ರಾಜ್ಯ ಬಜೆಟ್‌ 2024-25 | ಸಿದ್ದರಾಮಯ್ಯರಿಂದ 3,71,383 ಕೋಟಿ ರೂ. ಗಾತ್ರದ ಆಯವ್ಯಯ ಮಂಡನೆ

Date:

Advertisements

ಈವರೆಗೂ 14 ಬಜೆಟ್‌ ಮಂಡಿಸಿ ದಾಖಲೆ ನಿರ್ಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಅಭಿವೃದ್ಧಿ ಮುನ್ನೋಟ ನೀಡುವ 2024-25ನೇ ಸಾಲಿನ ಆಯವ್ಯಯವನ್ನು ಶುಕ್ರವಾರ 10.15ಕ್ಕೆ ಮಂಡಿಸಲು ಆರಂಭಿಸಿದರು. ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ 15ನೇ ಬಜೆಟ್‌ ಇದಾಗಿದೆ.

ಸಹಜವಾಗಿ ಬಜೆಟ್ ಮಂಡನೆ ಮುನ್ನ ಮುಖ್ಯಮಂತ್ರಿಗಳು ದೇವರಿಗೆ ವಿಶೇಷ ಪೂಜೆ, ಪುನಸ್ಕಾರದಲ್ಲಿ‌ ಭಾಗಿಯಾಗತ್ತಾರೆ. ಆದರೆ ಸಿಎಂ ಸಿದ್ದರಾಮಯ್ಯ ಅವರು ಈ ಬಾರಿಯೂ ಯಾವುದೇ ಪೂಜೆ ಪುರಸ್ಕಾರ, ದೇವಸ್ಥಾನ ಭೇಟಿ ನೀಡದೇ ನೇರವಾಗಿ ವಿಧಾನಸೌಧಕ್ಕೆ ಆಗಮಿಸಿದ್ದಾರೆ.

ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವರು ಸೂಟ್ ಕೇಸ್ ನೊಂದಿಗೆ ಆಗಮಿಸಿವುದು ಸಂಪ್ರದಾಯವಾಗಿತ್ತು. ಈ ವಿಚಾರದಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಇದಕ್ಕೆ ತಿಲಾಂಜಲಿ ಹಾಡಿ ಬಹಿಖಾತಾದೊಂದಿಗೆ ಆಗಮಿಸಿದರು. ಈ ಬಾರಿ ಟ್ಯಾಬ್‌ನೊಂದಿಗೆ ಆಗಮಿಸಿ ಬಜೆಟ್‌ ಮಂಡಿಸಿದ್ದರು. ರಾಜ್ಯದಲ್ಲಿ ಸಿದ್ದರಾಮಯ್ಯ ಅವರು ಲಿಡ್ಕರ್ ಬ್ಯಾಗ್ ನೊಂದಿಗೆ ಆಗಮಿಸುವ ಮೂಲಕ ಚರ್ಮ ಕೈಗಾರಿಕೆಯನ್ನು ಪ್ರೋತ್ಸಾಹವನ್ನು ಪ್ರತಿಬಿಂಬಿಸಿದರು.

Advertisements

10.15ಕ್ಕೆ ಬಜೆಟ್‌ ಓದಲು ಆರಂಭಿಸಿದ ಸಿದ್ದರಾಮಯ್ಯ ಅವರು, “ದೇಶ ಗಣರಾಜ್ಯವಾಗಿ 75ನೇ ವರ್ಷಕ್ಕೆ ಕಾಲಿಟ್ಟಿದೆ. ಈ ಸುಸಂದರ್ಭದಲ್ಲಿ ನನ್ನ 15ನೇ ಆಯವ್ಯಯ ಮಂಡಿಸುತ್ತಿರುವೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯದಂತೆ ಸಾಮಾಜಿಕ ಸಮಾನತೆಯ ಉದ್ದೇಶದೊಂದಿಗೆ ಈ ಬಜೆಟ್ ಮಂಡನೆ ಮಾಡುತ್ತಿದ್ದೇನೆ” ಎಂದರು.

“ಪ್ರಸಕ್ತ ಸಾಲಿನ ಬಜೆಟ್‌ ಗಾತ್ರ 3,71,383 ಕೋಟಿ ರೂ. ಆಗಿದ್ದು, ಗ್ಯಾರಂಟಿ ಯೋಜನೆಗಳು ಕೇವಲ ಚುನಾವಣಾ ಗಿಮಿಕ್‌ ಅಲ್ಲ. ಐದು ಗ್ಯಾರಂಟಿಗಳ ಜಾರಿಯಿಂದ ಇಡೀ ಜಗತ್ತು ರಾಜ್ಯದತ್ತ ನೋಡುತ್ತಿದೆ. ಶಕ್ತಿ ಯೋಜನೆಯಿಂದ ಮಹಿಳೆಯರು ಸಂತಸಗೊಂಡಿದ್ದಾರೆ. 5 ಗ್ಯಾರಂಟಿ ಜಾರಿಯಿಂದ ಸರ್ಕಾರದಲ್ಲಿ ಹಣವಿಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ. ಕೇಂದ್ರ ಸರ್ಕಾರ ಮಾಡದ್ದನ್ನು ನಾವು ಮಾಡಿದ್ದೇವೆ. ಬಿಟ್ಟಿ ಗ್ಯಾರಂಟಿ, ದಿವಾಳಿ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಎಲ್ಲರನ್ನೂ ಒಳಗೊಂಡಂತೆ ರಾಜ್ಯ ಅಭಿವೃದ್ಧಿ ಮಾಡುತ್ತೇವೆ” ಎಂದು ಸಿದ್ದರಾಮಯ್ಯ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X