ಪಶ್ಚಿಮ ಬಂಗಾಳ | ಮೇಜಿನ ಮೇಲೆ ಹಣದ ರಾಶಿ: ಟಿಎಂಸಿ ನಾಯಕನ ಹಳೆಯ ವಿಡಿಯೋ ವೈರಲ್

Date:

ಮೇಜಿನ ಮೇಲೆ ಹಣದ ಬಂಡಲ್‌ಗಳ ರಾಶಿ, ಅದರ ಹಿಂದೆ ಟಿಎಂಸಿ ನಾಯಕ ಕುಳಿತಿರುವ ಹಳೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋ ಇನ್ನು ಕೆಲವೇ ತಿಂಗಳುಗಳಲ್ಲಿ ವಿಧಾನಸಭೆ ಚುನಾವಣೆಯನ್ನು ಎದುರಿಸಲಿರುವ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಸೃಷ್ಟಿಸಿದೆ.

- Advertisement -

ಈ ವಿಡಿಯೋದಲ್ಲಿ ಉತ್ತರ 24 ಪರಗಣ ಜಿಲ್ಲೆಯ ಬರಾಸತ್ I ಪಂಚಾಯತ್ ಸಮಿತಿಯ ಉಪಾಧ್ಯಕ್ಷ ಮೊಹಮ್ಮದ್ ಗಿಯಾಸುದ್ದೀನ್ ಮೊಂಡಲ್, ಸ್ಥಳೀಯ ಉದ್ಯಮಿ ರಕಿಬುಲ್ ಇಸ್ಲಾಂ ಜೊತೆಗೆ ಕುಳಿತಿರುವುದು ಕಾಣುತ್ತದೆ. ಜತೆಗೆ ಅವರ ಮೇಜಿನ ಮೇಲೆ ಹಣದ ಬಂಡಲ್‌ಗಳೂ ಇರುವುದು ವಿಡಿಯೋದಲ್ಲಿ ಕಾಣಬಹುದು. “ನಗದು ರೂಪದಲ್ಲಿ ಅಥವಾ ಇತರೆ ರೂಪದಲ್ಲಿಯೇ” ಎಂದು ಫೋನ್‌ನಲ್ಲಿ ಕೇಳುವ ಧ್ವನಿ ವಿಡಿಯೋದಲ್ಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನು ಓದಿದ್ದೀರಾ? ಮನೆಯಲ್ಲಿ ಹಣ ಪತ್ತೆ: ನ್ಯಾ. ವರ್ಮಾ ವಿಚಾರಣೆ ನಡೆಸಿದ್ದ 52 ಪ್ರಕರಣಗಳ ಮರುವಿಚಾರಣೆಗೆ ದೆಹಲಿ ಹೈಕೋರ್ಟ್‌ ನಿರ್ಧಾರ

ಈ ಹಳೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಅಕ್ರಮ ನಗದು ವಹಿವಾಟಿನ ಆರೋಪಗಳು ಕೇಳಿಬಂದಿವೆ. ಆದರೆ ಈ ವಿಡಿಯೋ 2022ರ ಹಿಂದಿನದ್ದು ಈ ವಹಿವಾಟಿನಲ್ಲಿ ತನ್ನ ಪಾತ್ರವಿಲ್ಲ ಎಂದು ಹೇಳಿಕೊಂಡು ಮೊಂಡಲ್ ಆರೋಪವನ್ನು ತಳ್ಳಿಹಾಕಿದ್ದಾರೆ. “ನಾನು ಅಲ್ಲಿ ಕುಳಿತಿದ್ದೆ. ಅದು ಹಳೆಯ ವಿಡಿಯೋ. ಕೆಲವು ಸ್ನೇಹಿತರು ಭೂ ವ್ಯವಹಾರದಲ್ಲಿ ಭಾಗಿಯಾಗಿದ್ದರು. ನನಗೆ ತಿಳಿದಿರುವುದು ಇಷ್ಟೇ” ಎಂದು ವರದಿಗಾರರಿಗೆ ತಿಳಿಸಿದ್ದಾರೆ.

ವಿಡಿಯೋದಲ್ಲಿ ಫೋನ್‌ನಲ್ಲಿ ಮಾತನಾಡುತ್ತಿರುವ ರಕೀಬುಲ್ ಇಸ್ಲಾಂ, “ಇದು ಅಕ್ರಮವಲ್ಲ. ನಗದು ಭೂ ವ್ಯವಹಾರಕ್ಕೆ ಸಂಬಂಧಿಸಿದ್ದು. ಇದು ಎರಡು ವರ್ಷಗಳ ಹಿಂದಿನ ವಿಡಿಯೋ. ನನಗೆ ನೆನಪಿರುವಂತೆ, ಭೂ ವ್ಯವಹಾರದಿಂದ ಬಂದ ಹಣವನ್ನು ಎಣಿಕೆ ಮಾಡಲಾಗುತ್ತಿದೆ. ಭೂಮಿಯಲ್ಲಿ ಹೂಡಿಕೆ ಮಾಡಲಾಗಿತ್ತು” ಎಂದು ಹೇಳಿದ್ದಾರೆ. ಹಾಗೆಯೇ ಭೂ ವ್ಯವಹಾರದಲ್ಲಿ ಮೊಂಡಲ್ ಪಾಲುದಾರರಾಗಿದ್ದರು ಮತ್ತು ತೋರಿಸಿರುವ ಆವರಣವು ಅವರ ಕಚೇರಿಯಲ್ಲ ಎಂದಿದ್ದಾರೆ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಯಾವುದೇ ತಪ್ಪು ಕಂಡುಬಂದರೆ ಕ್ರಮಕೈಗೊಳ್ಳಲಾಗುವುದು ಎಂದು ಬರಾಸತ್ ಐ ಬ್ಲಾಕ್ ಟಿಎಂಸಿ ಸಂಚಾಲಕ ಮೊಹಮ್ಮದ್ ಇಶಾ ಸರ್ಕಾರ್ ತಿಳಿಸಿದ್ದಾರೆ. “ವಿಡಿಯೋದ ಸತ್ಯಾಸತ್ಯತೆ ಸಾಬೀತಾದರೆ ಮತ್ತು ಅಪರಾಧ ಸಾಬೀತಾದರೆ, ಕ್ರಮ ಕೈಗೊಳ್ಳಲಾಗುವುದು. ಇಷ್ಟು ದೊಡ್ಡ ಪ್ರಮಾಣದ ಹಣದ ಮೂಲದ ಬಗ್ಗೆಯೂ ಪ್ರಶ್ನೆಗಳು ಉದ್ಭವಿಸುತ್ತವೆ” ಎಂದಿದ್ದಾರೆ.

ಪಶ್ಚಿಮ ಬಂಗಾಳದ ಪ್ರಸ್ತುತ ವಿಧಾನಸಭೆಯ ಅವಧಿಯು 2026ರ ಮೇ 7ಕ್ಕೆ ಮುಕ್ತಾಯವಾಗಲಿದೆ. ಮುಂದಿನ ವಿಧಾನಸಭೆ ಚುನಾವಣೆಯು ಮಾರ್ಚ್-ಏಪ್ರಿಲ್ ಅವಧಿಯಲ್ಲಿ ನಡೆಯುವ ಸಾಧ್ಯತೆಯಿದೆ. ಈ ನಡುವೆ ಟಿಎಂಸಿ ನಾಯಕರ ಹಳೆಯ ವಿಡಿಯೋ ವೈರಲ್ ಆಗಿರುವುದು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ಈ ವಿಡಿಯೊವನ್ನು ಮುಂದಿಟ್ಟುಕೊಂಡು ಆಡಳಿತರೂಢ ಪಕ್ಷದ ಮೇಲೆ, ಸರ್ಕಾರದ ಮೇಲೆ ವಾಗ್ದಾಳಿ ನಡೆಸುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...