ರಾಜ್ಯ ಬಜೆಟ್‌ | ಜಾನುವಾರು ಸಾವಿಗೆ ನೀಡಲಾಗುವ ಪರಿಹಾರ ಹೆಚ್ಚಳ

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ತಮ್ಮ 16ನೇ ಬಜೆಟ್‌ ಮಂಡನೆ ಮಾಡಿದ್ದಾರೆ. 4 ಲಕ್ಷ ಕೋಟಿ ರೂ.ಮೊತ್ತದ ಬಜೆಟ್‌ ಮಂಡನೆ ಮಾಡಿದ್ದಾರೆ. ಬಜೆಟ್‌ಅನ್ನು ವಲಯವಾರು ಹಂಚಿಕೆ ಮಾಡಿ, ಮಂಡಿಸಿದ್ದಾರೆ.

ರಾಜ್ಯ ಸರ್ಕಾರವು ಪಶುಸಂಗೋಪನಾ ವಲಯಕ್ಕೆ ಹೆಚ್ಚಿನ ಮಹತ್ವ ನೀಡಿದ್ದು, ರೈತರಿಗೆ ಹೆಚ್ಚಿನ ನೆರವು ನೀಡಲಿದೆ. ಜಾನುವಾರುಗಳ ಪೋಷಣೆಯಲ್ಲಿ ರೈತರಿಗೆ ಬೆಂಬಲ ನೀಡುತ್ತದೆ. ಜಾನುವಾರುಗಳ ಆಕಸ್ಮಿಕ ಸಾವಿನ ಸಂದರ್ಭದಲ್ಲಿ ನೀಡಲಾಗುವ ಪರಿಹಾರದ ಮೊತ್ತವನ್ನು ಹೆಚ್ಚಿಸಲಾಗಿದೆ ಎಂದಿದ್ದಾರೆ.

ಪಶುಸಂಗೋಪನೆ ವಲಯಕ್ಕೆ ನೀಡಲಾಗಿರುವ ಬಜೆಟ್‌ನ ಪ್ರಮುಖ ಅಂಶಗಳು;

Advertisements
  1. ಜಾನುವಾರುಗಳ ಆಕಸ್ಮಿಕ ಸಾವಿನಿಂದ ರೈತರು ಅನುಭವಿಸುತ್ತಿರುವ ಸಂಕಷ್ಟ ನಿವಾರಣೆಗೆ ಅನುಗ್ರ” ಯೋಜನೆ ಜಾರಿ
  2. ಅನುಗ್ರಹ ಯೋಜನೆಯಡಿ ಹಸು, ಎಮ್ಮೆ ಹಾಗೂ ಎತ್ತುಗಳ ಸಾವಿ ಸಂದರ್ಭದಲ್ಲಿ ನೀಡಲಾಗುವ ಪರಿಹಾರದ ಮೊತ್ತವನ್ನು 10,000 ರೂ. ಗಳಿಂದ 15,000 ರೂ.ಗಳಿಗೆ ಹೆಚ್ಚಳ.
  3. ಕುರಿ/ಮೇಕೆಗಳಿಗೆ ನೀಡಲಾಗುತ್ತಿರುವ ಪರಿಹಾರ ಮೊತ್ತ 5,000 ರೂ. ಗಳಿಂದ 7,500 ರೂ. ಗಳಿಗೆ ಏರಿಕೆ3-6 ತಿಂಗಳ ಕುರಿ/ಮೇಕೆ ಮರಿಗಳು ಸಾವನ್ನಪ್ಪಿದರೆ, ನೀಡಲಾಗುವ ಪರಿಹಾರ ಮೊತ್ತ 3,500 ರೂ.ಗಳಿಂದ 5,000 ರೂ.ಗಳಿಗೆ ಹೆಚ್ಚಳ.
  4. ಕಳೆದ ಎರಡು ವರ್ಷಗಳಲ್ಲಿ 60 ಹೊಸ ಪಶು ಚಿಕಿತ್ಸಾಲಯಗಳನ್ನು ಕಾರ್ಯಾರಂಭಗೊಳಿಸಲಾಗಿದೆ. 2025-26ನೇ ಸಾಲಿನಲ್ಲಿ
    50 ನೂತನ ಪಶು ಚಿಕಿತ್ಸಾಲಯಗಳನ್ನು ಪ್ರಾರಂಭಕ್ಕೆ ಕ್ರಮ.
  5. 2025-26ನೇ ಸಾಲಿನಲ್ಲಿ 100 ಪಶು ವೈದ್ಯಕೀಯ ಸಂಸ್ಥೆಗಳ ನೂತನ ಕಟ್ಟಡಗಳನ್ನು ನಬಾರ್ಡ್‌ ಸಹಯೋಗದೊಂದಿಗೆ ನಿರ್ಮಾಣ.
  6. ಅಮೃತ್‌ ಮಹಲ್‌ ಕಾವಲುಗಳಲ್ಲಿನ ಭೂ ಒತ್ತುವರಿ ತಡೆ ಹಾಗೂ ಅಮೃತ್‌ ಮಹಲ್‌ ರಾಸುಗಳಿಗೆ ಮೇವು ಲಭ್ಯವಾಗುವಂತೆ ಮಾಡಲು, ಅರಣ್ಯ ಇಲಾಖೆ ಹಾಗೂ ಮನರೇಗಾ ಸಹಯೋಗದೊಂದಿಗೆ ಮೇವಿನ ಮರಗಳ ನೆಡುತೋಪು ಅಭಿವೃದ್ಧಿ.
  7. ದೇಶಿ ದನದ ತಳಿಗಳಾದ ಹಳ್ಳಿಕಾರ್‌, ಕಿಲಾರಿ, ಅಮೃತ್‌ ಮಹಲ್‌ ಹಾಗೂ ಬಂಡೂರು ಕುರಿ ತಳಿಯ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ 2 ಕೋಟಿ ರೂ. ಅನುದಾನ.
  8. ಆಧುನಿಕ ಕುರಿ ಸಾಕಾಣಿಕೆ ಪದ್ಧತಿಗಳು ಮತ್ತು ನೈಸರ್ಗಿಕ ವಿಕೋಪಗಳ ಸಂದರ್ಭದಲ್ಲಿ ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ವಲಸೆ ಕುರಿಗಾರರಿಗೆ ಕರ್ನಾಟಕ ಪಶುವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದಲ್ಲಿ ತರಬೇತಿ.
  9. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ‘ನಂದಿನಿ ಬ್ರ್ಯಾಂಡ್‌ನ ಮಾರುಕಟ್ಟೆಯನ್ನು ವಿಸ್ತರಣೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X