ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ವಿಶೇಷ ಪಡೆಯ ಅಗತ್ಯವಿದೆ: ಸಿಎಂ ಸಿದ್ದರಾಮಯ್ಯ

Date:

ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ಹಾಗೂ ಪತ್ತೆ ಹಚ್ಚಲು ಒಂದು ವಿಶೇಷ ಪಡೆಯ ಅಗತ್ಯವಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಹಾವೇರಿಯ ಅಕ್ಕಿ ಆಲೂರಿನ ಎನ್.ಡಿ.ಪಿಯು ಕಾಲೇಜಿನ ಆವರಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕರಾವಳಿಯಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚಿಸಲು ಸರ್ಕಾರ ಮುಂದಾಗಿರುವ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ, ಗೃಹ ಸಚಿವರೊಂದಿಗೆ ಮಾತನಾಡಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಮಂಗಳೂರಿನಲ್ಲಿ ಫಾಝಿಲ್ ಹತ್ಯೆಯಾದಾಗ ಸರ್ಕಾರ 25 ಲಕ್ಷ ರೂ. ಪರಿಹಾರ ನೀಡಿತ್ತು. ಸುಹಾಸ್ ಶೆಟ್ಟಿ ಹತ್ಯೆಗೆ ಫಾಝಿಲ್ ಸಹೋದರ ಸುಪಾರಿ ನೀಡಿದ್ದಾರೆ ಎಂದು ಪೊಲೀಸರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದು, ಸರ್ಕಾರ ನೀಡಿರುವ ಪರಿಹಾರದ ಹಣ ದುರ್ಬಳಕೆಯಾಗಿದೆಯೇ ಎಂಬ ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ಈ ಬಗ್ಗೆ ತನಗೆ ತಿಳಿದಿಲ್ಲ. ನಿನ್ನೆ ಸಚಿವ ದಿನೇಶ್ ಗುಂಡೂರಾವ್ ಹಾಗೂ ಗೃಹ ಸಚಿವ ಜಿ ಪರಮೇಶ್ವರ್ ಇಬ್ಬರೂ ಮಂಗಳೂರಿಗೆ ಭೇಟಿ ನೀಡಿದ್ದಾರೆ. ಅವರೊಂದಿಗೆ ಮಾತನಾಡಿದ ನಂತರ ಪ್ರತಿಕ್ರಿಯೆ ನೀಡುವುದಾಗಿ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಂಗಳೂರು ಹತ್ಯೆಗಳಲ್ಲಿ ಮಾಧ್ಯಮಗಳೂ ಆರೋಪಿಗಳಲ್ಲವೇ?

ವಿಜಯನಗರ ಜಿಲ್ಲೆಯಲ್ಲಿ ಎರಡು ವರ್ಷಗಳ ಸಾಧನೆಯ ಕಾರ್ಯಕ್ರಮ ಸರ್ಕಾರಕ್ಕೆ ಎರಡು ವರ್ಷಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ವಿಜಯನಗರ ಜಿಲ್ಲೆಯಲ್ಲಿ ಎರಡು ವರ್ಷಗಳ ಸಾಧನೆಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಜಾತಿಗಣತಿಯನ್ನು ಮಾಡಿಸುವ ಮೂಲಕ ಸಿದ್ದರಾಮಯ್ಯ ಜಾತಿ ಜಾತಿಗಳ ನಡುವೆ ಸಂಘರ್ಷಕ್ಕೆ ಎಡೆಮಾಡಿಕೊಡುತ್ತಿದ್ದಾರೆ ಎಂದು ಟೀಕೆ ಮಾಡುತ್ತಿದ್ದವರು ಕೇಂದ್ರ ಸರ್ಕಾರ ಜಾತಿಗಣತಿ ಮಾಡಿಸುವುದನ್ನು ಮುಕ್ತ ಮನಸ್ಸಿನಿಂದ ಸ್ವಾಗತ ಮಾಡುತ್ತಿದ್ದಾರೆ. ಶಂಖದಿಂದ ಬಂದರೆ ಮಾತ್ರ ತೀರ್ಥ ಎಂಬಂತಾಗಿದೆ. ಮೊದಲು ರಾಜಕೀಯವಾಗಿ ಹೇಳುತ್ತಿದ್ದರು. ವಾಸ್ತವಿಕತೆಯ ಆಧಾರದ ಮೇಲೆ ಹೇಳುತ್ತಿರಲಿಲ್ಲ ಎಂದು ಅರ್ಥವಾಗುತ್ತದೆ ಅಲ್ಲವೇ ? ಎಂದು ಮುಖ್ಯಮಂತ್ರಿ ಪ್ರಶ್ನಿಸಿದರು.

ಪಾಕಿಸ್ತಾನದ ವಿಚಾರದಲ್ಲಿ ಕಾಂಗ್ರೆಸ್ ಇಬ್ಬಗೆಯ ನೀತಿಯನ್ನು ಅನುಸರಿಸುತ್ತಿದೆ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ದೇವೇಗೌಡರು ಬಿಜೆಪಿ ಸೇರುವ ಮುನ್ನ ನರೇಂದ್ರ ಮೋದಿಯವರ ಬಗ್ಗೆ ಏನು ಮಾತನಾಡುತ್ತಿದ್ದರು, ಈಗ ಏನು ಮಾತನಾಡುತ್ತಿದ್ದಾರೆ? ಇಬ್ಬಗೆಯ ನೀತಿ ದೇವೇಗೌಡರಿಗೆ ಇದೆ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...