ಭಾಷಣದಿಂದ ಗಾಂಧಿ, ಅಂಬೇಡ್ಕರ್ ಆಶಯ ಈಡೇರುವುದಿಲ್ಲ: ಸಿಎಂ ಸಿದ್ದರಾಮಯ್ಯ

Date:

Advertisements

ಕೇವಲ ಭಾಷಣದಿಂದ ಮಹಾತ್ಮಗಾಂಧಿ ಮತ್ತು ಅಂಬೇಡ್ಕರ್ ಅವರ ಆಶಯಗಳು ಈಡೇರುವುದಿಲ್ಲ. ಇವರಿಬ್ಬರ ಬದುಕಿನ ಮೌಲ್ಯ ಮತ್ತು ಸಂದೇಶಗಳನ್ನು ಜನ ಮಾನಸದಲ್ಲಿ ವಿಸ್ತರಿಸುತ್ತಲೇ ಸರ್ಕಾರ ಸಮ ಸಮಾಜ ನಿರ್ಮಿಸಲು ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸಬೇಕಾಗುತ್ತದೆ. ನಾನು ಮತ್ತು ನಮ್ಮ ಸರ್ಕಾರ ಈ ದಿಕ್ಕಿನಲ್ಲಿ ಸಾಗುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ಗಾಂಧೀ ಸ್ಮಾರಕ ನಿಧಿ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

“ಎಲ್ಲ ನ್ಯಾಯಾಲಯಗಳಿಗಿಂತ ಮೇಲೆ ಅತ್ಯುನ್ನತವಾದ ಆತ್ಮಸಾಕ್ಷಿಯ ನ್ಯಾಯಾಲಯವಿದೆ. ಈಗಿನ ನ್ಯಾಯಲಯಗಳಲ್ಲಿ ನ್ಯಾಯ ಸಿಗದೇ ಹೋಗಬಹುದು. ಈಗಿನ ನ್ಯಾಯಾಲಯಗಳಿಂದ ಎಲ್ಲರಿಗೂ ನ್ಯಾಯ ಸಿಗದೇ ಹೋಗಬಹುದು. ಆದರೆ ನಾವು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು” ಎಂದು ಕರೆ ನೀಡಿದರು.

Advertisements

“ಯಾರಾದರೂ ಹೊಗಳಲಿ, ತೆಗಳಲಿ. ಟೀಕೆ ಮಾಡಲಿ, ಬಿಡಲಿ. ಉಳಿದವರು ಗುರುತಿಸಲಿ ಬಿಡಲಿ ನಾವು ಪ್ರತಿಯೊಬ್ಬರೂ ಆತ್ಮಸಾಕ್ಷಿಯ ನ್ಯಾಯಾಲಯದಲ್ಲಿ ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದ್ವೇಷ ರಾಜಕಾರಣಕ್ಕೆ ದಿಟ್ಟ ಉತ್ತರದ ಅಗತ್ಯವಿದೆ

“ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಅತ್ಯಂತ ಪ್ರಾಮಾಣಿಕ ನಾಯಕರು ಮತ್ತು ರಾಜಕಾರಣಿ. ಇವರೆಲ್ಲರ ಬದುಕಿನ ಸಂದೇಶಗಳು ನಮಗೆ ಮಾರ್ಗದರ್ಶನವಾದರೆ, ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆದರೆ ನಾವು ಈ ಮಹಾತ್ಮರಿಗೆ ಸಲ್ಲಿಸುವ ಗೌರವ” ಎಂದರು‌.

“ಗಾಂಧಿಯವರ ಹೋರಾಟದಿಂದಾಗಿ ನಾವು ಸ್ವಾಂತ್ರ್ಯದ ಗಾಳಿ ಸೇವಿಸುತ್ತಿದ್ದೇವೆ. ಗಾಂಧಿ ಇಡೀ ಜಗತ್ತಿನ ನಾಯಕರು ಎನ್ನುವ ಗೌರವ ಸಿಕ್ಕಿರುವ ಭಾರತೀಯರಿಗೆ ಸಿಕ್ಕ ಹೆಗ್ಗಳಿಕೆ” ಎಂದು ಹೇಳಿದರು.

ಕಾನೂನು ಸಚಿವ ಹೆಚ್ ಕೆ ಪಾಟೀಲ್, ಗಾಂಧಿ ಭವನ‌ ಕಾರ್ಯದರ್ಶಿ ವಿಶುಕುಮಾರ್, “ಎಲ್ಲರ ಗಾಂಧಿ” ಕೃತಿಯ ಲೇಖಕರಾದ ನಟರಾಜ್ ಹುಳಿಯಾರ್ ಸೇರಿ‌ ಹಲವು ಸಾಧಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X