ರಾಜ್ಯದ 2015-26ನೇ ಸಾಲಿನ ಬಜೆಟ್‌ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ್ದಾರೆ. ಈ ಬಾರಿಯ ಬಜೆಟ್ ಗಾತ್ರ 4,09,549 ಕೋಟಿ ರೂ.ಗಳದ್ದಾಗಿದೆ ಎಂದು ಅವರು ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಅವರು ಆಯವ್ಯಯ ಮಂಡನೆ ಮಾಡುತ್ತಿದ್ದಾರೆ. ಬಜೆಟ್‌ಅನ್ನು ವಲಯವಾರು ವಿಂಗಡಣೆ ಮಾಡಲಾಗಿದೆ ಎಂದು ಹೇಳಿದ್ದಾರೆ.
“ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳಿಗೆ ಮಾತ್ರವೇ ಸೀಮಿತವಾಗಿಲ್ಲ. ನಾನಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮಾಡುತ್ತಿದೆ. ನಮ್ಮ ಸಂಕಲ್ಪಗಳನ್ನು ಜನರ ಮುಂದಿಡುವ ಜವಾಬ್ದಾರಿಯೊಂದಿಗೆ ಬಜೆಟ್ ಮಂಡಿಸುತ್ತಿದ್ದೇನೆ. ಬುದ್ಧ, ಬಸವ, ನಾರಾಯಣಗುರು ಅವರ ಆಶಯಗಳೊಂದಿಗೆ ನಾವು ಕೆಲಸ ಮಾಡುತ್ತಿದ್ದೇವೆ” ಎಂದು ಹೇಳಿರುವ ಸಿದ್ದರಾಮಯ್ಯ ಅವರು ಕುವೆಂಪು ಅವರ ಕವನ ಓದಿದ್ದಾರೆ.
ಎತ್ತಿನಹೊಳೆ ಯೋಜನೆಗೆ 550 ರೂ. ವೆಚ್ಚ ಮಾಡಲಾಗುತ್ತಿದೆ. ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ ವಿತರಣೆ ಈ ವರ್ಷವೂ ಮುಂದುವರೆಯಲಿದೆ. ಎಚ್.ಎನ್ ವ್ಯಾಲಿ ಎನೇ ಹಂತದ ಕಾಮಗಾರಿಯನ್ನು 74 ಕೋಟಿ ರೂ. ಮೊತ್ತದಲ್ಲಿ ನಡಸಲಾಗುತ್ತದೆ. ಆ ಮೂಲಕ 24 ಕೆರೆಗಳಿಗೆ ನೀರು ತುಂಬಿಸಲಾಗುತ್ತದೆ” ಎಂದು ಹೇಳಿದ್ದಾರೆ.