ಬಿತ್ತನೆ ಬೀಜ ದುಬಾರಿ | ಒಂದು ಕೈಯ್ಯಲ್ಲಿ ಗ್ಯಾರಂಟಿ, ಇನ್ನೊಂದು ಕೈಯ್ಯಲ್ಲಿ ಸುಲಿಗೆ: ಜೆಡಿಎಸ್ ವಾಗ್ದಾಳಿ

Date:

ಕೃಷಿ ಇಲಾಖೆಯಿಂದ ರಿಯಾಯಿತಿ ದರದಲ್ಲಿ ಲಭ್ಯವಿದ್ದ ಬಿತ್ತನೆ ಬೀಜದ ಬೆಲೆ ಏರಿಕೆಯಾದ ಪರಿಣಾಮ, ಮುಕ್ತ ಮಾರುಕಟ್ಟೆಯಲ್ಲಿಯೂ ದರ ದುಪ್ಪಟ್ಟಾಗಿದೆ. ಕೃಷಿ ಸಚಿವರೇ, ಎಲ್ಲಿದ್ದೀರಪ್ಪ? ಎಂದು ಜೆಡಿಎಸ್‌ ಕಿಡಿಕಾರಿದೆ.

ಎಕ್ಸ್‌ ತಾಣದಲ್ಲಿ ಈ ಕುರಿತು ಪೋಸ್ಟ್‌ ಮಾಡಿ‌ದ್ದು, “ತಕ್ಷಣವೇ ಸರ್ಕಾರ ಬಿತ್ತನೆ ಬೀಜದ ದರ ಇಳಿಕೆಗೆ ಕ್ರಮ ಕೈಗೊಳ್ಳಬೇಕು ಮತ್ತು ಮುಕ್ತ ಮಾರುಕಟ್ಟೆಯಲ್ಲಿ ದರ ಏರಿಕೆಗೆ ನಿಯಂತ್ರಣ ವಿಧಿಸಬೇಕು” ಎಂದು ಆಗ್ರಹಿಸಿದೆ.

“ಬಿತ್ತನೆ ಬೀಜದ ದರ ಶೇ.60ರಷ್ಟು ಹೆಚ್ಚಳವಾಗಿದೆ. ಪಂಚ ಗ್ಯಾರಂಟಿ ಕೊಟ್ಟು ಜನರನ್ನು ಉದ್ಧಾರ ಮಾಡಿದೆ ಎಂದು ಬೀಗುವ ಕಾಂಗ್ರೆಸ್‌ ಸರ್ಕಾರ ಮಾಡಿರುವ ಘನಕಾರ್ಯ ಇದು” ಎಂದು ಟೀಕಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಒಂದು ಕೈಯ್ಯಲ್ಲಿ ಗ್ಯಾರಂಟಿ, ಇನ್ನೊಂದು ಕೈಯ್ಯಲ್ಲಿ ಸುಲಿಗೆ ಮಾಡುತ್ತಿರುವ ಘನಕಾರ್ಯವಿದು! ಕೊಟ್ಟ ಹಾಗೆ ಮಾಡಿ ಜನರಿಗೆ ಗೊತ್ತೇ ಆಗದಂತೆ ಜೇಬಿಗೆ ಕೈ ಹಾಕಿ ಪಿಕ್ ಪಾಕೆಟ್ ಮಾಡುತ್ತಿರುವ ಕಿಡಿಗೇಡಿ ಕೆಲಸ ಇದು” ಎಂದು ವಾಗ್ದಾಳಿ ನಡೆಸಿದೆ.‌

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಿಳಾ ಉದ್ಯಮಶೀಲತೆ ಕಾರ್ಯಕ್ರಮಕ್ಕಾಗಿ ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರದ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕತಂತ್ರಜ್ಞಾನ ಇಲಾಖೆಯು ರಾಜ್ಯದಲ್ಲಿನ...

ಉತ್ತರ ಪ್ರದೇಶ ಬಿಜೆಪಿಯಲ್ಲಿ ಬಿಕ್ಕಟ್ಟು; ಮೋದಿ ಭೇಟಿಗೆ ಮುಂದಾದ ಯೋಗಿ

ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಹೀನಾಯ ಪ್ರದರ್ಶನ ನೀಡಿದ್ದು, ಬಿಜೆಪಿಯಲ್ಲಿ...

ಅಂಕೋಲಾ ಗುಡ್ಡ ಕುಸಿತ | ಮುಂದುವರಿದ ರಕ್ಷಣಾ ಕಾರ್ಯಾಚರಣೆ; ಲಾರಿ ಚಾಲಕ ಜೀವಂತ ಮರಳಲು ಜನರ ಪ್ರಾರ್ಥನೆ

ಕಾರವಾರ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ...

ಬೆಂಗಳೂರು | ನ್ಯಾಯಮೂರ್ತಿಗಳನ್ನೇ ಕೇಂದ್ರ ಸರ್ಕಾರ ಬೆದರಿಸುತ್ತಿದೆ; ಪ್ರಶಾಂತ್‌ ಭೂಷಣ್‌ ಆರೋಪ

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಯೂ ಸೇರಿದಂತೆ ಎಲ್ಲ ನ್ಯಾಯಮೂರ್ತಿಗಳ ಹಿಂದೆ ಕೇಂದ್ರ...