ರಾಜಕೀಯ ಪ್ರೇರಿತ ರಿವರ್ಸ್ ಗೇರ್ ಬಜೆಟ್: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕೆ

Date:

  • ಬಜೆಟ್ ನಲ್ಲಿಯೂ ದ್ವೇಷದ ರಾಜಕಾರಣ, ನಮ್ಮ ಯೋಜನೆಗಳ ಬಗ್ಗೆ ಪ್ರಸ್ತಾಪವಿಲ್ಲ
  • ಶಿಕ್ಷಣ, ಆರೋಗ್ಯ, ಕೃಷಿ, ಪಿಡಬ್ಲುಡಿ, ನೀರಾವರಿ, ಯೋಜನೆಗಳಿಗೆ ಅನುದಾನ ಕಡಿಮೆ

ಬಜೆಟ್ ನಲ್ಲಿ ಭವಿಷ್ಯದ ಯೋಜನೆಗಳ ಕುರಿತು ಹೇಳುವ ಬದಲು, ಹಿಂದಿನ ಸರ್ಕಾರ ಹಾಗೂ ಕೇಂದ್ರ ಸರ್ಕಾರವನ್ನು ದ್ವೇಷಿಸುವ ರಾಜಕೀಯ ಪ್ರೇರಿತ, ರಿವರ್ಸ್ ಗೇರ್ ಬಜೆಟ್‌ ಇದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.

- Advertisement -

ರಾಜ್ಯ ಸರ್ಕಾರದ ಬಜೆಟ್ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಇವತ್ತಿನ ಹಣಕಾಸಿನ ವಾಸ್ತವ ಸ್ಥಿತಿ ಬಗ್ಗೆ ಮಾತನಾಡುವ ಬದಲು ಹಳೆಯ ಕಾರ್ಯಕ್ರಮಗಳ ಬಗ್ಗೆ ಹೇಳುತ್ತಾರೆ ಎಂದರೆ, ಅವರು ಭೂತಕಾಲದಲ್ಲಿದ್ದಾರೆ. ಇದು ರಾಜಕೀಯ ಬಜೆಟ್. ಹಲವಾರು ಅಂಕಿ ಅಂಶಗಳನ್ನು ಆ ಸಂದರ್ಭಕ್ಕೆ ವಾಸ್ತವಾಂಶಕ್ಕೆ ತಕ್ಕಂತೆ ಎಲ್ಲ ಸರ್ಕಾರಗಳು ಮಾಡಿವೆ. ಪ್ರತಿಯೊಂದಕ್ಕೂ 2013 ಕ್ಕೆ ಹೋಲಿಕೆ ಮಾಡಿದ್ದಾರೆ. ಅದನ್ನು ನೋಡಿದರೆ ಅವರು ಹೆಚ್ಚು ಸಾಲ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ರಾಜ್ಯಪಾಲರ ಭಾಷಣ ಮತ್ತು ಬಜೆಟ್ ವ್ಯತ್ಯಾಸ ನೋಡಿದರೆ ಇದೊಂದು ಸುಳ್ಳು ಹೇಳುವ ಸರ್ಕಾರ ಅಂತ ಗೊತ್ತಾಗುತ್ತಿದೆ. ಕೊವಿಡ್ ನಿರ್ವಹಣೆಯ ಬಗ್ಗೆ ಇಡೀ ವಿಶ್ವವೇ ಕೊಂಡಾಡಿದೆ. ನಮ್ಮ ರಾಜ್ಯದ ಕೊವಿಡ್ ನಿರ್ವಹಣೆಯ ಬಗ್ಗೆ ದೇಶವೇ ಕೊಂಡಾಡಿದೆ. ಕೇಂದ್ರ ಸರ್ಕಾರ ಕೊವಿಡ್ ಸಂದರ್ಭದಲ್ಲಿ ಸಾಕಷ್ಟು ಸಹಾಯ ಮಾಡಿದೆ. ನಮ್ಮ ಸರ್ಕಾರ ಕೂಡ ಸುಮಾರು 2000 ಕೋಟಿ ರೂ. ಕೊವಿಡ್ ನಿಂದ ಸಂಕಷ್ಟಕ್ಕೆ ಒಳಗಾದವರ ನೆರವಿಗೆ ನೀಡಿದ್ದೇವೆ ಎಂದರು.

ನಾವು ಎಷ್ಟು ಹೆಚ್ಚು ತೆರಿಗೆ ಸಂಗ್ರಹ ಮಾಡಿದ್ದೇವೆ. ಕೇಂದ್ರ ಎಷ್ಟು ಅನುದಾನ ನೀಡಿದೆ ಎನ್ನುವುದು ದಾಖಲೆ ಇದೆ. ಕೇಂದ್ರದ ಅನುದಾನ ಕಡಿಮೆ ಆಗಿದೆ ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರ ಎರಡು ರೀತಿಯಲ್ಲಿ ಅನುದಾನ ನೀಡಲಿದೆ. ಕೆಲವು ಯೋಜನೆಗಳಲ್ಲಿ ನೇರವಾಗಿ ಫಲಾನುಭವಿಗಳಿಗೆ ಅನುದಾನ ದೊರೆಯುತ್ತದೆ ಅದನ್ನು ಮರೆಮಾಚುವ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದರು.

ಈ ಬಜೆಟ್ ನೋಡಿದರೆ ಟೀಕೆ ಮಾಡುವುದಕ್ಕೆ ಹೆಚ್ಚಿನ ಸ್ಥಾನ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ 52 ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಹೇಳಿದ್ದಾರೆ. ಈಗಾಗಲೇ 6 ತಿಂಗಳು ಕಳೆದಿದೆ. ಈ ವರ್ಷ ಸುಮಾರು 25 ಸಾವಿರ ಕೊಟಿ ಮಾತ್ರ ಹೆಚ್ಚಿಗೆ ಬೇಕಾಗುತ್ತದೆ. ತೆರಿಗೆ ಹೆಚ್ಚಳ ಮಾಡುವ ಅಗತ್ಯವಿರಲಿಲ್ಲ ಎಂದರು.

ಗ್ಯಾರಂಟಿ ಯೋಜನೆಗಳ ಜಾರಿಯ ಹೆಸರಲ್ಲಿ ಈ‌ ಬಜೆಟ್ ಸಾಮಾನ್ಯರ ಮೇಲೆ ದೊಡ್ಡ ಹೊರೆ ಹೊರೆಸಿದೆ. ನಮ್ಮದು 77 ಸಾವಿರ ಕೋಟಿ ಸಾಲ ಇದ್ದದ್ದು, ಈಗ 88 ಸಾವಿರ ಕೋಟಿಗೆ ಹೆಚ್ಚಿಸಿದ್ದಾರೆ. ಬಜೆಟ್ ಗಾತ್ರ 3.27 ಲಕ್ಷ ಕೋಟಿ ಮಾಡಿದ್ದಾರೆ. ನಾವು ಸರಪ್ಲಸ್ ಬಜೆಟ್ ಮಾಡಿದ್ದೆವು, ಇವರು ಡೆಫಿಸಿಟ್ ಬಜೆಟ್ ಮಾಡಿದ್ದಾರೆ. ಯಾವುದೇ ಭರವಸೆ ನೀಡದೆ, ಜನರಿಗೆ ಸುಳ್ಳು ಭರವಸೆ ನೀಡಿದ್ದಾರೆ. ಶಿಕ್ಷಣ, ಆರೋಗ್ಯ, ಕೃಷಿ, ಪಿಡಬ್ಲುಡಿ, ನೀರಾವರಿ, ಯೋಜನೆಗಳಿಗೆ ಅನುದಾನ ಪ್ರಮಾಣ ಕಡಿಮೆ ಮಾಡಿದ್ದಾರೆ. ಹೆಚ್ಚಿನ ಅನುದಾನ ನೀಡದೆ ಅಭಿವೃದ್ಧಿ ಹೇಗೆ ಆಗುತ್ತದೆ ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಬಜೆಟ್‌ 23-24 | ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆ ನಿಧಿ 4,079 ಕೋಟಿ ರೂ. ಹೆಚ್ಚಳ

ಬಜೆಟ್ ನಲ್ಲಿಯೂ ದ್ವೇಷದ ರಾಜಕಾರಣ ಮಾಡಿದ್ದಾರೆ. ನಮ್ಮ ಯೋಜನೆಗಳ ಬಗ್ಗೆ ಎಲ್ಲಿಯೂ ಪ್ರಸ್ತಾಪ ಮಾಡಿಲ್ಲ. ನಾವು ಎಲ್ಲರಿಗೂ ಉಚಿತ ಶಿಕ್ಷಣ ಪ್ರಸ್ತಾಪ ಮಾಡಿದ್ದೆವು. ಸ್ತ್ರೀ ಸಾಮರ್ಥ್ಯ, ಯುವ ನಿಧಿ ಯೋಜನೆ ಮಾಡಿದ್ದೆವು. ಅವುಗಳ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ. ಇದೊಂದು ಜನ ವಿರೋಧಿ, ಅಭಿವೃದ್ಧಿ ಮಾರಕವಾಗುವಂತಹ ಯಾವುದೇ ಹೊಸ ಭರವಸೆ ನೀಡದಿರುವ, ದುಡಿಯುವ ವರ್ಗ, ಪರಿಶಿಷ್ಟ ಜನರಿಗೆ ಯಾವುದೇ ಅನುಕೂಲಕರವಲ್ಲದ ಬಜೆಟ್ ಇದಾಗಿದೆ ಎಂದು ಅಭಿಪ್ರಾಯಪಟ್ಟರು.

ಕೊವಿಡ್ ಸಂದರ್ಭದಲ್ಲಿ ಏನೂ ಅಗಿಲ್ಲ ಎನ್ನುವಂತೆ ಭಾವಿಸಿದ್ದಾರೆ. ಕೊವಿಡ್ ಇಲ್ಲದ ಸಂದರ್ಭದಲ್ಲಿ ಇವರು ಸಾಲ ಮಾಡಿದ್ದಾರೆ. ಕೇಂದ್ರದಿಂದ ಬರುವ ಅನುದಾನ ಬರುತ್ತಿದೆ. ಜಿಎಸ್‌ಟಿ ಪರಿಹಾರ ಐದು ವರ್ಷ ಬರುತ್ತದೆ ಎಂದು ಸಂವಿಧಾನದಲ್ಲಿಯೇ ಇದೆ. ಅದನ್ನು ಕಾಂಗ್ರೆಸ್ ಅವರು ಒಪ್ಪಿಕೊಂಡು ಬಂದಿದ್ದಾರೆ. ಗ್ಯಾರಂಟಿ ಯೋಜನೆಗಳ ಭಾರ ಸಾಮಾನ್ಯ ಜನರ ಮೇಲೆ ಹಾಕಿದ್ದಾರೆ. ಬಜೆಟ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುವ ಸಚಿವರಿಗೆ ಅಧಿಕಾರದ ಮದ ಏರಿದೆ. ಇಷ್ಟು ಬೇಗ ಅಧಿಕಾರದ ಮದ ಏರಬಾರದು ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವರಾದ ಬೈರತಿ ಬಸವರಾಜ, ಸಿ ಸಿ ಪಾಟೀಲ್, ಎಸ್ ಟಿ ಸೋಮಶೇಖರ, ಶಾಸಕ ಸುರೇಶಗೌಡ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

SIR ಬದಲು SSR! ಪ್ರತಿಭಟನೆ, ಉಳಿದಿಬ್ಬರು ಚುನಾವಣಾ ಆಯುಕ್ತರ ತಕರಾರುಗಳಿಗೆ ಕಡೆಗೂ ಮಣಿಯಿತೇ ಗ್ಯಾನೇಶ್- ಮೋದಿ- ಶಾ ತ್ರಿವಳಿ?

ತೀವ್ರ ವಿರೋಧ, ಪ್ರತಿಭಟನೆ, ಸುಪ್ರೀಂ ಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾದ ಬಳಿಕ...

ಸಾರ್ವಜನಿಕ ಸಭ್ಯತೆ ಮತ್ತು ಹೆಣ್ಣುಮಕ್ಕಳು ಮಾಡಿಕೊಳ್ಳುವ ಲೆಕ್ಕಾಚಾರಗಳು

ಫೀಲ್ಡ್‌ಗೆ ಇಳಿದು ಕೆಲಸ ಮಾಡುವಾಗ ಮಹಿಳಾ ಪತ್ರಕರ್ತೆಯರು ಎದುರಿಸುವ ರಿಸ್ಕ್ ಮತ್ತು...