ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರನ್ನಾಗಿ ಜಿ.ಎಸ್. ಸಂಗ್ರೇಶಿ ಅವರನ್ನು ನೇಮಕ ಮಾಡಿ ಹೊರಡಿಸಿದ್ದ ಆದೇಶವನ್ನು ಸರ್ಕಾರ ಶುಕ್ರವಾರ ವಾಪಸ್ ಪಡೆದಿದೆ.
ನೂತನ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಗದಿಗೆಪ್ಪ ಸಣ್ಣಬಸಪ್ಪ ಸಂಗ್ರೇಶಿ ಅವರನ್ನು ಕರ್ನಾಟಕ ಚುನಾವಣಾ ಆಯೋಗದ ಆಯುಕ್ತರನ್ನಾಗಿ ನೇಮಕ ಮಾಡಿ ಸರ್ಕಾರದ ಶಿಫಾರಸ್ಸಿನ ಮೇರೆಗೆ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಜೂನ್ 27ರಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಹೊರಡಿಸಿರುವ ಆದೇಶವನ್ನು ವಾಪಸ್ ಪಡೆದಿರುವುದಾಗಿ ಮುಖ್ಯಮಂತ್ರಿಗಳ ಕಚೇರಿ ಮಾಹಿತಿ ನೀಡಿದೆ.
ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ಜಿ.ಎಸ್. ಸಂಗ್ರೇಶಿ ಅವರನ್ನು ನೇಮಕ ಮಾಡಿ ಹೊರಡಿಸಿದ್ದ ಆದೇಶವನ್ನು ಸರ್ಕಾರ ವಾಪಸ್ ಪಡೆದಿದೆ.
ಗದಿಗೆಪ್ಪ ಸಣ್ಣಬಸಪ್ಪ ಸಂಗ್ರೇಶಿ ಅವರನ್ನು ಕರ್ನಾಟಕ ಚುನಾವಣಾ ಆಯೋಗದ ಆಯುಕ್ತರನ್ನಾಗಿ ನೇಮಕ ಮಾಡಿ ಸರ್ಕಾರದ ಶಿಫಾರಿಸಿನ ಮೇರೆಗೆ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ. pic.twitter.com/aySHS6b8SK
— Irshad Venur ಇರ್ಷಾದ್ ವೇಣೂರು (@muhammadirshad6) June 28, 2024
ಗದಿಗೆಪ್ಪ ಸಣ್ಣಬಸಪ್ಪ ಸಂಗ್ರೇಶಿ ಅವರು ಪ್ರಸ್ತುತ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
