ರಾಜ್ಯ ಬಜೆಟ್ ದೇಶಕ್ಕೆ ಮಾದರಿ, ಬಿಜೆಪಿಯವರು ಸುಳ್ಳು ಹೇಳದೆ ಇನ್ನೇನು ಮಾಡುತ್ತಾರೆ: ಡಿ.ಕೆ. ಶಿವಕುಮಾರ್

Date:

Advertisements

ಸಿಎಂ ಸಿದ್ದರಾಮಯ್ಯ ಅವರು ದೇಶಕ್ಕೆ ಮಾದರಿ ಬಜೆಟ್ ಮಂಡನೆ ಮಾಡಿದ್ದು, ಬಿಜೆಪಿಯವರು ಇದರ ಬಗ್ಗೆ ಸುಳ್ಳು ಹೇಳದೆ ಇನ್ನೇನು ಮಾಡಲು ಸಾಧ್ಯ? ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಶನಿವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿ, “ಪಾಪ ಅವರಾದರೂ (ಬಿಜೆಪಿಯವರು) ಏನು ಮಾಡುತ್ತಾರೆ. ಈ ರೀತಿ ಹೇಳುವುದು ಬಿಟ್ಟರೆ ಇನ್ನೇನು ಮಾಡಲು ಸಾಧ್ಯ? ನಮ್ಮ ಬಜೆಟ್ ಅನ್ನು ಅವರು ಕಣ್ಣಾರೆ ಓದಿದ್ದು, ಕಿವಿಯಾರೆ ಕೇಳಿದ್ದು, ಬಾಯಲ್ಲಿ ಇನ್ನೇನು ಹೇಳಲು ಸಾಧ್ಯ? ಕಣ್ಣು ಕಿವಿಯಲ್ಲಿ ಸುಳ್ಳು ಹೇಳಲು ಆಗುವುದಿಲ್ಲ. ಕೇವಲ ಬಾಯಲ್ಲಿ ಮಾತ್ರ ಸುಳ್ಳು ಹೇಳಲು ಸಾಧ್ಯ. ಹೀಗಾಗಿ ಹೇಳುತ್ತಿದ್ದಾರೆ” ಎಂದು ವ್ಯಂಗ್ಯವಾಡಿದರು.

“ಸಿಎಂ ಸಿದ್ದರಾಮಯ್ಯ ಅವರು ಐತಿಹಾಸಿಕ ಹಾಗೂ ದೇಶಕ್ಕೆ ಮಾದರಿ ಬಜೆಟ್ ಕೊಟ್ಟಿದ್ದಾರೆ. ಮುಂದೆ ಬೇರೆ ಬೇರೆ ರಾಜ್ಯಗಳು ನಮ್ಮ ಬಜೆಟ್ ಪಾಲನೆ ಮಾಡಲಿವೆ. ಈ ಬಜೆಟ್ ಸಮಾಜದ ಎಲ್ಲಾ ವರ್ಗದವರಿಗಾಗಿ ಮಾಡಿರುವ ಬಜೆಟ್. ಈ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿಗಳಿಗೆ ಹಾಗೂ ಇದಕ್ಕೆ ಸಹಕಾರ ಕೊಟ್ಟ ನನ್ನ ಸಹೋದ್ಯೋಗಿಗಳಿಗೆ ಧನ್ಯವಾದ ತಿಳಿಸುತ್ತೇನೆ” ಎಂದರು.

Advertisements

ಬ್ರ್ಯಾಂಡ್ ಬೆಂಗಳೂರು ಜಾರಿ

“ಬ್ರ್ಯಾಂಡ್ ಬೆಂಗಳೂರಿನ ಮಹತ್ವದ ಯೋಜನೆಗಳಿಗೆ ಅನುದಾನ ನೀಡಲಾಗಿದೆ. ರಾಜಧಾನಿಯಲ್ಲಿರುವ 1.40 ಕೋಟಿ ಜನರಿಗೆ ಅನುಕೂಲವಾಗಲಿದೆ. ಟನಲ್ ರಸ್ತೆ ಆಗಿಯೇ ಆಗುತ್ತೆ. ಮುಂಬರುವ ಎಲ್ಲಾ ಮೆಟ್ರೋ ಮಾರ್ಗಗಳಲ್ಲಿ ಡಬಲ್ ಡೆಕ್ಕರ್ ಮೇಲ್ಸೇತುವೆ ಮಾಡಲಾಗುವುದು. ಪಾಲಿಕೆ ಹಾಗೂ ಬಿಎಂಆರ್ ಸಿಎಲ್ ಇದರ ವೆಚ್ಚವನ್ನು 50:50 ಅನುಪಾತದಲ್ಲಿ ಭರಿಸಲಿವೆ. ಇನ್ನು ರಾಜಕಾಲುವೆ ಅಕ್ಕಪಕ್ಕದಲ್ಲಿ 50 ಅಡಿ ಬಫರ್ ವಲಯದಲ್ಲಿ 300 ಕಿ.ಮೀ ಉದ್ದದಷ್ಟು ರಸ್ತೆ ನಿರ್ಮಾಣ ಮಾಡಲಾಗುವುದು. ಈ ಯೋಜನೆಗೆ 3 ಸಾವಿರ ಕೋಟಿ ಮೀಸಲಿಡಲಾಗಿದೆ. ಬಫರ್ ರಸ್ತೆ, ಮೇಲ್ಸೇತುವೆ, ಟನಲ್ ರಸ್ತೆಗಳ ಮೂಲಕ ಬೆಂಗಳೂರಿನಲ್ಲಿ 700-800 ಕಿ.ಮೀ ಉದ್ದದಷ್ಟು ಹೊಸ ರಸ್ತೆ ನಿರ್ಮಾಣ ಮಾಡುತ್ತಿದ್ದೇವೆ. ಬೆಂಗಳೂರಿನ ಅಭಿವೃದ್ಧಿಗೆ ಇನ್ನೇನು ಆಲೋಚನೆ ಮಾಡಲು ಸಾಧ್ಯ? ಜನರ ಸಮಸ್ಯೆಗೆ ಪರಿಹಾರ ನೀಡಲು ಸರ್ಕಾರ ಸಾಲ ಮಾಡಿಯಾದರೂ ಈ ಯೋಜನೆ ಮಾಡುತ್ತೇವೆ. ಇಡೀ ವಿಶ್ವ ಬೆಂಗಳೂರಿನತ್ತ ತಿರುಗಿ ನೋಡುತ್ತಿದ್ದು, ಈ ನಗರಕ್ಕೆ ನಮ್ಮ ಸರ್ಕಾರ ಆದ್ಯತೆ ನೀಡಿದೆ” ಎಂದು ತಿಳಿಸಿದರು.

ಸಿಂಗ್ ಅವರಿಗೆ ಇನ್ನಷ್ಟು ಮಾನ್ಯತೆ ನೀಡಬೇಕು

ಬೆಂಗಳೂರು ವಿವಿಗೆ ಮನಮೋಹನ್ ಸಿಂಗ್ ಹೆಸರು ಇಟ್ಟಿರುವ ಬಗ್ಗೆ ವಿವಾದ ಕೇಳಿಬರುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಕೆ, “ಅವರು ದೀನದಯಾಳ್ ಹೆಸರು ಇಡುವಾಗ ನಾವು ಮನಮೋಹನ್ ಸಿಂಗ್ ಹೆಸರು ಇಡಬಾರದೆ? ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗುವ ಮೇಲ್ಸೇತುವೆ, ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆ, ನೆಲಮಂಗಲ ಮೇಲ್ಸೇತುವೆ, ಜೆ.ಎನ್ ನರ್ಮ್ ಯೋಜನೆ, ನರೇಗಾ, ಆಹಾರ ಭದ್ರತಾ ಕಾಯ್ದೆ, ಶಿಕ್ಷಣ ಹಕ್ಕು, ಮಾಹಿತಿ ಹಕ್ಕು, ಆಶಾ ಕಾರ್ಯಕರ್ತ ಯೋಜನೆ ಜಾರಿಗೆ ತಂದವರು ಇವರು. ಬಿಜೆಪಿಯವರು ಇಂತಹ ಯಾವುದಾದರೂ ಒಂದು ಯೋಜನೆ ಮಾಡಿದ್ದಾರಾ? ದೇಶ ಹಾಗೂ ಕರ್ನಾಟಕ ರಾಜ್ಯದ ಕೊಡುಗೆಗೆ ಮನಮೋಹನ್ ಸಿಂಗ್ ಅವರು ಕೊಟ್ಟಿರುವ ಕೊಡುಗೆಗೆ ಅವರಿಗೆ ಇನ್ನಷ್ಟು ಮಾನ್ಯತೆ ನೀಡಬೇಕು” ಎಂದು ಹೇಳಿದರು.

ಕಲ್ಯಾಣ ಕರ್ನಾಟಕಕ್ಕೆ ಲಾಟರಿ

ಕಲ್ಯಾಣ ಕರ್ನಾಟಕ ಪ್ರವಾಸದ ಬಗ್ಗೆ ಕೇಳಿದಾಗ, “ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಲಾಟರಿ ಹೊಡೆದಿದೆ. ಖರ್ಗೆ ಅವರು ಆರ್ಟಿಕಲ್ 371ಜೆ ಜಾರಿಗೆ ತಂದರು. ಇನ್ನು ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ಪ್ರತಿ ವರ್ಷ 5 ಸಾವಿರ ಕೋಟಿ ನೀಡುತ್ತಿದ್ದೇವೆ. ಇಂದು ಕೂಡ ಸಚಿವ ಪ್ರಿಯಾಂಕ್ ಖರ್ಗೆ, ಸಂಸದರಾದ ರಾಧಾಕೃಷ್ಣ ಅವರ ಜತೆ ಜೇವರ್ಗಿಗೆ ತೆರಳಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುವುದು” ಎಂದರು.

ನೀರಾವರಿ ಇಲಾಖೆಗೆ ಅನುದಾನ ಕಡಿಮೆಯಾಗಿದೆ ಎಂದು ಕೇಳಿದಾಗ, “ನೀರಾವರಿ ಇಲಾಖೆಗೆ ಕಳೆದ ಬಾರಿಗಿಂತ ರೂ. 2 ಸಾವಿರ ಕೋಟಿ ಹೆಚ್ಚಿಗೆ ನೀಡಲಾಗಿದೆ. ನೀರಾವರಿಗೆ ನಾವು ಬೇರೆ ಯೋಜನೆ ರೂಪಿಸಿದ್ದೇವೆ. ಮಧ್ಯದಲ್ಲಿ ಬೇರೆ ಘೋಷಣೆ ಆಗಲಿದೆ, ಮಂಡಳಿಗಳಲ್ಲಿ ಕೆಲವು ತೀರ್ಮಾನ ಮಾಡಿದ್ದೇವೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X