ಬಜೆಟ್ 23-24 | ಆಸಿಡ್‍‍ ದಾಳಿ ಸಂತ್ರಸ್ತೆಯರಿಗೆ ಐದು ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ

Date:

Advertisements
  • ಮಹಿಳಾ ಉದ್ದೇಶಿತ ಯೋಜನೆಗಳಿಗೆ 70,427 ಕೋಟಿ ರೂ. ಆಯವ್ಯಯ ನಿಗದಿ
  • ಮಕ್ಕಳ ಉದ್ದೇಶಿತ ಯೋಜನೆಗಳಿಗೆ ಪ್ರಸಕ್ತ ಸಾಲಿಗೆ 51,229 ಕೋಟಿ ರೂ. ಅನುದಾನ

ರಾಜ್ಯದಲ್ಲಿನ ಆಸಿಡ್‍‍ ದಾಳಿ ಸಂತ್ರಸ್ತರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಅವರಿಗೆ ಸ್ವಯಂ ಉದ್ಯೋಗಕ್ಕಾಗಿ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಐದು ಲಕ್ಷ ರೂ.ಗಳವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ ಒದಗಿಸಲು ಎರಡು ಕೋಟಿ ರೂ. ಅನುದಾನ ಮತ್ತು ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ವಸತಿ ಸೌಲಭ್ಯ ಒದಗಿಸಲಾಗುವುದು ರಾಜ್ಯ ಬಜೆಟ್‌ನಲ್ಲಿ ಗೋಷಿಸಲಾಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ.

  • ಗೃಹಲಕ್ಷ್ಮಿ ಯೋಜನೆಗಾಗಿ ನೋಂದಣಿ ಪ್ರಕ್ರಿಯೆ ಶೀಘ್ರವೇ ಪ್ರಾರಂಭವಾಗಲಿದ್ದು, ಮಹಿಳೆಯರ ಖಾತೆಗೆ ನೇರವಾಗಿ ಮಾಸಿಕ 2,000 ರೂ.ಗಳನ್ನು ವರ್ಗಾಯಿಸಲಾಗುವುದು. ಈ ಯೋಜನೆಗಾಗಿ ವಾರ್ಷಿಕ ಸುಮಾರು 30,000 ಕೋಟಿ ರೂ. ವೆಚ್ಚವಾಗಲಿದ್ದು, ಇದು ಇಡೀ ದೇಶದಲ್ಲಿಯೇ ಅತೀ ದೊಡ್ಡ ಆರ್ಥಿಕ ಭದ್ರತಾ ಯೋಜನೆ.
  • ವಿಶೇಷಚೇತನರಿಗೆ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸದೃಢತೆಯನ್ನು ಒದಗಿಸಲು ಇಲಾಖೆಯಲ್ಲಿ ನೋಂದಣಿಯಾಗಿರುವ ಸುಮಾರು 4,000 ವಿಶೇಷಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು 30 ಕೋಟಿ ರೂ.ಗಳ ವೆಚ್ಚದಲ್ಲಿ ಒದಗಿಸಲಾಗುವುದು. ಇದಲ್ಲದೆ, ನೋಂದಣಿಯಾಗದಿರುವ ಅರ್ಹ ಫಲಾನುಭವಿಗಳನ್ನು ಗುರುತಿಸಿ ಸೌಲಭ್ಯ.
  • ಮಹಿಳಾ ಉದ್ಯಮಿಗಳು ಆತಿಥ್ಯ, ಆರೈಕೆ ಮತ್ತು ಪ್ರವಾಸೋದ್ಯಮದಂತಹ ಸೇವಾ ವಲಯದಲ್ಲಿ ಹೆಚ್ಚಿನ ಅವಕಾಶ ಪಡೆಯುತ್ತಿದ್ದಾರೆ. ಆದ್ದರಿಂದ, ಸೇವಾ ವಲಯದಲ್ಲಿ ಮಹಿಳಾ ಉದ್ಯಮಿಗಳನ್ನು ಉತ್ತೇಜಿಸಲು ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಮೂಲಕ ಶೇ.4 ರ ಬಡ್ಡಿ ದರದಲ್ಲಿ ನೀಡಲಾಗುವ ಸಾಲದ ಮಿತಿಯನ್ನು ಎರಡು ಕೋಟಿ ರೂ.ಗಳಿಂದ ಐದು ಕೋಟಿ ರೂ.ಗಳಿಗೆ ಹೆಚ್ಚಳ.
  • 2023-24ನೇ ಸಾಲಿನಲ್ಲಿ 10 ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಗಳನ್ನು ಏಳು ಜಿಲ್ಲೆಗಳಲ್ಲಿ ಎನ್‌ಜಿಒಗಳ ಸಹಯೋಗದೊಂದಿಗೆ ಎರಡು ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭ.
  • 2023-24 ನೇ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ 70,427 ಕೋಟಿ ರೂ. ಆಯವ್ಯಯ ನಿಗದಿ ಮತ್ತು ಮಕ್ಕಳ ಉದ್ದೇಶಿತ ಯೋಜನೆಗಳಿಗೆ 51,229 ಕೋಟಿ ರೂ. ಅನುದಾನ ಒದಗಿಸಲಾಗಿದೆ.

ಈ ಸುದ್ದಿಓದಿದ್ದೀರಾ? ಕರ್ನಾಟಕ ಬಜೆಟ್ -2023 | ಕ್ಷಣ ಕ್ಷಣದ ಮಾಹಿತಿ…

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

Download Eedina App Android / iOS

X