ರಾಜ್ಯ ಬಿಜೆಪಿ ನಾಯಕರಿಗೆ ಬಂಡಾಯ ನಾಯಕರು ಬುದ್ಧಿ ಕಲಿಸುವ ದಾರಿ ದೂರವಿಲ್ಲ: ಲಕ್ಷ್ಮಣ ಸವದಿ

Date:

ಬಿಜೆಪಿಯ ಬಂಡಾಯ ನಾಯಕರು ಮೋದಿ ಪ್ರಧಾನಿಯಾಗಲೆಂದು ಸುಮ್ಮನಿದ್ದಾರೆ. ಚುನಾವಣೆಯಾದ ಮೇಲೆ ನೋಡಿ ಇದೆ ಆಟ. ರಾಜ್ಯ ನಾಯಕರಿಗೆ ಬುದ್ಧಿ ಕಲಿಸುತ್ತಾರೆ ಎಂದು ಬಿಜೆಪಿ ಒಳ ಸತ್ಯವನ್ನು ಶಾಸಕ ಲಕ್ಷ್ಮಣ ಸವದಿ ವಿಶ್ಲೇಷಿಸಿದ್ದಾರೆ.

- Advertisement -

ವಿಕಾಸಸೌಧದಲ್ಲಿ ಮಂಗಳವಾರ ಮಾತನಾಡಿದ ಅವರು, “ಲೋಕಸಭೆ ಚುನಾವಣೆ ಬಳಿಕ ನೋಡಿ, ಇವರಿಗೆ ಬುದ್ಧಿ ಕಲಿಸುತ್ತೇವೆ ಎಂದು ಬಿಜೆಪಿಯ ಕೆಲವರು ಹೇಳಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

“ಈಗ ಒಬ್ಬೊಬ್ಬರ ಮುನಿಸು ಆರಂಭವಾಗಿದೆ. ಇನ್ನೂ ಅನೇಕರು ಕ್ಯೂನಲ್ಲಿದ್ದಾರೆ. ಈಶ್ವರಪ್ಪನವರನ್ನು ತಳ್ಳಿದ್ರು, ಸದಾನಂದ ಗೌಡರನ್ನು ತಳ್ಳಿದ್ರು, ಇನ್ನೂ ಕೆಲ ನಂಬರ್ ಗಳಿದ್ದಾವೆ” ಎಂದು ಹೇಳಿದರು.

ಜಗದೀಶ್ ಶೆಟ್ಟರ್ ಸ್ಪರ್ಧೆ ವಿಚಾರವಾಗಿ ಮಾತನಾಡಿ, “ಬಿಜೆಪಿಯವರು ಯಾವ ಕುರಿಯನ್ನು ಎಲ್ಲಿ ನಿಲ್ಲಿಸಬೇಕು, ಎಲ್ಲಿ ಬಲಿ ಕೊಡಬೇಕು ಎಂದು ವ್ಯವಸ್ಥಿತವಾಗಿ ಪ್ಲಾನ್ ಮಾಡುತ್ತಿದ್ದಾರೆ. ಶೆಟ್ಟರ್ ಅವರಿಗೆ ಟಿಕೆಟ್ ಕೊಟ್ಟ ಹಾಗೇನು ಆಗಬೇಕು, ಪಾರ್ಲಿಮೆಂಟಿಗೆ ಹೋಗದಂತೆನೂ ಆಗಬೇಕು. ಪಾರ್ಲಿಮೆಂಟ್‌ಗೆ ಹೋದರೇ ಮಂತ್ರಿ ಆಗಬೇಕಾಗುತ್ತದೆ” ಎಂದು ತಿಳಿಸಿದರು.

“ಬಿಜೆಪಿಯಲ್ಲಿ ಹಿರಿತನ, ಸಂಘಟನೆ ಇರುವವರು, ಪಕ್ಷಕ್ಕೆ ಬಲ ತುಂಬುವವರ ಅವಶ್ಯಕತೆ ಇಲ್ಲ. ಒಟ್ಟಾರೆ ಬಿಜೆಪಿ ಅಧೋಗತಿಗೆ ಹೋಗುವುದು ಶತಸಿದ್ಧ. ನಮಗೆ ತಟ್ಟಿದ ಬಿಸಿ ಈಶ್ವರಪ್ಪ ಅವರಿಗೆ ತಟ್ಟಿದರೆ ಅರ್ಥ ಆಗಲಿದೆ ಎಂದು ಹೇಳಿದ್ದೆ‌. ಈಗ ಈಶ್ವರಪ್ಪ ಅವರಿಗೆ ಬಿಸಿ ತಟ್ಟಿದೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...

‘ಕೊಂದವರು ಯಾರು?’ – ಧರ್ಮಸ್ಥಳದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಅ.2ರಂದು ಬೃಹತ್ ವಿಚಾರ ಸಂಕಿರಣ

ಧರ್ಮಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಹಲವಾರು ದಶಕಗಳಿಂದ ನಡೆದಿದೆ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಸಿಜೆಪಿ ಪಟ್ಟು: ಹೋರಾಟಕ್ಕೆ ಸೋನಮ್ ವಾಂಗ್‌ಚುಕ್ ಬೆಂಬಲ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಹೊಣೆಗಾರಿಕೆ ಮತ್ತು...