ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನದ ವೇಳಾಪಟ್ಟಿ ಇಂದು (ಮಾರ್ಚ್ 29) ಬೆಳಿಗ್ಗೆ 11:30ಕ್ಕೆ ಪ್ರಕಟವಾಗಲಿದೆ.
ಭಾರತೀಯ ಚುನಾವಣಾ ಆಯೋಗವು ದೆಹಲಿಯಲ್ಲಿ ಸುದ್ದಿಗೋಷ್ಠಿ ಕರೆದಿದೆ. 224 ಸದಸ್ಯ ಬಲದ ಕರ್ನಾಟಕ ವಿಧಾನಸಭಾ ಚುನಾವಣಾ ಮತದಾನದ ವೇಳಾಪಟ್ಟಿ ಬಿಡುಗಡೆ ಮಾಡಲಿದೆ.
ಕರ್ನಾಟಕ ವಿಧಾನಸಭೆ ಚುನಾವಣೆಗೆ ಏಪ್ರಿಲ್ ಮೊದಲ ವಾರದಲ್ಲಿ ದಿನಾಂಕ ಪ್ರಕಟವಾಗಲಿದೆ ಎಂದು ಹೇಳಲಾಗಿತ್ತು. ಆದರೆ, ಇಂದೇ ರಾಜ್ಯ ವಿಧಾನಸಭೆ ಚುನಾವಣೆಯ ದಿನಾಂಕ ಘೋಷಣೆಯಾಗಲಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಕೇಂದ್ರ ಚುನಾವಣಾ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಚುನಾವಣಾ ವೇಳಾಪಟ್ಟಿ ನಿಗದಿ ಮಾಡಲಿದ್ದಾರೆ.