ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್: ವಿದೇಶದಿಂದ ಬಂದ ಕೂಡಲೇ ಬಂಧನ?

Date:

ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಹೊತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಬಂಧನ ಭೀತಿ ಎದುರಾಗಿದ್ದು, ಪ್ರಜ್ವಲ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ಬುಧವಾರ ತಿರಸ್ಕರಿಸಿದೆ. ಈ ಹಿನ್ನೆಲೆಯಲ್ಲಿ ವಿದೇಶದಿಂದ ಬಂದ ಕೂಡಲೇ, ಎಸ್‌ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸುವ ಸಾಧ್ಯತೆ ಇದೆ.

- Advertisement -

ಅತ್ಯಾಚಾರ ಸೇರಿದಂತೆ ಹಲವು ಪ್ರಕರಣದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯ ಬುಧವಾರ ತಿರಸ್ಕರಿಸಿದೆ. ಚುನಾಯಿತ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಪ್ರಜ್ವಲ್ ಪರ ವಕೀಲ ಅರುಣ್ ಸಲ್ಲಿಸಿದ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮೇ 30 ರಂದು ಮ್ಯೂನಿಚ್‌ನಿಂದ ಬೆಂಗಳೂರಿಗೆ ಹಿಂತಿರುಗಲಿದ್ದಾರೆ ಎಂದು ಹೇಳಲಾಗಿದ್ದು, ಈಗಾಗಲೇ ಪ್ರಜ್ವಲ್ ವಿಮಾನ ಟಿಕೆಟ್ ಕೂಡ ಬುಕ್ ಮಾಡಿದ್ದಾರೆ ಎಂದು ಹೇಳಲಾಗಿದೆ. ಮೇ 31 ರಂದು ಅವರು ನಗರಕ್ಕೆ ಬಂದಿಳಿಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಹೀಗಾಗಿ, ಇದೀಗ ಎಲ್ಲರ ಚಿತ್ತ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದತ್ತ ನೆಟ್ಟಿದ್ದು, ಪ್ರಜ್ವಲ್ ರೇವಣ್ಣರನ್ನು ವಿಮಾನ ನಿಲ್ದಾಣದಲ್ಲೇ ಬಂಧಿಸಲು ಎಸ್ ಐಟಿ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಯ ಮತದಾನ ನಡೆದ ಏಪ್ರಿಲ್ 27ರಂದೇ ಪ್ರಜ್ವಲ್ ಮತದಾನ ಮಾಡಿ ವಿದೇಶಕ್ಕೆ ಹಾರಿದ್ದರು. ಬಳಿಕ ಅವರದ್ದು ಎಂದು ಹೇಳಲಾದ ಸೆಕ್ಸ್ ಹಗರಣದ ವಿಡಿಯೋಗಳು ಭಾರೀ ಸದ್ದು ಮಾಡಿದ್ದವು. ಇದೇ ಪ್ರಕರಣದಲ್ಲಿ ಪ್ರಜ್ವಲ್ ತಂದೆ ಎಚ್ ಡಿ ರೇವಣ್ಣ ಕೂಡ ಬಂಧನಕ್ಕೀಡಾಗಿ ಬಳಿಕ ಜಾಮೀನಿನ ಮೇಲೆ ಹೊರಬಂದಿದ್ದಾರೆ.

ಇದನ್ನು ಓದಿದ್ದೀರಾ? ಪಶ್ಚಿಮ ಬಂಗಾಳ ಸೇರಿ ಮೂರು ರಾಜ್ಯಗಳಲ್ಲಿ ಸಿಎಎ ಅಡಿಯಲ್ಲಿ ಪೌರತ್ವ ಆರಂಭ: ಗೃಹ ಸಚಿವಾಲಯ

ಅಪಹರಣ ಪ್ರಕರಣದಲ್ಲಿ ಅವರ ರೇವಣ್ಣ ಪತ್ನಿ ಭವಾನಿ ರೇವಣ್ಣಗೂ ಬಂಧನ ಭೀತಿ ಇದ್ದು 31ರಂದು ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಅಂದೇ ಪ್ರಜ್ವಲ್ ಕೂಡ ನಗರಕ್ಕೆ ಆಗಮಿಸುವ ಸಾಧ್ಯತೆ ಇದೆ. ಮೇ 18 ರಂದು, ಎಸ್‌ಐಟಿ ಸಲ್ಲಿಸಿದ ಅರ್ಜಿಯ ಮೇರೆಗೆ ಚುನಾಯಿತ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಪ್ರಜ್ವಲ್ ರೇವಣ್ಣ ವಿರುದ್ಧ ಬಂಧನ ವಾರಂಟ್ ಹೊರಡಿಸಿತ್ತು. ಈಗಾಗಲೇ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತು ಮಾಡಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...

ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ...

ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ...