- ಸೆ.17ರಂದು ನಡೆದ ಸರ್ವಪಕ್ಷ ಸಭೆಯ ಬಗ್ಗೆ ಮಾಹಿತಿ ನೀಡಿದ ಪ್ರಲ್ಹಾದ್ ಜೋಶಿ
- ಸೆಪ್ಟೆಂಬರ್ 19ರಂದು ಹೊಸ ಸಂಸತ್ ಭವನದಲ್ಲಿ ಸಂಸತ್ತಿನ ಅಧಿವೇಶನ
ಇಂದಿನಿಂದ(ಸೆ.18) ಐದು ದಿನಗಳ ಕಾಲ ಸಂಸತ್ತಿನ ವಿಶೇಷ ಅಧಿವೇಶನ ಆರಂಭವಾಗಲಿದ್ದು, ಇದಕ್ಕಾಗಿ ಒಟ್ಟು 8 ಮಸೂದೆಗಳನ್ನು ಪಟ್ಟಿ ಮಾಡಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮಾಹಿತಿ ನೀಡಿದ್ದಾರೆ.
ಇಂದು ಸಂಸತ್ತಿನಲ್ಲಿ ನಡೆದ ಸರ್ವಪಕ್ಷ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಅವರು, “ಕಾಶ್ಮೀರದಲ್ಲಿ ಹುತಾತ್ಮರಾದ ಸೇನೆ ಮತ್ತು ಪೊಲೀಸ್ ಅಧಿಕಾರಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ನಾಳೆಯಿಂದ ಐದು ದಿನಗಳ ಕಾಲ ಸಂಸತ್ತಿನ ವಿಶೇಷ ಅಧಿವೇಶನ ಆರಂಭವಾಗಲಿದೆ. ಇದಕ್ಕಾಗಿ ಒಟ್ಟು 8 ಮಸೂದೆಗಳನ್ನು ಪಟ್ಟಿ ಮಾಡಲಾಗಿದೆ. ಮೊದಲ ದಿನ ಹಳೆ ಸಂಸತ್ ಭವನದಲ್ಲಿ ಅಧಿವೇಶನ ನಡೆಯಲಿದೆ. ಮರುದಿನ ಅಂದರೆ ಸೆ.19ರಂದು ಹಳೆ ಸಂಸತ್ ಭವನದಲ್ಲಿ ಫೋಟೋ ಸೆಷನ್, ನಂತರ ಬೆಳಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್‌ನಲ್ಲಿ ಕಾರ್ಯಕ್ರಮ ನಡೆಯಲಿದೆ. ಅದರ ನಂತರ ನಾವು ಹೊಸ ಸಂಸತ್ತಿಗೆ ಪ್ರವೇಶಿಸುತ್ತೇವೆ” ಎಂದು ಮಾಹಿತಿ ನೀಡಿದರು.
#WATCH | Delhi: Union Parliamentary Affairs Minister Pralhad Joshi says, "On the first day, the session will be held in the Old Parliament House… Next day i.e. on 19th September, there will be a photo session in the Old Parliament, then at 11 am there will be a function in the… pic.twitter.com/xwzJ6gRxN7
— ANI (@ANI) September 17, 2023
ಸೆ.18ರಂದು ಹಳೆಯ ಸಂಸತ್ತಿನಲ್ಲಿ ಅಧಿವೇಶನ ನಡೆದರೆ, ಸೆ.19 ರಂದು ಹೊಸ ಸಂಸತ್ ಭವನದಲ್ಲಿ ನಡೆಯಲಿದೆ. 20ರಿಂದ ಸಾಮಾನ್ಯ ಸರ್ಕಾರಿ ಕೆಲಸಗಳು ಹೊಸ ಸಂಸತ್ ಭವನದಲ್ಲಿ ಪ್ರಾರಂಭವಾಗುತ್ತವೆ ಎಂದು ಪ್ರಲ್ಹಾದ್ ಜೋಶಿ ತಿಳಿಸಿದರು.
ಸೋಮವಾರದಿಂದ ಐದು ದಿನಗಳ ಕಾಲ ಕೇಂದ್ರ ಸರ್ಕಾರ ಕರೆದಿರುವ ಸಂಸತ್ ವಿಶೇಷ ಅಧಿವೇಶನ ತೀವ್ರ ಕುತೂಹಲ ಕೆರಳಿಸಿರುವಂತೆಯೇ, ಎಲ್ಲ ಪಕ್ಷಗಳಿಂದ ಅಭಿಪ್ರಾಯ, ಸಲಹೆಗಳನ್ನು ಪಡೆಯಲು ಭಾನುವಾರ ಸಂಜೆ ಸರ್ವ ಪಕ್ಷ ನಾಯಕರೊಂದಿಗೆ ಸಭೆಯನ್ನು ಆಯೋಜಿಸಲಾಗಿತ್ತು.
आज संसद में आयोजित सर्वदलीय बैठक में कश्मीर में शहीद हुए सेना एवं पुलिस के हमारे अधिकारियों को श्रद्धांजलि देते हुए मौन धारण किया।
— Pralhad Joshi (@JoshiPralhad) September 17, 2023
कल से पांच दिन के लिए संसद का विशेष सत्र शुरू होने वाला है, जिसके लिए कुल 8 बिल listed हैं।
पहले दिन सत्र की बैठक पुराने संसद भवन में होगी। अगले… pic.twitter.com/PooLcJHuLu
‘ಸಂವಿಧಾನ ಸಭೆ’ಯಿಂದ ಆರಂಭಿಸಿ ಸಂಸತ್ತಿನ 75 ವರ್ಷಗಳ ಪಯಣ ಕುರಿತ ವಿಶೇಷ ಚರ್ಚೆಯೇ ಸರ್ಕಾರ ಪಟ್ಟಿ ಮಾಡಲಾದ ಪ್ರಮುಖ ಅಜೆಂಡಾವಾದರೂ ಸಾಮಾನ್ಯವಾಗಿ ಅಧಿವೇಶನ ಇಲ್ಲದೆ ಬೇರೆ ಸಂದರ್ಭದಲ್ಲಿ ನಡೆಯುತ್ತಿರುವ ವಿಶೇಷ ಅಧಿವೇಶನ ಅಚ್ಚರಿಗೆ ಕಾರಣವಾಗಿದೆ.
ವಿಶೇಷ ಅಧಿವೇಶನದ ಮುನ್ನಾದಿನವಾದ ಭಾನುವಾರದಂದು ನೂತನ ಸಂಸತ್ ಭವನದಲ್ಲಿ ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್‌ಕರ್ ಧ್ವಜಾರೋಹಣ ಮಾಡಿದ್ದಾರೆ. ಅಲ್ಲದೇ, ವಿಶೇಷ ಅಧಿವೇಶನಕ್ಕಾಗಿ ಸಂಸತ್ತಿನ ಉಭಯ ಸದನಗಳ ಸಿಬ್ಬಂದಿಗೆ ಹೊಸ ಸಮವಸ್ತ್ರವನ್ನು ಈಗಾಗಲೇ ವಿತರಿಸಲಾಗಿದೆ.