ ಜೊತೆಗೆ ಬಂದು ನಾಮಪತ್ರ ಸಲ್ಲಿಕೆ ಮಾಡಿದರು.

ನಾಮಪತ್ರ ಸಲ್ಲಿಕೆಯ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಪಿ ಸಿ ಮೋಹನ್, “ನಾಯಕರುಗಳ ಜೊತೆಗೆ ನಾಮಪತ್ರ ಸಲ್ಲಿಕೆ ಮಾಡಿದ್ದೇನೆ. ಕಾರ್ಯಕರ್ತರು ಹುಮ್ಮಸ್ಸಿನಲ್ಲಿದ್ದಾರೆ. ಡೋರ್ ಟು ಡೋರ್ ಕಾಂಪೇನ್ ಮಾಡುತ್ತಿದ್ದಾರೆ. ದೇಶದಲ್ಲಿ ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿ ಆಗುತ್ತಾರೆ” ಎಂದರು.

“ನಾನು ಈಗಾಗಲೇ ಬೆಂಗಳೂರಿಗೆ ಸಾಕಷ್ಟು ಅನುದಾನವನ್ನು ಕೇಂದ್ರದಿಂದ ತಂದಿದ್ದೇನೆ. ಸಬ್ ಅರ್ಬನ್ ರೈಲು ಬೆಂಗಳೂರಿಗೆ ತರಲು ಯಶಸ್ವಿ ಆಗಿದ್ದೇನೆ. ಮೆಟ್ರೋ ವಿಸ್ತರಣೆ ಮಾಡಲಾಗಿದೆ. ಸ್ಮಾರ್ಟ್ ಸಿಟಿ, ಪ್ರಧಾನಮಂತ್ರಿ ಆವಾಜ್ ಯೋಜನೆ ಅನುದಾನ ತರಲಾಗಿದೆ. ನಾನು ಸಂಸದನಾಗಿ ಮಾಡಿದ ಕೆಲಸ ಕಾರ್ಯಗಳನ್ನು ಮುಂದಿಟ್ಟುಕೊಂಡು ಜನರ ಬಳಿ ಹೋಗುವೆ” ಎಂದು ತಿಳಿಸಿದರು.

ಗೋವಿಂದ ಕಾರಜೋಳ ನಾಮಪತ್ರ ಸಲ್ಲಿಕೆ

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಗೆ ಎನ್.ಡಿ.ಎ ಅಭ್ಯರ್ಥಿಯಾಗಿ ಸೋಮವಾರ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಅವರಿಗೆ ಗೋವಿಂದ ಕಾರಜೋಳ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಜಿ ಎಚ್ ತಿಪ್ಪಾರೆಡ್ಡಿ, ಎಸ್.ತಿಪ್ಪೇಸ್ವಾಮಿ, ವಿಧಾನ ಪರಿಷತ್ ಸದಸ್ಯ ಕೆ ಎಸ್ ನವೀನ್ ಹಾಗೂ ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷರು, ಜೆಡಿಸ್ ಪಕ್ಷದ ಜಿಲ್ಲಾಧ್ಯಕ್ಷರು ಜೊತೆಗಿದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯೇಂದ್ರ, ಸಿಟಿ ರವಿ, ಪಿ.ರಾಜೀವ್‌ನಿಂದ ಬಿಜೆಪಿ ಹಾಳಾಗುತ್ತಿದೆ: ಮಾಲೀಕಯ್ಯ ಗುತ್ತೇದಾರ ಕಿಡಿ

ಸಹೋದರ ನಿತಿನ್ ಗುತ್ತೇದಾರ ಅವರನ್ನು ಬಿಜೆಪಿಗೆ ಸೇರಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಸಚಿವ...

ಕುಮಾರಸ್ವಾಮಿ ನನಗೆ ಮರ್ಯಾದೆ ಕೊಟ್ಟರೆ, ನಾನೂ ಕೂಡ ಮರ್ಯಾದೆ ಕೊಡುವೆ: ಡಿ.ಕೆ. ಶಿವಕುಮಾರ್

"ನಾನು ಕುಮಾರಸ್ವಾಮಿ ಅವರಿಗೆ ವೈಯಕ್ತಿಕವಾಗಿ ಗೌರವ ನೀಡುತ್ತೇನೆ. ಈಗಲೂ ನೀಡುತ್ತಿದ್ದೇನೆ, ಮುಂದೆಯೂ...

ಪ್ರಧಾನಿ ಮೋದಿ ಶ್ರೀಮಂತ ಉದ್ಯಮಿಗಳ ಸಾಧನ: ರಾಹುಲ್ ಗಾಂಧಿ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಹಿರಿಯ ನಾಯಕ...

ಚರ್ಚೆಗೆ ಸಿದ್ದ ಇದ್ದೇನೆ ಬನ್ನಿ; ಡಿಕೆ ಶಿವಕುಮಾರ್‌ಗೆ ಕುಮಾರಸ್ವಾಮಿ ಪ್ರತಿ ಸವಾಲು

"ಮಿಸ್ಟರ್​ ಕುಮಾರಸ್ವಾಮಿ, ಹೆದರಿ ಪಕ್ಕದ ಜಿಲ್ಲೆಗೆ ಹೋಗಿದ್ದೀಯ​. ಚರ್ಚೆ ಮಾಡಲು ಸದನಕ್ಕೆ...