ಕಾಲ್ತುಳಿತ | ಯುವಕರ ಸಾವು ಹೆಮ್ಮೆಯ ವಿಷಯವಲ್ಲ, ತನಿಖೆಯಿಂದ ಸತ್ಯ ಹೊರಬರಲಿ: ಸಚಿವ ಪ್ರಿಯಾಂಕ್ ಖರ್ಗೆ

Date:

Advertisements

ಕಾಲ್ತುಳಿತದಲ್ಲಾದ ಯುವಕರ ಸಾವು ಯಾವುದೇ ಸರ್ಕಾರಕ್ಕೆ ಹೆಮ್ಮೆಯ ವಿಷಯವಲ್ಲ. ಬೆಂಗಳೂರಿನಲ್ಲಿ ನಡೆದ ಘಟನೆಯನ್ನು ನಾನು ಸಮರ್ಥಿಸುತ್ತಿಲ್ಲ. ಆರ್‌ಸಿಬಿ, ಕೆಎಸ್‌ಸಿಎ ಹಾಗೂ ಬಿಸಿಸಿಐ ಪ್ಲ್ಯಾನಿಂಗ್‌ನಲ್ಲಿ‌ ಲೋಪವಾಗಿದೆ. ಸರ್ಕಾರದ ಲೋಪ ಏನಾದರೂ ಆಗಿದ್ದರೆ ತನಿಖೆಯಲ್ಲಿ ಸತ್ಯಾಸತ್ಯತೆ ಹೊರಬಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಕಲಬುರಗಿಯ ಐವಾನ್ ಇ ಶಾಹಿ‌ ಅತಿಥಿ ಗೃಹದಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮದವರೊಂದಿಗೆ ಅವರು ಮಾತನಾಡಿ, “ಭದ್ರತೆಯ ದೃಷ್ಟಿಯಿಂದ ಸರ್ಕಾರ ವಿಕ್ಟರಿ ಪೆರೇಡ್‌ಗೆ ನಿರಾಕರಣೆ ಮಾಡಿತ್ತು. ಆದರೆ,‌ ಬಿಜೆಪಿಯವರು ಇದಕ್ಕೆ ತಕರಾರು ತೆಗೆದು ಟ್ವೀಟ್ ಮಾಡಿ, ನಂತರ ಡಿಲೀಟ್ ಮಾಡಿದ್ದಾರೆ. ಈಗ ಘಟನೆ ನಡೆದು‌ ಹೋಗಿದೆ. ಎಲ್ಲದರಲ್ಲೂ ರಾಜಕೀಯ ಮಾಡಬಾರದು, ಇದು ಸಮಯವಲ್ಲ” ಎಂದರು.

“ಸರ್ಕಾರ ತನ್ನ ಜವಾಬ್ದಾರಿಯಿಂದ ಹಿಂದೆ ಸರಿದಿಲ್ಲ. ಸಾವಿಗೀಡಾದವರ ಮನೆಯವರಿಗೆ ಸಾಂತ್ವನ ಹೇಳಿದೆ. ಪರಿಹಾರ ಕೂಡಾ ಘೋಷಿಸಿದೆ. ಘಟನೆ ಕುರಿತಂತೆ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ತನಿಖೆ ನಡೆಯುತ್ತಿದೆ. ಪೊಲೀಸ್ ಅಧಿಕಾರಗಳ ಸಸ್ಪೆಂಡ್ ಮಾಡಲಾಗಿದೆ” ಎಂದು ಹೇಳಿದರು.

Advertisements

ಗೃಹ ಸಚಿವರ ರಾಜೀನಾಮೆಗೆ ಬಿಜೆಪಿ ಒತ್ತಾಯಿಸುತ್ತಿರುವುದರ ಬಗ್ಗೆ ಪ್ರತಿಕ್ರಿಯಿಸಿ, “ಎಲ್ಲ ಘಟನೆಗಳಿಗೂ ಒಂದೇ ಮಾನದಂಡ ಅನ್ವಯ ಆಗಬೇಕು. ಪೆಹೆಲ್ಗಾಂ ನಲ್ಲಿ ಉಗ್ರರು ಜನರನ್ನು ಹತ್ಯೆ ಮಾಡಿ ಹೋಗಿದ್ದಾರೆ ಅವರು ಎಲ್ಲಿ ಹೋಗಿದ್ದಾರೆ. ಭಾರತದ ಒಳಗೆ ಇದ್ದಾರ ಅಥವಾ ಪಾಕಿಸ್ತಾನ ಕ್ಕೆ ಹೋಗಿದ್ದಾರ ಎನ್ನುವ ಮಾಹಿತಿ ಇಲ್ಲ. ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವರ, ವಿದೇಶಾಂಗ ಸಚಿವರ ರಾಜೀನಾಮೆಗೆ ಯಾರಾದರೂ ಒತ್ತಾಯಿಸಿದ್ದಾರೆಯೇ ? ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಭಿಮಾನಿಗಳ ಅತಿರೇಕ ಮತ್ತು ಸರ್ಕಾರದ ಅವಿವೇಕ

“ವಿಧಾನಸೌಧದ ಮುಂದೆ ಸರ್ಕಾರ ಕಾರ್ಯಕ್ರಮ ಆಯೋಜಿಸಿತ್ತು. ಅಲ್ಲಿ ಆಟಗಾರರಿಗೆ ಸನ್ಮಾನ ಮಾಡುವುದು ತಪ್ಪಾ? ಅಂತಹ ಕಾರ್ಯಕ್ರಮ ನಡೆದಾಗ ಯಾರಾದರೂ ಬರುತ್ತಾರೆ ಆಟಗಾರರೊಂದಿಗೆ ಫೋಟೋ ತೆಗೆಸಿಕೊಳ್ಳುತ್ತಾರೆ. ಆದರೆ, ಆಟೋಗ್ರಾಫ್, ಫೋಟೋಗ್ರಾಫ್ ಹುಚ್ಚು ಇರುವುದು ಮೋದಿಗೆ ಹೊರತು ನಮಗಲ್ಲ” ಎಂದು ತಿರುಗೇಟು ನೀಡಿದರು.

“ಬಿಜೆಪಿ ನಾಯಕರು ರಾಜ್ಯಪಾಲರನ್ನು ಭೇಟಿಯಾಗುತ್ತಿರುವ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕ್, ಬಿಜೆಪಿಯವರು ರಾಜ್ಯಪಾಲರನ್ನು ಭೇಟಿ ಮಾಡುವುದರಲ್ಲಿ ವಿಶೇಷವೇನಿಲ್ಲ. ಕಲಬುರಗಿಯ ವಿಚಾರದಲ್ಲಿಯೂ ಕೂಡಾ ಅವರು ರಾಜ್ಯಪಾಲರನ್ನು ಭೇಟಿ ಮಾಡಿದ್ದರು. ಬೆಂಗಳೂರು ಕಾಲ್ತುಳಿತ ಘಟನೆಯನ್ನು ರಾಜಕೀಯಗೊಳಿಸುತ್ತಿದ್ದಾರೆ. ಸಿಎಂ ಮಸಾಲೆ ದೋಸೆ ತಿನ್ನಲು ಹೋಗಿದ್ದಾರೆ ಎನ್ನುತ್ತಾರೆ. ಬಿಜೆಪಿಯವರು ಎಲ್ಲದಕ್ಕೂ ಮಸಾಲೆ ಹಾಕುತ್ತಾರೆ. ಅವರಿಗೆ ಪ್ರೌಢಿಮೆ ಇಲ್ಲ ಆದರೆ ನಮಗಿದೆ” ಎಂದರು.

ತನಿಖೆ

“ಕಲ್ಯಾಣ ಕರ್ನಾಟಕದ ಸಾಂಸ್ಕೃತಿಕ ಸಂಘದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ನೂತನ ಅಧಿಕಾರಿಗಳನ್ನು ನೇಮಿಸಲಾಗಿದೆ. ಅಧಿಕಾರಿಗಳು ವರದಿ ಸಲ್ಲಿಸಲು ಕಾಲಾವಕಾಶ ಕೇಳಿದ್ದಾರೆ ಆದಷ್ಟು ಬೇಗ ವರದಿ ಬರಲಿದೆ” ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X