ರಾಜ್ಯ ಬಿಜೆಪಿ ಲೀಡರ್ ಲೆಸ್ ಪಾರ್ಟಿ: ಜಗದೀಶ್‌ ಶೆಟ್ಟರ್‌ ಲೇವಡಿ

Date:

Advertisements
  • ‘ರಾಜ್ಯದಲ್ಲಿ ಬಿಜೆಪಿ ಇನ್ನೂ ದಯನೀಯ ಪರಿಸ್ಥಿತಿಗೆ ಹೋಗುತ್ತದೆ’
  • ‘ನನಗೆ ಬಿಜೆಪಿ ಹೈಕಮಾಂಡ್​​ನಿಂದ ಯಾವುದೇ ಕರೆ ಬಂದಿಲ್ಲ’

ರಾಜ್ಯ ಬಿಜೆಪಿ ಘಟಕ ಲೀಡರ್ ಲೆಸ್ ಪಾರ್ಟಿಯಾಗಿದೆ. ರಾಜ್ಯ ಬಿಜೆಪಿ ಘಟಕಕ್ಕೂ ಹೊಸ ಅಧ್ಯಕ್ಷರನ್ನು ನೇಮಿಸಲು ಆಗಿಲ್ಲ. ಕಾಂಗ್ರೆಸ್ ನಾಯಕರನ್ನು ಬಿಜೆಪಿಯವರು ಭೇಟಿಯಾಗುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಇನ್ನೂ ದಯನೀಯ ಪರಿಸ್ಥಿತಿಗೆ ಹೋಗುತ್ತದೆ ಎಂದು ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಹೇಳಿದರು.

ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ” ಬಿಜೆಪಿಯಲ್ಲಿ ಸಾಕಷ್ಟು ಜನ ನೊಂದಿದ್ದಾರೆ. ಸಂಕಟಪಡುತ್ತಿದ್ದಾರೆ. ಬಿಜೆಪಿಯಿಂದ ಹೊರಗೆ ಬರಲು ಬಹಳಷ್ಟು ಜನ ತಯಾರಿದ್ದಾರೆ” ಎಂದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ಮಾಡಿ ತಮ್ಮ ಜೊತೆ ಮಾತನಾಡಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿವೆ ಎಂದು ಪತ್ರಕರ್ತರು ಪ್ರಶ್ನಿಸಿದಾಗ, “ನನಗೆ ಬಿಜೆಪಿ ಹೈಕಮಾಂಡ್​​ನಿಂದ ಯಾವುದೇ ಕರೆ ಬಂದಿಲ್ಲ. ದೆಹಲಿಯ ಹಿರಿಯ ನಾಯಕರ ಮನಸ್ಸಿನಲ್ಲಿ ಏನಿದೆಯೋ ಗೊತ್ತಿಲ್ಲ. ಕರೆ ಮಾಡುವುದು ಬಿಡುವುದು ಅವರಿಗೆ ಬಿಟ್ಟ ವಿಚಾರ. ಕರೆ ಬಾರದೆ ಈ ರೀತಿ ಚರ್ಚೆಗಳೆಲ್ಲ ಏಕೆ” ಎಂದು ಪ್ರಶ್ನಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಸರ್ಕಾರಿ ವಕೀಲರಿಗೆ ಸರ್ಕಾರದ ಕೇಸು ಎಂದರೆ ಅಸಡ್ಡೆ ಇರಕೂಡದು: ಸಿಎಂ ಸಿದ್ದರಾಮಯ್ಯ ಸೂಚನೆ

ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಲು ರಾಜ್ಯ ಬಿಜೆಪಿ ನಾಯಕರಿಗೆ ಸಿಗದ ಅವಕಾಶದ ಬಗ್ಗೆ ಪ್ರತಿಕ್ರಿಯಿಸಿ, “ಬಿಜೆಪಿಯಲ್ಲಿ ಏನಾಗುತ್ತದೆ ಎನ್ನುವ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡಲ್ಲ. ರಾಷ್ಟ್ರೀಯ ಪಕ್ಷಕ್ಕೆ ವಿಪಕ್ಷ ನಾಯಕನ ಆಯ್ಕೆ ಮಾಡಲು ಆಗಿಲ್ಲ. ಬಿಜೆಪಿ ಬಹಳ ಶೋಚನೀಯ ಪರಿಸ್ಥಿತಿಯಲ್ಲಿದೆ. ನಮ್ಮಂತಹ ನಾಯಕರನ್ನೇ ಪಕ್ಷದಿಂದ ಹೊರಗೆ ಹಾಕಿದ್ದಾರೆ” ಎಂದು​ ಕಿಡಿ ಕಾರಿದರು.

“ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲುತದೆ. ಕಾಂಗ್ರೆಸ್ ಜಯಭೇರಿ ಬಾರಿಸುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್​ 12ರಿಂದ 15 ಸ್ಥಾನ ಗೆಲ್ಲುವುದು ನಿಶ್ಚಿತ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X