ಎಸೆಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಇನ್ಮುಂದೆ ವರ್ಷಕ್ಕೆ ಮೂರು ಪರೀಕ್ಷೆ : ರಾಜ್ಯ ಸರ್ಕಾರದ ನಿರ್ಧಾರ

Date:

Advertisements
  • ಶೈಕ್ಷಣಿಕ ಪ್ರಗತಿ, ಅರ್ಥಪೂರ್ಣ ಕಲಿಕೆ, ಜ್ಞಾನ ಹೆಚ್ಚಿಸುವ ಹಿನ್ನೆಲೆಯಲ್ಲಿ ಈ ನಿರ್ಧಾರ
  • ಕೆಲ ವಿಷಯಗಳಲ್ಲಿ ಫೇಲಾದರೂ ಮುಂದಿನ ತರಗತಿ ಪ್ರವೇಶಕ್ಕೆ ಅವಕಾಶ: ಸಚಿವ ಮಧು

ಶೈಕ್ಷಣಿಕ ಪ್ರಗತಿ, ಅರ್ಥಪೂರ್ಣ ಕಲಿಕೆ, ಜ್ಞಾನ ಹೆಚ್ಚಿಸುವ ಹಿನ್ನೆಲೆಯಲ್ಲಿ ಹೊಸ ನಿರ್ಧಾರ ತೆಗೆದುಕೊಂಡಿರುವ ರಾಜ್ಯ ಸರ್ಕಾರವು, ಎಸೆಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಇನ್ಮುಂದೆ ವರ್ಷಕ್ಕೆ ಮೂರು ಪರೀಕ್ಷೆ ನಡೆಸಲು ನಿರ್ಧರಿಸಿದೆ.

ವಿಧಾನಸೌಧದಲ್ಲಿಇಂದು ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಈ ಘೋಷಣೆ ಮಾಡಿದರು.

ಈ ನಿಯಮದ ಪ್ರಕಾರ ವಿದ್ಯಾರ್ಥಿಗಳು, ಕೆಲ ವಿಷಯಗಳಲ್ಲಿ ಫೇಲಾದರೂ ಮುಂದಿನ ತರಗತಿ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ.

Advertisements

ಶಿಕ್ಷಣ ಇಲಾಖೆ ಇದುವರೆಗೆ ಎರಡು ಪರೀಕ್ಷೆಗಳನ್ನು ನಡೆಸುತ್ತಿತ್ತು. ಶೈಕ್ಷಣಿಕ ಪ್ರಗತಿ, ಅರ್ಥಪೂರ್ಣ ಕಲಿಕೆ, ಜ್ಞಾನ ಹೆಚ್ಚಿಸುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಪರೀಕ್ಷೆಗಳ ವೇಳಾಪಟ್ಟಿಯನ್ನು ಇಲಾಖೆ ಬಿಡುಗಡೆ ಮಾಡಿದೆ. ಹೊಸ ನಿಯಮದ ಪ್ರಕಾರ, ವಿದ್ಯಾರ್ಥಿಗಳು ಕೆಲವು ವಿಷಯಗಳಲ್ಲಿ ಅನುತ್ತೀರ್ಣರಾದರೂ ಮುಂದಿನ ತರಗತಿಗಳಿಗೆ ಹೋಗಲು ಅವಕಾಶ ಕಲ್ಪಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.

ವಿದ್ಯಾರ್ಥಿಗಳು ಕೆಲವು ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದರೂ ಸಹ ಅಗತ್ಯವಿರುವ ಕನಿಷ್ಠ ಅಂಕಗಳನ್ನು ಒಟ್ಟು ಎಂದು ಪರಿಗಣಿಸಲಾಗುತ್ತದೆ. ಕಲಿಕೆಯ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಲು ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಲು ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಶಿಕ್ಷಣ ಸಚಿವರು ಹೇಳಿದರು.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ”ದಿನಕ್ಕೆ ಎರಡು ಬಾರಿ ಮೊಟ್ಟೆ ವಿತರಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಮೊದಲು ವಾರಕ್ಕೊಮ್ಮೆ ಮೊಟ್ಟೆ ನೀಡಲಾಗುತ್ತಿತ್ತು. 58 ಲಕ್ಷ ಮಕ್ಕಳಿಗೆ ಈ ಯೋಜನೆಯಿಂದ ಪ್ರಯೋಜನವಾಗಲಿದೆ. ಈ ಯೋಜನೆಗೆ ಅಂದಾಜು ಒಟ್ಟು 280 ಕೋಟಿ ರೂಪಾಯಿ ವೆಚ್ಚವಾಗಲಿದೆ. 10ನೇ ತರಗತಿ ವಿದ್ಯಾರ್ಥಿಗಳಿಗೂ ಯೋಜನೆ ವಿಸ್ತರಿಸಲಾಗುವುದು ಎಂದು ಅವರು ತಿಳಿಸಿದರು.

ಶಿಕ್ಷಣ ಇಲಾಖೆಯಲ್ಲಿ ಬೋಧಕ ಸಿಬ್ಬಂದಿ ಕೊರತೆ ಇದೆ. ಇದನ್ನು ಮನಗಂಡ ಸಿಎಂ ಸಿದ್ದರಾಮಯ್ಯ ಅವರು ಅತಿಥಿ ಶಿಕ್ಷಕರ ನೇಮಕಕ್ಕೆ ಆದೇಶ ಹೊರಡಿಸಿದ್ದು, ಇನ್ನೆರಡು ದಿನಗಳಲ್ಲಿ 10,000 ಅತಿಥಿ ಉಪನ್ಯಾಸಕರ ನೇಮಕ ಮಾಡಲಾಗುವುದು ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X