ಬಜೆಟ್‌ 23-24 : ಇಂಧನ, ಆರೋಗ್ಯ ಕ್ಷೇತ್ರಗಳಿಗೆ ನೀಡಿರುವ ಅನುದಾನ ಮತ್ತು ಕೊಡುಗೆಗಳು

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್‌ನಲ್ಲಿ ಇಂಧನ ಇಲಾಖೆಗೆ 22,773 ಕೋಟಿ ರೂ. ಮೀಸಲಿಡಲಾಗಿದೆ. ಹಾಗೆಯೇ ಆರೋಗ್ಯ ಕ್ಷೇತ್ರಗಳಿಗೆ ಏನೇನು ನೀಡಿದ್ದಾರೆ ಎಂಬುದದ ಬಗ್ಗೆ ಇಲ್ಲಿದೆ ಮಾಹಿತಿ.

ಇಂಧನ ಇಲಾಖೆ

  • ಗೃಹ ಜ್ಯೋತಿ ಯೋಜನೆಯಡಿ ರಾಜ್ಯದಲ್ಲಿ ಪ್ರತಿ ಮನೆಗೆ ಅವರ ವಾರ್ಷಿಕ ಸರಾಸರಿ ಬಳಕೆಯ ಜೊತೆಗೆ ಗರಿಷ್ಠ ಶೇ 10ರಷ್ಟು ಹೆಚ್ಚುವರಿ ಯೂನಿಟ್‌ಗಳವರೆಗಿನ ಬಳಕೆಯನ್ನು ಉಚಿತವಾಗಿ ನೀಡಲಾಗುತ್ತದೆ. ಈ ಯೋಜನೆಗೆ ವಾರ್ಷಿಕ 13,910 ಕೋಟಿ ರೂ ವೆಚ್ಚದಲ್ಲಿ ಜಾರಿಗೊಳಿಸಲಾಗುವುದು
  • ವಿದ್ಯುತ್‌ ಸರಬರಾಜು ಕಂಪನಿಗಳ ಆರ್ಥಿಕ ಪರಿಸ್ಥಿತಿಯ ಸುಧಾರಣೆಗಾಗಿ ಮತ್ತು ಗುಣಮಟ್ಟದ ವಿದ್ಯುತ್‌ ಉತ್ಪಾದನೆ, ಪ್ರಸರಣೆ ಮತ್ತು ಸರಬರಾಜಿಗೆ ಸಂಬಂಧಿಸಿದಂತೆ 2035ರವರೆಗಿನ ಮುನ್ನೋಟವನ್ನು ಸಿದ್ಧಪಡಿಸಲಾಗಿದೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ

Advertisements
  • ಈ ಬಾರಿಯ ಬಜೆಟ್‌ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 14,950 ಕೋಟಿ ರೂ. ಮೀಸಲಿಡಲಾಗಿದೆ.
  • ಏಕಬಳಕೆಯ ಡಯಾಲೈಸರ್‌ಗಳನ್ನು ಎಲ್ಲ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸುವ ಮೂಲಕ ಸೇವೆಯ ಗುಣಮಟ್ಟಯ ಸುಧಾರಣೆ. ರಾಜ್ಯದಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ 173 ಡಯಾಲಿಸಿಸ್‌ ಕೇಂದ್ರಗಳನ್ನು 219ಕ್ಕೆ ಹೆಚ್ಚಳ. ಇದಕ್ಕಾಗಿ 92 ಕೋಟಿ ರೂ. ನೀಡಿಕೆ.
  • ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವಿಕೆಗಾಗಿ ಸಿಹೆಚ್‌ಸಿಗಳನ್ನು ಕಾರ್ಯಗತಗೊಳಿಸಲು ಬೇಕಿರುವ ಅಗತ್ಯ ಉಪಕರಣಗಳು ಮತ್ತು ಮಾನವ ಸಂಪನ್ಮೂಲಗಳನ್ನು ಒದಗಿಸಲು 70 ಕೋಟಿ ರೂ.ಗಳ ನೀಡಿಕೆ. 
  • ರಾಜ್ಯದಲ್ಲಿ ನವಜಾತ ಶಿಶುಗಳು, ಮಕ್ಕಳು, ಹದಿಹರೆಯದವರು, ಗರ್ಭಿಣಿಯರು, ತಾಯಂದಿರು ಮತ್ತು ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ರಕ್ತಹೀನತೆ ಮತ್ತು ಅಪೌಷ್ಟಿಕತೆಯನ್ನು ನಿವಾರಿಸಲು ಸಮಗ್ರವಾದ ಪರೀಕ್ಷೆ, ಚಿಕಿತ್ಸೆ, ಅರಿವು ಮೂಡಿಸುವಿಕೆ ಮತ್ತು ಆರೋಗ್ಯ ಕಾರ್ಯಕರ್ತರ ಸಾಮರ್ಥ್ಯ ಬಲವರ್ಧನೆಗೆ ಕಾರ್ಯಕ್ರಮವನ್ನು ಜಾರಿಗೆ 25 ಕೋಟಿ ರೂ. ನೀಡಿಕೆ.
  • ನಿಮ್ಹಾನ್ಸ್‌ ಸಹಯೋಗದೊಂದಿಗೆ ಮೆದುಳಿನ ಆರೋಗ್ಯ ಆರೈಕೆ ಸೇವೆಗಳನ್ನು ಉತ್ತೇಜಿಸಲು ಮೂರು ಜಿಲ್ಲೆಗಳಲ್ಲಿ ಕೈಗೊಂಡಿರುವ ʻಬ್ರೈನ್‌ ಹೆಲ್ತ್‌ ಇನಿಶಿಯೇಟಿವ್‌ʼ ಎಂಬ ವಿಶಿಷ್ಟ ಯೋಜನೆಯನ್ನು ಇಡೀ ರಾಜ್ಯಕ್ಕೆ ಹಬ್‌ ಮತ್ತು ಸ್ಪೋಕ್‌ ಮಾದರಿಯಲ್ಲಿ ವಿಸ್ತರಿಸಲು 25 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನ.
  • ʻಆಶಾಕಿರಣʼ ಎಂಬ ಕಾರ್ಯಕ್ರಮದಡಿಯಲ್ಲಿ ಅಭಿಯಾನ ರೂಪದಲ್ಲಿ ಕಣ್ಣಿನ ಶಿಬಿರಗಳು, ಕನ್ನಡಕ ವಿತರಣೆ ಮತ್ತು ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗಳ ಚಟುವಟಿಕೆಗಳನ್ನು ಹಂತ ಹಂತವಾಗಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಡೆಸಲಾಗುವುದು. 2023-24ನೇ ಸಾಲಿನಲ್ಲಿ ಚಿತ್ರದುರ್ಗ, ರಾಯಚೂರು, ಉತ್ತರ ಕನ್ನಡ ಮತ್ತು ಮಂಡ್ಯ ಜಿಲ್ಲೆಗಳಲ್ಲಿ 21 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭ. 
  • ಸಮಾಜದ ದುರ್ಬಲ ವರ್ಗಗಳಲ್ಲಿ ಕ್ಷಯರೋಗವನ್ನು ಪ್ರಾರಂಭಿಕ ಹಂತದಲ್ಲಿಯೇ ಪತ್ತೆಹಚ್ಚಲು ಸಮುದಾಯ ಆಧಾರಿತ ತಪಾಸಣಾ ಚಟುವಟಿಕೆಗಳನ್ನು ಕೈಗೊಳ್ಳಲಾಗುವುದು. ರಾಜ್ಯದ ಎಂಟು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ, ಪ್ರತಿ ಜಿಲ್ಲೆಗೆ ಎರಡರಂತೆ ಕೈಚಾಲಿತ-ಕ್ಷ-ಕಿರಣ ಉಪಕರಣ ಒದಗಿಸುವುದು. ಪ್ರತಿ ಕ್ಷ ಕಿರಣ ಯಂತ್ರಕ್ಕೆ 20 ಲಕ್ಷ ರೂ. ದಂತೆ ಒಟ್ಟು ಮೂರು ಕೋಟಿ ರೂ. ಒದಗಿಸುವುದು.
  • ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಹೊಂದಿರುವ ರೋಗಿಗಳನ್ನು ಪತ್ತೆಹಚ್ಚಲು ಮತ್ತು ಅಗತ್ಯ ಔಷಧಗಳನ್ನು ಅವರ ಮನೆ ಬಾಗಿಲಿಗೆ ತಲುಪಿಸಲು ಪ್ರಾಯೋಗಿಕವಾಗಿ ರಾಜ್ಯದ ನಾಲ್ಕು ವಿಭಾಗಗಳ ಎಂಟು ಜಿಲ್ಲೆಗಳಲ್ಲಿ ಸಮಗ್ರ ತಪಾಸಣೆ ಕಾರ್ಯಕ್ರಮವನ್ನು ಜಾರಿ.
  • ಕರ್ನಾಟಕ ರತ್ನ ಡಾ. ಪುನೀತ್‌ ರಾಜ್‌ಕುಮಾರ್‌ ಅವರ ಸ್ಮರಣಾರ್ಥವಾಗಿ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು ಸ್ವಯಂಚಾಲಿತ ಬಾಹ್ಯ ಡಿಫಿಬ್ರಿಲೇಟರ್‌ಗಳು (ಎಇಡಿ)ಗಳನ್ನು ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲಾಗುವುದು. ಇದಕ್ಕಾಗಿ ಆರು ಕೋಟಿ ರೂ. ಅನುದಾನ ನೀಡಿಕೆ.
  • ರಾಜ್ಯದಲ್ಲಿ 15 ಸಿ.ಟಿ ಸ್ಕ್ಯಾನಿಂಗ್‌ ಮತ್ತು 6 ಎಂ.ಆರ್‌.ಐ ಸ್ಕ್ಯಾನಿಂಗ್‌ ಕೇಂದ್ರಗಳನ್ನು ಕೆಲವು ಜಿಲ್ಲಾಸ್ಪತ್ರೆಗಳಲ್ಲಿ ಈಗಾಗಲೇ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಿ, ಉಚಿತ ಪ್ರಯೋಗಾಲಯ ಸೇವೆಗಳನ್ನು ನೀಡಲಾಗುತ್ತಿದೆ. ಈ ಸೇವೆಗಳನ್ನು ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆಗಳಿಗೆ ವಿಸ್ತರಣೆ.
  • ರಾಜ್ಯವು ಈಗಾಗಲೇ ಮಾಹಿತಿ ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿರುವಂತೆ ಆರೋಗ್ಯ ತಂತ್ರಜ್ಞಾನದ ಆವಿಷ್ಕಾರಗಳ ಅಳವಡಿಕೆಯಲ್ಲಿಯೂ ಪ್ರಮುಖ ಕೇಂದ್ರವಾಗುವ ಗುರಿ ಹೊಂದಿದೆ. ಈ ನಿಟ್ಟಿನಲ್ಲಿ ಎಂಟು ಕೋಟಿ ರೂ.ಗಳ ವೆಚ್ಚದಲ್ಲಿ ಕರ್ನಾಟಕ ಆರೋಗ್ಯ ತಂತ್ರಜ್ಞಾನ ಪ್ರಯೋಗಾಲಯ ಸ್ಥಾಪನೆ.

ರಾಜ್ಯದಲ್ಲಿ ಆಯುಷ್ಮಾನ್‌ ಭಾರತ್‌ ಡಿಜಿಟಲ್‌ ಮಿಷನ್‌ ಯೋಜನೆ ಹಾಗೂ ಆರೋಗ್ಯ ದಾಖಲಾತಿಗಳ ಡಿಜಿಟಲೀಕರಣ ಸೇರಿದಂತೆ ಇಲಾಖೆಯ ಇನ್ನಿತರ ಎಲ್ಲ ಅಂತರ್ಜಾಲ ಉಪಕ್ರಮಗಳನ್ನು ಅನುಷ್ಠಾನ ಮಾಡಲು ಕರ್ನಾಟಕ ಡಿಜಿಟಲ್‌ ಹೆಲ್ತ್‌ ಸೊಸೈಟಿ ಸ್ಥಾಪನೆ.          

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X